ನಂಜನಗೂಡು: ದಕ್ಷಿಣಕಾಶಿ, ಗರಳಪುರಿ ಎಂದೇ ಹೆಸರುವಾಸಿಯಾಗಿರುವ ಮೈಸೂರು ಜಿಲ್ಲೆ ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ದೇವಾಲಯಕ್ಕೆ ಸಾಗರೋಪಾದಿಯಲ್ಲಿ ಭಕ್ತರು ಆಗಮಿಸಿದ್ದರು.
ರಾಜ್ಯ ವಿವಿಧೆಡೆಯಿಂದ ಆಗಮಿಸಿದ್ದ ಭಕ್ತರು ಕಪಿಲಾ ನದಿಯಲ್ಲಿ ಮಿಂದೆದ್ದ ಭಕ್ತರು, ಪಾರ್ವತಿ ಸಮೇತ ಶ್ರೀಕಂಠೇಶ್ವರ ಸ್ವಾಮಿಯ ದರ್ಶನ ಪಡೆದರು. ಕಾರ್ತೀಕ ಸೋಮವಾರ ಮಾತ್ರವಲ್ಲದೇ ಇಂದು ಹುಣ್ಣಿಮೆ ಕೂಡ ಆದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಪೂಜೆ ಸಲ್ಲಿಸಿದರು.
ಇನ್ನು ನಾಳೆ ಮಂಗಳವಾರದಂದು ನಂಜನಗೂಡಿನಲ್ಲಿ ಚಿಕ್ಕ ಜಾತ್ರಾಮಹೋತ್ಸವ ಜರುಗಲಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ನಿರೀಕ್ಷ ಇದೆ.





