ನೆರೆ ರಾಜ್ಯ ಕೇರಳದಲ್ಲಿ ಕೊವಿಡ್‌ನ ಉಪತಳಿ ಜೆಎನ್ 1 ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕರ್ನಾಟಕದಲ್ಲಿಯೂ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಇಂದು ಚಿಕ್ಕಮಗಳೂರು ಹಾಗೂ ತುಮಕೂರು ಜಿಲ್ಲೆಗಳಲ್ಲಿಯೂ ಮೊದಲ ಕೊವಿಡ್ ಕೇಸ್ ಪತ್ತೆಯಾಗಿದೆ.
ಇನ್ನು ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಕಳೆದ ಐದು ದಿನಗಳ ಹಿಂದೆಯೇ ಕೊವಿಡ್‌ಗೆ 64 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಹೀಗೆ ರಾಜ್ಯದ ಎಲ್ಲೆಡೆ ಕೊವಿಡ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಮೈಸೂರಿನಲ್ಲಿ ಶುಕವನವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗುತ್ತಿದೆ.
ಈ ವಾರಾಂತ್ಯದಿಂದ ಕ್ರಿಸ್‌ಮಸ್ ಪ್ರಯುಕ್ತ ಹಾಗೂ ಹೊಸ ವರ್ಷದ ಪ್ರಯುಕ್ತ ಹಲವಾರು ಪ್ರವಾಸಿಗರು ಕೇರಳದಿಂದ ಮೈಸೂರಿಗೆ ಆಗಮಿಸಲಿದ್ದು ಈ ಮುನ್ನೆಚ್ಚರಿಕಾ ಕ್ರಮವನ್ನು ಕೈಗೊಳ್ಳಲಾಗಿದೆ. ನಂಜನಗೂಡು ರಸ್ತೆಯಲ್ಲಿರುವ ಗಣಪತಿ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿರುವ ಶುಕವನ, ಬೋನ್ಸಾಯಿ ವನ ಹಾಗೂ ವಿಶ್ವಂ ವಸ್ತು ಸಂಗ್ರಹಾಲಯಗಳನ್ನೂ ಸಹ ಮುಚ್ಚಲು ನಿರ್ಧರಿಸಲಾಗಿದೆ. ಶುಕವನದಲ್ಲಿ ಪ್ರಪಂಚದ ವಿವಿಧ ಭಾಗಗಳ 2000ಕ್ಕೂ ಹೆಚ್ಚು ಪ್ರಭೇದದ ಪಕ್ಷಿಗಳಿದ್ದು, ಇದು ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸಿತ್ತು. ಸದ್ಯ ಮುಚ್ಚಲಿರುವ ಶುಕವನ ಮುಂದಿನ ಆದೇಶದವರೆಗೂ ಪ್ರವಾಸಿಗರ ಭೇಟಿಗೆ ಅಲಭ್ಯವಾಗಿರಲಿದೆ.
ಕಾಡಾನೆಗಳ ಹಾವಳಿಯಿಂದಾಗಿ ಕಾಡಂಚಿನ ಜನರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಆನೆಗಳನ್ನು ಕೊಲ್ಲಲು ಅನುಮತಿ ನೀಡಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ…
ರಾಜ್ಯಸಭೆಯ ಕಲಾಪದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡುವ ಭರದಲ್ಲಿ ಕೆಲವರು ಅಂಬೇಡ್ಕರ್ ಎನ್ನುವುದನ್ನು ಈಗ ಫ್ಯಾಷನ್…
ದಾ.ರಾ. ಮಹೇಶ್ ವೀರನಹೊಸಹಳ್ಳಿ: ತಾಲ್ಲೂಕಿನ ಬನ್ನಿಕುಪ್ಪೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅವರೆಕಾಯಿ ಮಾರಾಟದಿಂದಾಗಿ ಟ್ರಾಫಿಕ್ ಜಾಮ್ ಆಗುತ್ತಿದ್ದು, ವಾಹನಗಳ ಸಂಚಾರಕ್ಕೆ…
ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20,21 ಮತ್ತು 22ರಂದು ಮೂರು ದಿನಗಳ ಕಾಲ ಜರುಗಲಿರುವ ಕನ್ನಡ ನುಡಿ ಜಾತ್ರೆ…
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…