ತೊಂಬತ್ತರ ದಶಕದ ಸ್ಟಾರ್ ಬೌಲರ್ ಜಾವಗಲ್ ಶ್ರೀನಾಥ್ ಇಂದು ( ಜನವರಿ 10 ) ಶ್ರೀ ಶಿವರಾತ್ರೀಶ್ವರ ಶಿವಯೋಗಿಯವರ 1064ನೇ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.
ಜಾವಗಲ್ ಶ್ರೀನಾಥ್ ತಮ್ಮ ಪತ್ನಿಯೊಂದಿಗೆ ಕ್ಷೇತ್ರಕ್ಕೆ ಭೇಟಿ ನೀಡಿ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯವರ ಆಶೀರ್ವಾದ ಪಡೆದರು. ಬಳಿಕ ಅಲ್ಲಿಯೇ ಸ್ವಲ್ಪ ಸಮಯ ಕಾಲ ಕಳೆದಿದ್ದಾರೆ. ಜಾವಗಲ್ ಶ್ರೀನಾಥ್ ಅವರು ಭೇಟಿ ನೀಡಿದ ವಿಡಿಯೊ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.