ನಂಜನಗೂಡು : ತಾಲ್ಲೂಕಿನಾದ್ಯಂತ ಭಾನುವಾರ ಸುರಿದ ಧಾರಾಕಾರ ಮಳೆಗೆ ಹುರ,ವಳಗರೆ ಕೆರೆ ಸೇರಿದಂತೆ ಹಲವಾರು ಕೆರೆಗಳು ಕೋಡಿ ಬಿದ್ದಿದ್ದು, ಭಾರೀ ಪ್ರಮಾಣದ ನೀರು ನುಗು ನಾಲೆಗೆ ಉಕ್ಕಿ ಹರಿದ ಪರಿಣಾಮ ನೂರಾರು ಹೆಕ್ಟೇರ್ ಕೃಷಿ ಜಮೀನಿನ ಬೆಳೆಗೆ ಹಾನಿಯಾಗಿದೆ.
ನಂಜನಗೂಡು ಪಟ್ಟಣದ ಹುಲ್ಲಹಳ್ಲಿ ರಸ್ತೆ ಎಡ ಭಾಗದ ಬೀದಿಗಳಿಗೆ ಚರಂಡಿ ನೀರು ಪ್ರವಾಹದ ರೀತಿಯಲ್ಲಿ ನುಗ್ಗಿದ ಪರಿಣಾಮ ಆ ಬೀದಿಗಳ ಮನೆಗಳ ಒಳಗೂ ಚರಂಡಿ ನೀರು ಆವೃತ್ತವಾದ ಪರಿಣಾಮ ಅಲ್ಲಿನ ನಿವಾಸಿಗಳು ರಾತ್ರಿಯಲ್ಲಾ ಜಾಗರಣೆ ಮಾಡುವಂತಾಗಿದೆ.
ಈ ಬೀದಿಯ ಮನೆಗಳಿಗೆ ಚರಂಡಿ ನೀರಿನ ಜೊತೆ ಹಾವು ಚೇಳುಗಳು ಪ್ರವೇಶ ಮಾಡಿದ್ದು, ಆ ಮನೆಗಳ ನಿವಾಸಿಗಳಲ್ಲಿ ಆತಂಕ ಹೆಚ್ಚಾಗಿದೆ. ಒಳಚರಂಡಿ ಗಳ ಮುಖಾಂತರ ನೀರು ರಸ್ತೆಯಲ್ಲೇ ಭುಗಿಲೇಳತೊಡಗಿದ್ದು, ನಂಜನಗೂಡಿನ ಜನತೆ ಕಂಗಾಲಾಗಿದ್ದಾರೆ. ಈ ಸಂಬಂಧ ಆಧಿಕಾರಿಗಳ ಕ್ರಮ ಕೈಗೊಳ್ಳಬೇಕೆಂದು ಆಕ್ರೋಶ ಹೊರಹಾಕಿದ್ದಾರೆ.
ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…
ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…
ಮಂಡ್ಯ: ಇದೇ ಅಕ್ಟೋಬರ್.11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…
ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್…