Mysore
21
scattered clouds

Social Media

ಶುಕ್ರವಾರ, 06 ಫೆಬ್ರವರಿ 2026
Light
Dark

Covid: ರಾಮನಗರದಲ್ಲಿ ಮೊದಲ ಕೊವಿಡ್‌ ಪ್ರಕರಣ ಪತ್ತೆ

ರಾಮನಗರ ಜಿಲ್ಲೆಯಲ್ಲಿ ಕೊರೊನಾ ವೈರಸ್‌ನ ಮೊದಲ ರೂಪಾಂತರಿ ಜೆಎನ್‌ 1 ಮೊದಲ ಪ್ರಕರಣ ಬೆಳಕಿಗೆ ಬಂದಿದೆ. ಜಿಲ್ಲೆಯ ಬೈರಮಂಗಲ ಗ್ರಾಮದಲ್ಲಿನ ಇಂಜಿನಿಯರಿಂಗ್‌ ವಿದ್ಯಾರ್ಥಿಯಲ್ಲಿ ಜೆಎನ್‌ 1 ಪತ್ತೆಯಾಗಿದ್ದು, ಯುವಕನನ್ನು ಎರಡು ದಿನಗಳ ಕಾಲ ಐಸೋಲೇಷನ್‌ ಮಾಡಿ ಅಗತ್ಯ ಚಿಕಿತ್ಸೆ ನೀಡಲಾಗುವುದು ಎಂದು ಡಿಎಚ್‌ಒ ನಿರಂಜನ್‌ ತಿಳಿಸಿದ್ದಾರೆ.

ಬೈರಮಂಗಲ ಗ್ರಾಮದಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದ ಕೊವಿಡ್‌ ಸೋಂಕು ತಪಾಸಣೆ ವೇಳೆ ವಿದ್ಯಾರ್ಥಿಯಲ್ಲಿ ಸೋಂಕು ಇರುವುದು ಕಂಡುಬಂದಿದೆ.

ಕೋವಿಡ್ ಮಾರ್ಗಸೂಚಿ ಪ್ರಮುಖ ಅಂಶಗಳು?
ಕೇರಳ, ತಮಿಳುನಾಡು ರಾಜ್ಯಗಳ ಗಡಿ ಭಾಗದಲ್ಲಿ ತಪಾಸಣೆ ಹೆಚ್ಚಳ
ಕೊವಿಡ್‌ ನಿರ್ಬಂಧ ಅವಶ್ಯಕತೆ ಇಲ್ಲ
ಗಡಿ ಜಿಲ್ಲೆಗಳಲ್ಲಿ ಅಗತ್ಯ ಸಂಖ್ಯೆಯ ಪರೀಕ್ಷೆಗಳನ್ನು ಹೆಚ್ಚಿಸಬೇಕು
ಗಡಿ ಜಿಲ್ಲೆಗಳ ಕೋವಿಡ್ ಪರೀಕ್ಷಾ ವರದಿಯನ್ನು ಆರೋಗ್ಯ ಇಲಾಖೆಗೆ ಸಲ್ಲಿಸಲು ಜಿಲ್ಲಾಡಳಿತಗಳಿಗೆ ಸೂಚನೆ
ತೀವ್ರ ಶ್ವಾಸಕೋಶ, ಉಸಿರಾಟದ ಸಮಸ್ಯೆ ಇರುವವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಬೇಕು
ರೋಗ ಲಕ್ಷಣ ಇರುವವರನ್ನು ಕೊವಿಡ್‌ ಪರಿಶೀಲನೆಗೆ ಒಳಪಡಿಸಬೇಕು
ಸರ್ಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ ಪ್ರತ್ಯೇಕ ಕೊಠಡಿ ಸ್ಥಾಪನೆಗೆ ಸೂಚನೆ
ಡಿ.3, 4ನೇ ವಾರದಲ್ಲಿ ಮಾಕ್ ಡ್ರಿಲ್‌ ಮುಕ್ತಾಯಗೊಳಿಸಲು ಸೂಚನೆ

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!