ಮಡಿಕೇರಿ: ಅಕ್ರಮವಾಗಿ ಬೀಟೆ ಮರವನ್ನು ಕಡಿದು ನಾಟಾಗಳಾಗಿ ಪರಿವರ್ತಿಸಿ ತೊಗಟೆ ತೆಗೆಯುತ್ತಿದ್ದ ಪ್ರಕರಣವನ್ನು ಭೇದಿಸಿರುವ ಅರಣ್ಯ ಇಲಾಖೆ ಸಿಬ್ಬಂದಿಗಳು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಗೋಣಿಕೊಪ್ಪಲು ಕಾಳಪ್ಪ ಕಾಲೋನಿ ನಿವಾಸಿ ಸಾಜನ್, ತಿತಿಮತಿ ನೆಹರು ಕಾಲೋನಿ ನಿವಾಸಿ ಚಾತ, ಮಡಿಕೇರಿ ತಾಲ್ಲೂಕು ಕಡಗದಾಳು ನಿವಾಸಿ ಬಿ.ಎಸ್. ಕೃಷ್ಣಪ್ಪ ಬಂಧಿತ ಆರೋಪಿಗಳು.
ಪೊನ್ನಂಪೇಟೆ ವಲಯ ವ್ಯಾಪ್ತಿಯ ಬಾಳೆಲೆ ಹೋಬಳಿ ಬೆಸಗೂರು ಗ್ರಾಮದ ಪಾರುವಂಗಡ ಡಾಲುರವರ ತೋಟದಲ್ಲಿ ಅಕ್ರಮವಾಗಿ ಬೀಟಿಮರವನ್ನು ಕಡಿದು ನಾಟಾಗಳಾಗಿ ಪರಿವರ್ತಿಸಿ ತೊಗಟೆಯನ್ನು ತೆಗೆಯುತ್ತಿರುವ ಸಂದರ್ಭದಲ್ಲಿ ಪೊನ್ನಂಪೇಟೆ, ವಲಯ ಅರಣ್ಯ ಇಲಾಖೆ ಸಿಬ್ಬಂದಿಗಳು ದಾಳಿಮಾಡಿ ಸ್ಥಳದಲ್ಲಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ. ಸ್ಥಳದಲ್ಲಿದ್ದ ೧೦ ಬೀಟೆ ನಾಟ, ಕೃತ್ಯಕ್ಕೆ ಬಳಸಲಾದ ೦೨ ಕೊಡಲಿಗಳು ಸೇರಿ ಒಟ್ಟು ಅಂದಾಜು ೫.೦೦ ಲಕ್ಷ ರೂ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಚಕ್ರಪಾಣಿ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕೆ.ಎ. ನೆಹರು, ವಲಯ ಅರಣ್ಯಾಧಿಕಾರಿ ಬಿ.ಎಂ. ಶಂಕರ್ ಹಾಗೂ ಉಪವಲಯ ಅರಣ್ಯಾಧಿಕಾರಿಗಳಾದ ದಿವಾಕರ್, ಗಣೇಶ್ ನಾಗರಾಜ್ ಶೇಟ್, ರಕ್ಷಿತ್, ಅರಣ್ಯ ರಕ್ಷಕರಾದ ಪೊನ್ನಪ್ಪ, ಅಂಟೋನಿ, ಪ್ರಕಾಶ್, ಚೇತನ್ ಇತರರು ಪಾಲ್ಗೊಂಡಿದ್ದರು.
ಗೋಣಿಕೊಪ್ಪ: ಲಾರಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿರಾಜಪೇಟೆ ರಸ್ತೆಯ…
ಬೀದರ್: ಕಾಳಿ, ಭದ್ರಾ, ನಾಗರಹೊಳೆ, ಬಂಡೀಪುರ, ಬಿ.ಆರ್.ಟಿ. ಹುಲಿ ಸಂರಕ್ಷಿತ ಧಾಮ ಸೇರಿದಂತೆ ರಾಜ್ಯದ ಎಲ್ಲ ಅರಣ್ಯ ಪ್ರದೇಶದಲ್ಲಿ ಇಂದಿನಿಂದ…
ಮೈಸೂರು: ಬಜೆಟ್ ನಂತರ ಅಧಿಕಾರ ಹಂಚಿಕೆ ನಡೆಯುತ್ತದೆ ಎಂದು ನಾನು ಎಲ್ಲಿಯೂ ಹೇಳಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ…
ತುಮಕೂರು: ತುಮಕೂರಿನಲ್ಲಿ 11 ಮಂಗಗಳು ನಿಗೂಢವಾಗಿ ಸಾವನ್ನಪ್ಪಿದ್ದು, ಕಿಡಿಗೇಡಿಗಳು ವಿಷಪ್ರಾಶನ ಮಾಡಿರುವ ಶಂಕೆ ವ್ಯಕ್ತವಾಗಿದೆ. ದೇವರಾಯನ ದುರ್ಗ ಅರಣ್ಯ ಪ್ರದೇಶದಲ್ಲಿ…
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹುಲಿ ಆತಂಕ ಮುಂದುವರಿದಿದ್ದು, ಇಂದು ಬೆಳ್ಳಂಬೆಳಿಗ್ಗೆ ಮಂಡಕಳ್ಳಿ ವಿಮಾನ ನಿಲ್ದಾಣದ ಬಳಿ ಹುಲಿ ಕಾಣಿಸಿಕೊಂಡು…
ಬೆಂಗಳೂರು: ಕಳೆದ ಒಂದು ತಿಂಗಳಿನಿಂದ ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗುತ್ತಿರುವ ಟೊಮೊಟೊ ದರ ಶತಕದ ಸಮೀಪಕ್ಕೆ ಬಂದಿದೆ. ಟೊಮೊಟೊ ಬೆಲೆ…