ಭಾರತೀನಗರ: ಚರ್ಮಗಂಟು ರೋಗ ಕಾಣಿಸಿಕೊಂಡು ನಾಟಿ ಹಸುವೊಂದು ಮೃತಪಟ್ಟಿರುವ ಘಟನೆ ಸಮೀಪದ ಅಣ್ಣೂರು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಕೃಷ್ಣಪ್ಪ (ಗುಡ್ಡಪ್ಪ) ಎಂಬುವವರಿಗೆ ಸೇರಿದ ನಾಟಿ ಹಸುವಿಗೆ ಕಳೆದ ೧೦ ದಿನಗಳಿಂದ ಚರ್ಮಗಂಟು ರೋಗ ಕಾಣಿಸಿಕೊಂಡಿತು. ಚಿಕಿತ್ಸೆ ಕೊಡಿಸಿದರೂ ಫಲಕಾರಿಯಾಗದೆ ಶನಿವಾರ ಮೃತಪಟ್ಟಿದೆ. ಸ್ಥಳಕ್ಕೆ ಕೆ.ಎಂ.ದೊಡ್ಡಿ ಪಶುವೈದ್ಯಾಧಿಕಾರಿ ಶಿವಶಂಕರ್, ಪಶುವೈದ್ಯ ಪರೀಕ್ಷಕ ಚನ್ನಪ್ಪ ಭೇಟಿ ನೀಡಿ ಪರಿಶೀಲಿಸಿ ಸರ್ಕಾರದಿಂದ ಸಿಗುವ ಪರಿಹಾರವನ್ನು ಒದಗಿಸಿಕೊಡುವ ಭರವಸೆಯನ್ನು ನೀಡಿ ಅಂತ್ಯಸಂಸ್ಕಾರ ನಡೆಸಿದ್ದಾರೆ.
ಸೋಂಕಿತ ರಾಸುಗಳಿಗೆ ನಿರ್ಧಿಷ್ಟ ಚಿಕಿತ್ಸೆ ಇಲ್ಲ. ಆದರೂ ಆಂಟಿ ಬಾಂಟಿಕ್ ಮತ್ತು ನೋವು ನಿವಾರಕ ಲಸಿಕೆ ನೀಡಬಹುದು. ಹೊರ ರಾಜ್ಯಗಳಿಂದ ಚರ್ಮಗಂಟು ರೋಗ ಹರಡುತ್ತಿದೆ. ಉತ್ತರ ಕರ್ನಾಟಕ ಜಿಲ್ಲೆಗಳ ರೋಗ ಪೀಡಿತ ರಾಸುಗಳನ್ನು ಈ ಭಾಗದ ರೈತರು ಖರೀದಿಸಿ ತಂದಾಗ ಚರ್ಮಗಂಟು ಸ್ಥಳೀಯ ರಾಸುಗಳಿಗೆ ಹರಡುತ್ತಿವೆ. ಸೊಳ್ಳೆಗಳ ಕಡಿತದಿಂದ ಮಾತ್ರವಲ್ಲದೆ ಗಾಳಿ ಮೂಲಕವು ಚರ್ಮಗಂಟು ರೋಗದ ವೈರಾಣುಗಳು ರಾಸುಗಳಿಂದ ರಾಸುಗಳಿಗೆ ಹರಡುತ್ತಿವೆ ಎಂದು ಪಶುವೈದ್ಯಾಧಿಕಾರಿ ಶಿವಶಂಕರ್ ತಿಳಿಸಿದರು.
ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್ ಡಿಸೋಜ ಮಡಿಕೇರಿ: ಈ ಬಾರಿಯ…
ಭೇರ್ಯ ಮಹೇಶ್ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…
ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ…
ಸರಗೂರು : ಪಟ್ಟಣ ಪಂಚಾಯಿತಿ ವ್ಯಾಪ್ತಿ ಯಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನ ಸಾಮಾನ್ಯರು ತತ್ತರಿಸಿ ಆತಂಕದಲ್ಲಿದ್ದರೂ ನಿಯಂ ತ್ರಣ…
ನುರಿತ ತಜ್ಞರ ತಂಡದಿಂದ ಕೆರೆ ಸ್ವಚ್ಛತೆ ಆರಂಭಿಸಲು ತಯಾರಿ ಮೈಸೂರು : ಪ್ರವಾಸಿಗರು ಹಾಗೂ ವಾಯುವಿಹಾರಿಗಳ ನೆಚ್ಚಿನ ತಾಣವಾದ ಕುಕ್ಕರಹಳ್ಳಿ…
ಮೈಸೂರು ನಗರದ ಪ್ರತಿಯೊಂದೂ ವಾರ್ಡ್‌ನ ಪ್ರತಿ ಮಾರ್ಗದಲ್ಲೂ ಮೈಸೂರು ಮಹಾ ನಗರ ಪಾಲಿಕೆಯಿಂದ ವಾರ್ಡ್ ಸಂಖ್ಯೆ, ವಾರ್ಡ್‌ನ್ನು ಪ್ರತಿನಿಧಿಸುವ ಪಾಲಿಕೆ…