ಮೈಸೂರು : ಕಾರ್ಮಿಕ ನ್ಯಾಯಾಲಯವನ್ನು ಹಳೆಯ ಕೋರ್ಟ್ ಕಟ್ಟಡಕ್ಕೆ ಸ್ಥಳಾಂತರ ಮಾಡಿದ್ದನ್ನು ಖಂಡಿಸಿ ವಕೀಲರುಗಳು ಇಂದು ಪ್ರತಿಭಟನೆ ನಡೆಸಿದ್ದಾರೆ.
ಹಳೇ ಕೋರ್ಟ್ ಕಟ್ಟಡದಲ್ಲಿನ ಕಾರ್ಮಿಕ ನ್ಯಾಯಾಲಯದಲ್ಲಿ ಯಾವುದೇ ಮೂಲಸೌಕರ್ಯಗಳು ಇಲ್ಲ., ಏನೊಂದು ಮಾಹಿತಿಯನ್ನು ನೀಡದೆ ಏಕಾಏಕೀ ಕಟ್ಟಡವನ್ನು ಸ್ಥಳಾಂತರ ಮಾಡಿರುವುದು ಸರಿಯಲ್ಲವೆಂದು ಗಾಂಧಿ ಪುತ್ಥಳಿ ಎದುರು ಜಮಾಯಿಸಿದ ವಕೀಲರು ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನೆಯಲ್ಲಿ ವಕೀಲರಾದ ಪ್ರಮೋದ್ ಚಿಕ್ಕಮಣ್ಣೂರು, ಜಗದೀಶ್ ಇನ್ನಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.





