ಜಿಲ್ಲೆಗಳು

ಅದ್ಧೂರಿ ಕನ್ನಡ ರಾಜ್ಯೋತ್ಸವ ನಿರ್ಧಾರ ಅಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳುವಂತೆ ಶಾಸಕ ನರೇಂದ್ರ ಸೂಚನೆ

ಹನೂರು: ಕೋವಿಡ್ ಕಾರಣದಿಂದಾಗಿ ಎರಡು ವರ್ಷಗಳಿಂದ ಸರಳವಾಗಿ ಆಚರಿಸುತ್ತಿದ್ದ ಸರ್ಕಾರಿ ಕಾರ್ಯಕ್ರಮಗಳನ್ನು ಈ ಬಾರಿಯಿಂದ ವಿಜೃಂಭಣೆಯಿಂದ ಆಚರಿಸುವಂತೆ ಸರ್ಕಾರ ನಿರ್ದೇಶಿಸಿರುವುದರಿಂದ ಈ ಬಾರಿಯ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಶಾಸಕ ಆರ್. ನರೇಂದ್ರ ತಿಳಿಸಿದರು.

ಪಟ್ಟಣದ ಲೋಕೋಪಯೋಗಿ ಇಲಾಖೆ ವಸತಿ ಗೃಹದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಸಂಬಂಧ ಗುರುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಕೋವಿಡ್ ಕಾರಣದಿಂದಾಗಿ ಎರಡು ವರ್ಷಗಳಿಂದ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳನ್ನು ಸರಳವಾಗಿ ಆಚರಿಸಿಕೊಂಡು ಬರಲಾಗುತ್ತಿತ್ತು. ಆದರೆ ಈ ಬಾರಿ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳನ್ನು ವಿಜೃಂಭಣೆಯಿಂದ ಆಚರಿಸುವಂತೆ ಸರ್ಕಾರ ಆದೇಶಿಸಿರುವುದರಿಂದ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದರು.
ನ.1 ರಂದು ಉನ್ನತೀಕರಿಸಿದ ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಬೆಳಿಗ್ಗೆ 9 ಗಂಟೆಗೆ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಎಸ್ಸೆಎಸ್ಸೆಎಲ್ಸಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿ ಶೇ. 125 ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು. ಕನ್ನಡ ನಾಡು, ನುಡಿ ಭಾಷೆ ಇತಿಹಾಸದ ಬಗ್ಗೆ ಮುಖ್ಯ ಭಾಷಣಕಾರರಿಂದ ಭಾಷಣ ಕಾರ್ಯಕ್ರಮ ಇದೆ. ಈಗಾಗಲೇ ಎಲ್ಲಾ ಇಲಾಖೆಯ ಅಧಿಕಾರಿಗಳ ಅಭಿಪ್ರಾಯ ಸಂಗ್ರಹಿಸಿ ಜವಬ್ದಾರಿಗಳನ್ನು ನೀಡಲಾಗಿದೆ ಎಂದು ತಿಳಿಸಿದರು.

ಗೈರಾಗುವವರಿಗೆ ಕಠಿಣ ಕ್ರಮ: ಸರ್ಕಾರಿ ಕಾರ್ಯಕ್ರಮಗಳಿಗೆ ಅಧಿಕಾರಿಗಳು ಹಾಗೂ ಸರ್ಕಾರಿ ನೌಕರರು ಗೈರಾಗುತ್ತಿರುವ ಬಗ್ಗೆ ಮಾಹಿತಿ ಬಂದಿದೆ. ತುರ್ತು ಅಗತ್ಯ ಸಂದರ್ಭ‌ ಬಿಟ್ಟು ಉದ್ದೇಶಪೂರ್ವಕವಾಗಿ ಗೈರಾಗುವ ಇಲಾಖೆ ನೌಕರರ ವಿರುದ್ಧ ಕ್ರಮಕ್ಕಾಗಿ ಜಿಲ್ಲಾಧಿಕಾರಿಗೆ ಶಿಫಾರಸ್ಸು ಮಾಡಲಾಗುವುದು ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ತಹಸಿಲ್ದಾರ್ ಆನಂದಯ್ಯ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಶ್ರೀನಿವಾಸ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮೂರ್ತಿ, ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜು ಎಎಸ್ಐ ಕೃಷ್ಣ. ಕೃಷಿ ಇಲಾಖೆಯ ಸುಂದರಮ್ಮ ಆರ್ ಐ ಮಹದೇವಸ್ವಾಮಿ ಗ್ರಾಮಲೆಕ್ಕಿಗ ಶೇಷಣ್ಣ,ಎಫ್ ಪೇದೆ ರಾಘವೇಂದ್ರ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.

andolanait

Recent Posts

ಶತಕ ಬಾರಿಸಿದ ಸಿಎಂ ಎದುರು ಸವಾಲುಗಳೂ ಇವೆ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…

15 hours ago

ಎಐ; ಮನುಕುಲದ ವಿನಾಶಕ್ಕೆ ಕಾರಣವಾಗಲಿದೆಯೇ?

ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…

15 hours ago

ರಾಜ್ಯದಲ್ಲಿ ೧೯೮೩ರ ಇತಿಹಾಸ ಮರುಕಳಿಸುತ್ತದೆಯೇ?

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…

15 hours ago

ಕೆಎಚ್‌ಬಿ ಕಾಲೋನಿ ನಿವಾಸಿಗಳ ಜೀವನ ಹೈರಾಣ

ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…

15 hours ago

ಗಣೇಶೋತ್ಸವಕ್ಕೆ ಡಿಜೆ ನಿಷೇಧ: ಮಿಶ್ರ ಪ್ರತಿಕ್ರಿಯೆ

ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…

15 hours ago

50 ವರ್ಷಗಳ ನಂತರ ಮೊದಲ ಬಾರಿ ಬರಿದಾದ ಕಾರಿಗನಹಳ್ಳಿ ಅಣೆಕಟ್ಟೆ

ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ  ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…

15 hours ago