ಹನೂರು: ಕೋವಿಡ್ ಕಾರಣದಿಂದಾಗಿ ಎರಡು ವರ್ಷಗಳಿಂದ ಸರಳವಾಗಿ ಆಚರಿಸುತ್ತಿದ್ದ ಸರ್ಕಾರಿ ಕಾರ್ಯಕ್ರಮಗಳನ್ನು ಈ ಬಾರಿಯಿಂದ ವಿಜೃಂಭಣೆಯಿಂದ ಆಚರಿಸುವಂತೆ ಸರ್ಕಾರ ನಿರ್ದೇಶಿಸಿರುವುದರಿಂದ ಈ ಬಾರಿಯ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಶಾಸಕ ಆರ್. ನರೇಂದ್ರ ತಿಳಿಸಿದರು.
ಪಟ್ಟಣದ ಲೋಕೋಪಯೋಗಿ ಇಲಾಖೆ ವಸತಿ ಗೃಹದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಸಂಬಂಧ ಗುರುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಕೋವಿಡ್ ಕಾರಣದಿಂದಾಗಿ ಎರಡು ವರ್ಷಗಳಿಂದ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳನ್ನು ಸರಳವಾಗಿ ಆಚರಿಸಿಕೊಂಡು ಬರಲಾಗುತ್ತಿತ್ತು. ಆದರೆ ಈ ಬಾರಿ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳನ್ನು ವಿಜೃಂಭಣೆಯಿಂದ ಆಚರಿಸುವಂತೆ ಸರ್ಕಾರ ಆದೇಶಿಸಿರುವುದರಿಂದ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದರು.
ನ.1 ರಂದು ಉನ್ನತೀಕರಿಸಿದ ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಬೆಳಿಗ್ಗೆ 9 ಗಂಟೆಗೆ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಎಸ್ಸೆಎಸ್ಸೆಎಲ್ಸಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿ ಶೇ. 125 ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು. ಕನ್ನಡ ನಾಡು, ನುಡಿ ಭಾಷೆ ಇತಿಹಾಸದ ಬಗ್ಗೆ ಮುಖ್ಯ ಭಾಷಣಕಾರರಿಂದ ಭಾಷಣ ಕಾರ್ಯಕ್ರಮ ಇದೆ. ಈಗಾಗಲೇ ಎಲ್ಲಾ ಇಲಾಖೆಯ ಅಧಿಕಾರಿಗಳ ಅಭಿಪ್ರಾಯ ಸಂಗ್ರಹಿಸಿ ಜವಬ್ದಾರಿಗಳನ್ನು ನೀಡಲಾಗಿದೆ ಎಂದು ತಿಳಿಸಿದರು.
ಗೈರಾಗುವವರಿಗೆ ಕಠಿಣ ಕ್ರಮ: ಸರ್ಕಾರಿ ಕಾರ್ಯಕ್ರಮಗಳಿಗೆ ಅಧಿಕಾರಿಗಳು ಹಾಗೂ ಸರ್ಕಾರಿ ನೌಕರರು ಗೈರಾಗುತ್ತಿರುವ ಬಗ್ಗೆ ಮಾಹಿತಿ ಬಂದಿದೆ. ತುರ್ತು ಅಗತ್ಯ ಸಂದರ್ಭ ಬಿಟ್ಟು ಉದ್ದೇಶಪೂರ್ವಕವಾಗಿ ಗೈರಾಗುವ ಇಲಾಖೆ ನೌಕರರ ವಿರುದ್ಧ ಕ್ರಮಕ್ಕಾಗಿ ಜಿಲ್ಲಾಧಿಕಾರಿಗೆ ಶಿಫಾರಸ್ಸು ಮಾಡಲಾಗುವುದು ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ತಹಸಿಲ್ದಾರ್ ಆನಂದಯ್ಯ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಶ್ರೀನಿವಾಸ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮೂರ್ತಿ, ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜು ಎಎಸ್ಐ ಕೃಷ್ಣ. ಕೃಷಿ ಇಲಾಖೆಯ ಸುಂದರಮ್ಮ ಆರ್ ಐ ಮಹದೇವಸ್ವಾಮಿ ಗ್ರಾಮಲೆಕ್ಕಿಗ ಶೇಷಣ್ಣ,ಎಫ್ ಪೇದೆ ರಾಘವೇಂದ್ರ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.
ಚಾಮರಾಜನಗರ : ತಾಲ್ಲೂಕಿನ ಗಂಗವಾಡಿ ಗ್ರಾಮದ ಬಳಿ ಶನಿವಾರ ರಾತ್ರಿ ಜಮೀನಿನಲ್ಲಿ ಕಟ್ಟಿ ಹಾಕಿದ್ದ ಕರುಗಳ ಮೇಲೆ ಚಿರತೆ ದಾಳಿ…
ಹೊಸದಿಲ್ಲಿ : ಭಾರತೀಯ ರೈಲ್ವೆ ಇಲಾಖೆಯು ಡಿಸೆಂಬರ್ 26ರಿಂದ ಅನ್ವಯವಾಗುವಂತೆ ಹೊಸ ರೈಲು ಟಿಕೆಟ್ ದರವನ್ನು ಪರಿಷ್ಕರಣೆ ಮಾಡಿದೆ. ಪ್ರಯಾಣಿಕರಿಗೆ…
ಗುಂಡ್ಲುಪೇಟೆ : ತಾಲ್ಲೂಕಿನ ಮುಕ್ತಿ ಕಾಲೋನಿ ಗ್ರಾಮದ ಜಮೀನೊಂದರ ಬಾಳೆ ತೋಟದಲ್ಲಿ ಹುಲಿ ಕಾಣಿಸಿಕೊಂಡಿದ್ದು ಜನರು ಕಿರುಚಾಡಿ, ಪಟಾಕಿ ಸಿಡಿಸಿದರೂ…
ಮೈಸೂರು : ವನ್ಯಜೀವಿ ಛಾಯಾಗ್ರಹಣ ಹಾಗೂ ಸಾಕ್ಷ್ಯಚಿತ್ರ ತಯಾರಕರಾಗುವ ಮೊದಲು ಕಾಡಿನ ಭಾಷೆ ಅರಿತುಕೊಂಡಿರಬೇಕು ಎಂದು ವನ್ಯಜೀವಿ ಛಾಯಾಗ್ರಾಹಕರಾದ ಕೃಪಾಕರ್…
ಮೈಸೂರು : ಮುಂಜಾನೆಯ ಚುಮುಚುಮು ಚಳಿಗೆ, ಸೂರ್ಯ ಇನ್ನೂ ಮಂಜಿನ ನಡುವೆ ಕಣ್ಣು ಬಿಡುವ ಮುನ್ನವೇ ಅರಮನೆಯ ಕೋಟೆ ಆಂಜನೇಯ…
ಕೊಪ್ಪಳ: ಯಾವುದೇ ಕ್ಷಣದಲ್ಲಿ ರಾಜ್ಯದಲ್ಲಿ ಅಧಿಕೃ ಹಸ್ತಾಂತರವಾಗಬಹುದು ಎಂದು ಶಾಸಕ ಜನಾರ್ಧನ ರೆಡ್ಡಿ ಭವಿಷ್ಯ ನುಡಿದಿದ್ದಾರೆ. ಈ ಕುರಿತು ಕೊಪ್ಪಳದಲ್ಲಿ…