ಜೈಭೀಮ್ ಜನಜಾಗೃತಿ ಜಾಥಾ ಕಾರ್ಯಕ್ರಮದ ಸಮಾರೋಪ ಸಮಾರಂಭ
ಚಾಮರಾಜನಗರ: ದಲಿತರ ಮುಖ್ಯಮಂತ್ರಿ ಬಹುಜನ ಸಮಾಜ ಪಕ್ಷದಿಂದ ಮಾತ್ರ ಸಾಧ್ಯ ಎಂದು ಪಕ್ಷದ ರಾಜ್ಯ ಸಂಯೋಜಕ ಮಾರಸಂದ್ರ ಮುನಿಯಪ್ಪ ಹೇಳಿದರು.
ನಗರದ ಆರ್ ಆರ್ ಹೋ ಟೆಲ್ ಸಭಾಂಗಣದಲ್ಲಿ ಸಂವಿಧಾನ ಸಂಕ್ಷರಣೆಗಾಗಿ ರಾಜ್ಯವ್ಯಾಪಿ ಜೈಭೀಮ್ ಜನ ಜಾಗೃತಿ ಜಾಥಾ ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ದಲಿತರನ್ನುಮತಬ್ಯಾಂಕ್ ಮಾಡಿಕೊಂಡಿರುವ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ದಲಿತ ಮುಖಂಡರನ್ನು ಮುಖ್ಯಮಂತ್ರಿ ಮಾಡಲು ಸಿದ್ದರಿಲ್ಲ. ಇದೀಗ ರಾಜ್ಯದಲ್ಲಿ ಎಸ್ಸಿ, ಎಸ್ಟಿಗಳು ಒಂದಾಗುತ್ತಿದ್ದು ಶ್ರೀ ಪ್ರಸನ್ನಾನಂದ ಸ್ವಾಮೀಜಿಗಳ ಹೋರಾಟದ ಫಲವಾಗಿ ಪರಿಶಿಷ್ಠರ ಮೀಸಲಾತಿ ಹೆಚ್ಚಳವಾಗಿದೆ. ಎಸ್ಸಿ, ಎಸ್ಟಿ ಸಮುದಾಯಗಳ ಶ್ರೀಗಳು ಒಂದಾಗಿದ್ದಾರೆ. ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಬಿಎಸ್ಪಿ ಬಿಟ್ಟು ಯಾವ ಪಕ್ಷದಿಂದಲ್ಲೂ ಸರ್ಕಾರ ರಚನೆ ಮಾಡಲು ಸಾಧ್ಯವಿಲ್ಲ ಎಂದರು.
ಕಾಂಗ್ರೆಸ್ ಮುಳುಗುವ ಹಡಗು ಆಗಿರುವಾಗ ಮಲ್ಲಿಕಾರ್ಜುನಖರ್ಗೆ ಅವರನ್ನು ಎಐಸಿಸಿ ಅಧ್ಯಕ್ಷರಾಗಿ ಆಯ್ಕೆ ಮಾಡಿದ್ದಾರೆ. ನನಗೆ ಮೀಸೆ ಬಂದಿರಲಿಲ್ಲ ಅಂದಿನಿಂದಲ್ಲೂ ಸಿಎಂ ಮಾಡುವುದಾಗಿ ಕಾಂಗ್ರೆಸ್ ಹೇಳಿಕೊಂಡು ಬಂದಿದೆ ಹೊರತು ಮಾಡಲಿಲ್ಲ ದೇಶ, ರಾಜ್ಯದಲ್ಲಿ 50 ಕ್ಕೂ ಹೆಚ್ಚು ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ಸಂವಿಧಾನದ ಆಶಯದಂತೆ ಅಧಿಕಾರ ನಡೆಸಿಲ್ಲ ಎಂದು ಕಿಡಿಕಾರಿದರು.
ದೇಶದಲ್ಲಿ 8 ವರ್ಷಗಳಲ್ಲಿ ಅಧಿಕಾರ ಬಂದ ಪ್ರಧಾನಿ ನರೇಂದ್ರಮೋದಿಯವರು ಉತ್ತಮ ಆಡಳಿತ ನೀಡುವಲ್ಲಿ ವಿಫಲರಾಗಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಹೊರದೇಶದಲ್ಲಿರುವ ಕಪ್ಪು ಹಣವನ್ನು ತಂದು ಪ್ರತಿಯೊಬ್ಬರ ಬ್ಯಾಂಕ್ ಖಾತೆಗೆ 15 ಲಕ್ಷ ರೂ ಹಾಕುವುದಾಗಿ ಹೇಳಿದರು. ಪ್ರತಿವರ್ಷ 2 ಕೋಟಿ ಉದ್ಯೋಗ ನೀಡುವುದಾಗಿ ಹೇಳಿ ಯಾರ ಖಾತೆಗೂ ನಯಾಪೈಸೆ ಹಾಕಿಲ್ಲ, ಒಬ್ಬರಿಗೂ ಉದ್ಯೋಗ ಕೊಡಿಸಿಲ್ಲ ಇರುವ ಉದ್ಯೋಗ ಕಿತ್ತುಕೊಂಡು ಎಲ್ಲ ಕ್ಷೇತ್ರವನ್ನು ಖಾಸಗೀಕರಣ ಮಾಡುವ ದೇಶ ಜನತೆ ಸಂಕಷ್ಟಕ್ಕೆ ಸಿಲುಕಿಸುವ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿದರು.
ಪಕ್ಷದ ರಾಜ್ಯಾಧ್ಯಕ್ಷ ಎಂ.ಕೃಷ್ಣಮೂರ್ತಿ ಮಾತನಾಡಿದರು. ರಾಜ್ಯ ಬೌದ್ದ ಸಮಾಜದ ಅಧ್ಯಕ್ಷ ಪ್ರೊ.ಹ.ರಾ. ಮಹೇಶ್ ಪ್ರಾಸ್ತಾವಿಕವಾಗಿ ಭಾಷಣ ಮಾಡಿದರು.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…