ಮೈಸೂರು: ಕೃಷ್ಣರಾಜಸಾಗರ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಕೃಷ್ಣರಾಜಸಾಗರ ಜಲಾಶಯಕ್ಕೆ ಹೆಚ್ಚಿನ ನೀರು ಹರಿದು ಬರುತ್ತಿದ್ದು, ಕೆಆರ್ಎಸ್ ಡ್ಯಾಂನಿಂದ 25ರಿಂದ 75 ಸಾವಿರ ಕ್ಯೂಸೆಕ್ಸ್ ನೀರನ್ನು ಕಾವೇರಿ ನದಿಗೆ ಬಿಡಲಾಗುವುದು. ಈ ಪ್ರಮಾಣವು ಹೆಚ್ಚಾಗುವ ಸಂಭವವಿರುತ್ತದೆ. ಆದ್ದರಿಂದ ಕಾವೇರಿ ನದಿಯ ತಗ್ಗುಪ್ರದೇಶದಲ್ಲಿ ಇರುವ ಮತ್ತು ನದಿಯ ಎರಡೂ ದಂಡೆಗಳಲ್ಲಿ ಇರುವ ಸಾರ್ವಜನಿಕರು ತಮ್ಮ ಆಸ್ತಿ ಪಾಸ್ತಿ ಹಾಗೂ ಜಾನುವಾರುಗಳ ರಕ್ಷಣೆಗೆ ಎಚ್ಚರಿಕೆ ವಹಿಸಿ ಸೂಕ್ತ ಮುಂಜಾಗ್ರತಾ ಕ್ರಮಕೈಗೊಂಡು ಸುರಕ್ಷಿತ ಸ್ಥಳಗಳಿಗೆ ಹೋಗುವಂತೆ ಕೆಆರ್ಎಸ್ ಕಾವೇರಿನೀರಾವರಿನಿಗಮ ನಿಯಮಿತದ ಕಾರ್ಯಪಾಲಕ ಇಂಜನಿಯರ್ ಸೂಚಿಸಿದ್ದಾರೆ.