ಜಿಲ್ಲೆಗಳು

ಡಿ ಎಸ್ ರಮೇಶ್ ಚಾ.ನಗರ ನೂತನ ಜಿಲ್ಲಾಧಿಕಾರಿ

ಚಾಮರಾಜನಗರ: ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದ್ದು, ನೂತನ ಜಿಲ್ಲಾಧಿಕಾರಿಯಾಗಿ ಡಿ. ಎಸ್. ರಮೇಶ್ ನೇಮಕವಾಗಿದ್ದಾರೆ.
ಡಿ.ಎಸ್. ರಮೇಶ್ ಪ್ರಸ್ತುತ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅವರನ್ನು ಚಾಮರಾಜನಗರ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ. ರಮೇಶ್ ಅವರು 2010ನೇ ಬ್ಯಾಚಿನ ಕರ್ನಾಟಕ ಕೇಡರ್ ಐಎಎಸ್ ಅಧಿಕಾರಿ.
ಪಸ್ತುತ ಜಿಲ್ಲಾಧಿಕಾರಿ ಚಾರುಲತಾ ಅವರಿಗೆ ಇನ್ನೂ ಸ್ಥಳ ತೋರಿಸಿಲ್ಲ. ಚಾರುಲತಾ ಸೋಮಲ್ ಅವರು 2021ರ ನವೆಂಬರ್ 15ರಂದು ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಒಂದು ವರ್ಷ ತುಂಬುವ ಮೊದಲೇ ಅವರನ್ನು ವರ್ಗಾವಣೆ ಮಾಡಲಾಗಿದೆ.

andolanait

Recent Posts

ಮಾ.23ರಿಂದ ವಿಜೃಂಭಣೆಯ ವೈರಮುಡಿ ಬ್ರಹ್ಮೋತ್ಸವ

ಮೇಲುಕೋಟೆ: ಮಾ.೨೩ರಿಂದ ಏ.೩ರವರೆಗೆ ನಡೆಯುವ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿಯ ಪ್ರಖ್ಯಾತ ವೈರಮುಡಿ ಬ್ರಹ್ಮೋತ್ಸವವನ್ನು ವಿಜೃಂಭಣೆಯಿಂದ ನೆರವೇರಿಸಲು ಸಿದ್ಧತೆ ಮಾಡಲಾಗುತ್ತಿದೆ ಎಂದು…

37 mins ago

ಓದುಗರ ಪತ್ರ: ಮೊಬೈಲ್ ಸ್ಟೇಟಸ್ !

ಮೊಬೈಲ್ ಸ್ಟೇಟಸ್ ! ಶಾಲೆಗಳಲ್ಲಿ ಮೊಬೈಲ್ ನಿಷೇಧ..? ಸರ್ಕಾರದ ಮೆಸೇಜ್‌ಗೆ ಲೈಕ್ ನೀಡಬಹುದು ಪೋಷಕರು ! ಆದರೆ, ಸ್ಟೂಡೆಂಟ್‌ಗಳು ?…

42 mins ago

ಓದುಗರ ಪತ್ರ: ಕಿಡಿಗೇಡಿಗಳಿಂದ ವಿದ್ಯಾರ್ಥಿಗಳು ವಿಚಲಿತರಾಗದಿರಿ

ಫೆ.೨೮ರ ಶನಿವಾರದಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯಲಿದೆ. ಎಲ್ಲಾ ಕಾಲೇಜುಗಳಲ್ಲಿ ವ್ಯವಸ್ಥಿತವಾಗಿ ಪಾಠವನ್ನು ಮುಗಿಸಿ ಮಾದರಿ ಪ್ರಶ್ನೆ ಪತ್ರಿಕೆ…

43 mins ago

ಓದುಗರ ಪತ್ರ; ಸಫಾರಿಗೆ ಅನುಮತಿ ಖಂಡನೀಯ

ಮೈಸೂರು ಜಿಲ್ಲೆ, ಹೆಗ್ಗಡದೇವನ ಕೋಟೆ ತಾಲ್ಲೂಕು ವನಸಿರಿಗೆ ಹೆಸರುವಾಸಿ, ಇಲ್ಲಿನ ಉತ್ತಮ ಹವಾಗುಣಕ್ಕೆ ಸನಿಹದಲ್ಲೇ ಇರುವ ಅರಣ್ಯ ಪ್ರದೇಶ ಕೂಡ…

45 mins ago

ತಂಪಾದ ಕೊಡಗಿನಲ್ಲಿಯೂ ಹೆಚ್ಚುತ್ತಿದೆ ತಾಪ

ನವೀನ್ ಡಿಸೋಜ ೩೦ ಡಿಗ್ರಿ ಸೆಲ್ಸಿಯಸ್ ದಾಟುತ್ತಿರುವ ತಾಪಮಾನ; ಅಗತ್ಯ ಮುನ್ನೆಚ್ಚರಿಕೆಗೆ ವೈದ್ಯರ ಸಲಹೆ ಮಡಿಕೇರಿ: ಫೆಬ್ರವರಿ ತಿಂಗಳು ಕೊನೆಗೊಳ್ಳುತ್ತಿರುವಂತೆಯೇ…

1 hour ago

ಜೀವವೂ ಉಳಿಯಬೇಕು, ಜೀವನೋಪಾಯವೂ ನಡೆಯಬೇಕು

ಸಫಾರಿ ಪುನಾರಂಭದ ಸಂಬಂಧ ‘ಆಂದೋಲನ’ ದಿನಪತ್ರಿಕೆಯು ನಡೆಸಿದ ಅಭಿಯಾನಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರೆತಿದೆ. ಇದಕ್ಕೆ ಪೂರಕವಾಗಿ ಪತ್ರಿಕೆ ನಡೆಸಿದ…

1 hour ago