Mysore
18
broken clouds

Social Media

ಸೋಮವಾರ, 23 ಡಿಸೆಂಬರ್ 2024
Light
Dark

ದಲಿತ ಮುಖ್ಯಮಂತ್ರಿ  ಬಿಎಸ್ಪಿಯಿಂದ ಮಾತ್ರ ಸಾಧ್ಯ : ಮಾರಸಂದ್ರ ಮುನಿಯಪ್ಪ

ಜೈಭೀಮ್ ಜನಜಾಗೃತಿ ಜಾಥಾ ಕಾರ್ಯಕ್ರಮದ ಸಮಾರೋಪ ಸಮಾರಂಭ

ಚಾಮರಾಜನಗರ: ದಲಿತರ ಮುಖ್ಯಮಂತ್ರಿ  ಬಹುಜನ ಸಮಾಜ ಪಕ್ಷದಿಂದ ಮಾತ್ರ ಸಾಧ್ಯ ಎಂದು  ಪಕ್ಷದ ರಾಜ್ಯ ಸಂಯೋಜಕ ಮಾರಸಂದ್ರ ಮುನಿಯಪ್ಪ ಹೇಳಿದರು.

ನಗರದ ಆರ್ ಆರ್ ಹೋ ಟೆಲ್ ಸಭಾಂಗಣದಲ್ಲಿ  ಸಂವಿಧಾನ ಸಂಕ್ಷರಣೆಗಾಗಿ ರಾಜ್ಯವ್ಯಾಪಿ ಜೈಭೀಮ್ ಜನ ಜಾಗೃತಿ ಜಾಥಾ ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ದಲಿತರನ್ನುಮತಬ್ಯಾಂಕ್ ಮಾಡಿಕೊಂಡಿರುವ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ದಲಿತ ಮುಖಂಡರನ್ನು ಮುಖ್ಯಮಂತ್ರಿ ಮಾಡಲು ಸಿದ್ದರಿಲ್ಲ. ಇದೀಗ ರಾಜ್ಯದಲ್ಲಿ ಎಸ್ಸಿ, ಎಸ್ಟಿಗಳು ಒಂದಾಗುತ್ತಿದ್ದು  ಶ್ರೀ ಪ್ರಸನ್ನಾನಂದ ಸ್ವಾಮೀಜಿಗಳ ಹೋರಾಟದ ಫಲವಾಗಿ ಪರಿಶಿಷ್ಠರ ಮೀಸಲಾತಿ ಹೆಚ್ಚಳವಾಗಿದೆ.  ಎಸ್ಸಿ, ಎಸ್ಟಿ ಸಮುದಾಯಗಳ ಶ್ರೀಗಳು ಒಂದಾಗಿದ್ದಾರೆ. ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಬಿಎಸ್ಪಿ ಬಿಟ್ಟು ಯಾವ ಪಕ್ಷದಿಂದಲ್ಲೂ ಸರ್ಕಾರ ರಚನೆ ಮಾಡಲು ಸಾಧ್ಯವಿಲ್ಲ ಎಂದರು.

ಕಾಂಗ್ರೆಸ್ ಮುಳುಗುವ ಹಡಗು ಆಗಿರುವಾಗ ಮಲ್ಲಿಕಾರ್ಜುನ‌ಖರ್ಗೆ ಅವರನ್ನು ಎಐಸಿಸಿ ಅಧ್ಯಕ್ಷರಾಗಿ ಆಯ್ಕೆ ಮಾಡಿದ್ದಾರೆ. ನನಗೆ ಮೀಸೆ ಬಂದಿರಲಿಲ್ಲ ಅಂದಿನಿಂದಲ್ಲೂ  ಸಿಎಂ ಮಾಡುವುದಾಗಿ ಕಾಂಗ್ರೆಸ್ ಹೇಳಿಕೊಂಡು ಬಂದಿದೆ ಹೊರತು ಮಾಡಲಿಲ್ಲ ದೇಶ, ರಾಜ್ಯದಲ್ಲಿ 50 ಕ್ಕೂ ಹೆಚ್ಚು ಕಾಲ ಆಡಳಿತ ನಡೆಸಿದ ಕಾಂಗ್ರೆಸ್  ಸಂವಿಧಾನದ ಆಶಯದಂತೆ ಅಧಿಕಾರ ನಡೆಸಿಲ್ಲ ಎಂದು ಕಿಡಿಕಾರಿದರು.

ದೇಶದಲ್ಲಿ 8 ವರ್ಷಗಳಲ್ಲಿ ಅಧಿಕಾರ ಬಂದ ಪ್ರಧಾನಿ ನರೇಂದ್ರಮೋದಿಯವರು ಉತ್ತಮ ಆಡಳಿತ ನೀಡುವಲ್ಲಿ ವಿಫಲರಾಗಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಹೊರದೇಶದಲ್ಲಿರುವ ಕಪ್ಪು ಹಣವನ್ನು ತಂದು ಪ್ರತಿಯೊಬ್ಬರ ಬ್ಯಾಂಕ್ ಖಾತೆಗೆ  15 ಲಕ್ಷ ರೂ ಹಾಕುವುದಾಗಿ ಹೇಳಿದರು. ಪ್ರತಿವರ್ಷ 2 ಕೋಟಿ ಉದ್ಯೋಗ ನೀಡುವುದಾಗಿ ಹೇಳಿ ಯಾರ ಖಾತೆಗೂ ನಯಾಪೈಸೆ ಹಾಕಿಲ್ಲ, ಒಬ್ಬರಿಗೂ ಉದ್ಯೋಗ ಕೊಡಿಸಿಲ್ಲ ಇರುವ ಉದ್ಯೋಗ ಕಿತ್ತುಕೊಂಡು ಎಲ್ಲ ಕ್ಷೇತ್ರವನ್ನು ಖಾಸಗೀಕರಣ ಮಾಡುವ ದೇಶ ಜನತೆ ಸಂಕಷ್ಟಕ್ಕೆ ಸಿಲುಕಿಸುವ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿದರು.

ಪಕ್ಷದ ರಾಜ್ಯಾಧ್ಯಕ್ಷ ಎಂ.ಕೃಷ್ಣಮೂರ್ತಿ ಮಾತನಾಡಿದರು. ರಾಜ್ಯ ಬೌದ್ದ ಸಮಾಜದ ಅಧ್ಯಕ್ಷ  ಪ್ರೊ.ಹ.ರಾ. ಮಹೇಶ್ ಪ್ರಾಸ್ತಾವಿಕವಾಗಿ ಭಾಷಣ ಮಾಡಿದರು.
 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ