ಜಿಲ್ಲೆಗಳು

ಕ್ರಿಕೆಟ್‌ನಲ್ಲೂ ಮೀಸಲಾತಿ ತರಬೇಕು : ನಟ ಚೇತನ್ ಅಹಿಂಸಾ

ಚಾಮರಾಜನಗರ: ಭಾರತೀಯ ಕ್ರಿಕೆಟ್‌ನಲ್ಲಿ ಶೇ.70 ಆಟಗಾರರು ಮೇಲ್ಜಾತಿಯವರೇ ಇದ್ದಾರೆ. ಆದ್ದರಿಂದ ಭಾರತೀಯ ಕ್ರಿಕೆಟ್‌ನಲ್ಲೂ ಮೀಸಲಾತಿ ತರಬೇಕು ಎಂದು ನಟ ಚೇತನ್ ಹೇಳಿಕೆ ನೀಡಿದ್ದಾರೆ.

ಚಾಮರಾಜನಗರದಲ್ಲಿ ನಡೆದ `ಮೀಸಲಾತಿ ಪ್ರಾತಿನಿಧ್ಯವೋ, ಆರ್ಥಿಕ ಸಬಲೀಕರಣವೋ’ ಎಂಬ ವಿಚಾರ ಸಂಕಿರಣದಲ್ಲಿ ಮಾತನಾಡಿ, 3ಬಿ ಯಿಂದ 2ಎಗೆ ಸೇರಿಸಿ ಅನ್ನೋ ಪಂಚಮಸಾಲಿಗಳ ಹೋರಾಟ ಸ್ವಾರ್ಥದ ಹೋರಾಟ. 4 ಪರ್ಸೆಂಟ್‌ನಿಂದ ನಿಂದ 12 ಪರ್ಸೆಂಟ್‌ಗೆ ಮೀಸಲಾತಿ ಹೆಚ್ಚಿಸಬೇಕೆನ್ನುವ ಒಕ್ಕಲಿಗರ ಹೋರಾಟ ಒಪ್ಪಬಹುದು ಎಂದು ಹೇಳಿದ್ದಾರೆ.

ಅಷ್ಟು ಜನಸಂಖ್ಯೆ ಇದ್ರೆ ಮೀಸಲಾತಿ ಹೆಚ್ಚಳ ತಪ್ಪಿಲ್ಲ ಅಂದಿದ್ದಾರೆ. ಇದೇ ವೇಳೆ, ದಕ್ಷಿಣ ಆಫ್ರಿಕಾ ತಂಡದಲ್ಲಿ 6 ಮಂದಿ ಕರಿಯರಿಗೆ ಮೀಸಲಾತಿ ಇದೆ. ಭಾರತೀಯ ಕ್ರಿಕೆಟ್ ಶ್ರೀಮಂತವಾಗಿದೆ. ಎಸ್ಸಿ, ಎಸ್ಟಿಗೆ ಮೀಸಲಾತಿ ಕೊಟ್ಟಲ್ಲಿ ಇನ್ನೂ ಉತ್ತಮ ಕ್ರಿಕೆಟ್ ಟೀಂ ಆಗುತ್ತೆ ಅಂತ ಚೇತನ್ ಅಭಿಪ್ರಾಯ ಪಟ್ಟಿದ್ದಾರೆ.

andolanait

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

11 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

11 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

18 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

18 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

18 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

18 hours ago