ಮೈಸೂರು: ನಗರದ ಎಲೆ ತೋಟದ ರಾಜಕಾಲುವೆಯಲ್ಲಿ ಶನಿವಾರ ಮೊಸಳೆಯೊಂದು ಪತ್ತೆಯಾಗಿದ್ದು, ಜನರಲ್ಲಿ ಆತಂಕ ಮೂಡಿಸಿದೆ.
ಜೆಎಲ್ಬಿ ರಸ್ತೆಯ ಚಾಮುಂಡಿಪುರಂ ಸಮೀಪವಿರುವ ರಾಜಕಾಲುವೆಯಲ್ಲಿಮಧ್ಯಾಹ್ನದ ಹೊತ್ತಿಗೆ ಮೊಸಳೆ ಪತ್ತೆಯಾಯಿತು. ಸ್ಥಳೀಯರು ಈ ಬಗ್ಗೆ ಪೊಲೀಸರಿಗೆ ಮತ್ತು ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು. ಮೊಸಳೆಯನ್ನು ನೋಡಲು ನೂರಾರು ಜನರು ಆಗಮಿಸಿದರು. ಆದರೆ ಪೊಲೀಸರು ಜನರನ್ನು ನಿಯಂತ್ರಿಸಿ ಮೊಸಳೆಯ ಹತ್ತಿರಕ್ಕೆ ಸಾಗದಂತೆ ತಡೆದರು.
ಶುಕ್ರವಾರ ಸುರಿದ ಭಾರೀ ಮಳೆಯಿಂದಾಗಿ ರಾಜಕಾಲುವೆಯಲ್ಲಿ ಹೆಚ್ಚಿನ ನೀರು ಹರಿಯುತ್ತಿದ್ದು, ಮೊಸಳೆ ಈ ನೀರಿನಲ್ಲಿ ಸಾಗಿ ಬಂದಿರಬೇಕೆಂದು ಶಂಕಿಸಲಾಗಿದೆ. ಮೊಸಳೆ ಸಾಧಾರಣ ಗಾತ್ರವಿದ್ದು ಐದರಿಂದ ಆರು ಅಡಿ ಉದ್ದವಿತ್ತು. ಇಲ್ಲಿಗೆ ಸಮೀಪದ ಸೀವೇಜ್ ಫಾರಂ ತ್ಯಾಜ್ಯ ವಿಲೇವಾರಿ ಘಟಕದ ಸಮೀಪ ಈ ಹಿಂದೆಯೂ ಮೊಸಳೆ ಪತ್ತೆಯಾಗಿತ್ತು. ಕಳೆದ ವರ್ಷದ ನವೆಂಬರ್ ತಿಂಗಳಲ್ಲಿ ಫಾರಂ ಸಮೀಪ ಭಾರಿ ಗಾತ್ರದ ಮೊಸಳೆಯೊಂದು ಪತ್ತೆಯಾಗಿತ್ತು. ಅರಣ್ಯ ಇಲಾಖೆ ಸಿಬ್ಬಂದಿ ಬರುವಷ್ಟರಲ್ಲಿ ಅದು ಪೊದೆಗಳ ಮಧ್ಯೆ ಮರೆಯಾಗಿದ್ದರಿಂದ ಸೆರೆ ಹಿಡಿಯಲು ಸಾಧ್ಯವಾಗಿರಲಿಲ್ಲ.
ಎರಡು ವರ್ಷಗಳ ಹಿಂದೆಯೂ ಇಲ್ಲಿ ಮೊಸಳೆ ಪತ್ತೆಯಾಗಿತ್ತು. ಇದೀಗ ಪತ್ತೆಯಾಗಿರುವ ಮೊಸಳೆಯು ಇದೇ ಮೊಸಳೆ ಗುಂಪಿಗೆ ಸೇರಿದ್ದೆಂದು ಶಂಕಿಸಲಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದು ಮೊಸಳೆಯನ್ನು ಸೆರೆ ಹಿಡಿಯುವ ಪ್ರಯತ್ನ ನಡೆಸಿದ್ದಾರೆ.
ಮದ್ದೂರು : ತಾಲ್ಲೂಕಿನ ನಿಡಘಟ್ಟದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕಾರು ಸುಟ್ಟುಹೋಗಿದ್ದು, ಅದೃಷ್ಟವಶಾತ್…
ಮೈಸೂರು : ಇತ್ತೀಚಿನ ದಿನಗಳಲ್ಲಿ ಸಾಂಪ್ರದಾಯಿಕ ಅಡುಗೆ ಎಣ್ಣೆಗಳು, ಅವುಗಳ ಆರೋಗ್ಯ ಲಾಭಗಳ ಕಾರಣದಿಂದ ಮತ್ತೆ ಹೆಚ್ಚಿನ ಮಹತ್ವ ಪಡೆದುಕೊಳ್ಳುತ್ತಿವೆ.…
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು (ಜ.8) ನಡೆದ 2026ನೇ ಸಾಲಿನ 2ನೇ ಸಚಿವ ಸಂಪುಟದ ಸಭೆಯಲ್ಲಿ…
ಮಂಡ್ಯ : ನಗರಕ್ಕೆ ಹೈಟೆಕ್ ಸ್ಪರ್ಶ ನೀಡಲು ಮುಂದಾಗಿರುವ ಶಾಸಕ ಪಿ. ರವಿಕುಮಾರಗೌಡ ಅವರು, ಒಕ್ಕಲಿಗ ಜನಾಂಗದ ಹಲವು ವರ್ಷಗಳ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಸ್ವಚ್ಛತೆಯನ್ನು ಕಾಪಾಡುವ ನಿಟ್ಟಿನಲ್ಲಿ ನಗರದಲ್ಲಿ ಬೀದಿಬದಿ ವ್ಯಾಪಾರಿಗಳ ವಲಯ ನಿರ್ಮಿಸಲು ಆದ್ಯತೆ ನೀಡಲಾಗುವುದು…
ಬೆಂಗಳೂರು : ಹಣಕಾಸು ಇಲಾಖೆ ಅನುಮತಿ ನೀಡಿದ ತಕ್ಷಣವೇ 2025ರ ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣವನ್ನು…