ಜಿಲ್ಲೆಗಳು

ದಲಿತರ ರ‍್ಯಾಲಿಗೆ 3 ಸಾವಿರ ಮಂದಿ: ಮಹದೇವ

ಹುಣಸೂರು : ಡಾ.ಬಾಬಾ ಸಾಹೇಬ್ ಅಂಬೇಡ್ಕರ್‌ರವರ ೬೬ನೇ ಪರಿನಿರ್ವಾಣ ದಿನದ ಅಂಗವಾಗಿ ದಲಿತ ಸಂಘಟನೆಗಳ ಐಕ್ಯತಾ ಸಮಿತಿಯು ‘ದಲಿತರ ಸಾಂಸ್ಕೃತಿಕ ಪ್ರತಿರೋಧ’ ಹೆಸರಿನಲ್ಲಿ ಬೆಂಗಳೂರಿನಲ್ಲಿ ಬೃಹತ್ ರ‍್ಯಾಲಿ ನಡೆಸಲಿದ್ದು, ಈ ರ‍್ಯಾಲಿಗೆ  ಹುಣಸೂರಿನಿಂದ ಸುಮಾರು ಮೂರು ಸಾವಿರ ಜನರು ತೆರಳಲಿದ್ದಾರೆ ಎಂದು ದಲಿತ ಸಂಘಟನೆಗಳ ಸಮನ್ವಯ ಸಮಿತಿಯ ಸಂಚಾಲಕರಾದ ಜೆ.ಮಹದೇವ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾನತೆ, ಸಹೋದರತೆ, ಸಾಮಾಜಿಕ ನ್ಯಾಯ ಮತ್ತು ಮೀಸಲಾತಿಯ ಆಶಯವನ್ನು ನಾಶಕ್ಕೆ ಮುಂದಾಗಿರುವ ಬಿಜೆಪಿ ಸರ್ಕಾರದ ದುರಾಡಳಿತ ವಿರುದ್ಧವಾಗಿ ಹಾಗೂ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ರಕ್ಷಣೆಗಾಗಿ ‘ದಲಿತರ ಸಾಂಸ್ಕೃತಿಕ ಪ್ರತಿರೋಧ’ ಹೆಸರಿನಲ್ಲಿ ದಲಿತರ ಬೃಹತ್ ಐತಿಹಾಸಿಕ ಸಮಾವೇಶ ನಡೆಸಲಾಗುತ್ತಿದೆ ಎಂದರು.
ಇಡೀ ದೇಶವನ್ನು ಕಾರ್ಪೊರೇಟ್ ಕಂಪನಿಗಳ ಕೈಗಿಟ್ಟು, ದೇಶವನ್ನೇ ಖಾಸಗೀಕರಣ ಮಾಡಿ ಮೀಸಲಾತಿಯ ಆಶಯವನ್ನೇ ನಿರ್ನಾಮ ಮಾಡಿ, ದಲಿತರ ಅಭಿವೃದ್ಧಿಯನ್ನು ಸಾರಾಸಗಟಾಗಿ ನಿರ್ಲಕ್ಷಿಸಲಾಗುತ್ತಿದೆ. ಹಾಗಾಗಿ ದಲಿತರು ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಉಳಿವಿಗಾಗಿ ಹೋರಾಟ ಮಾಡುವ ಅನಿವಾರ್ಯತೆ ಬಂದೊದಗಿದೆ ಎಂದರು.
ದಸಂಸ ಸಂಚಾಲಕರಾದ ರತ್ನಪುರಿ ಪುಟ್ಟಸ್ವಾಮಿ, ದೇವರಾಜ ಕಟ್ಟೆಮಳಲವಾಡಿ, ಕೃಷ್ಣ ಕೊಳಘಟ್ಟ, ರಾಮಕೃಷ್ಣ ಅತ್ತಿಗುಪ್ಪೆ, ಪ್ರಕಾಶ್ ಮುತ್ತುರಾಯನಹೊಸಳ್ಳಿ ಹಾಗೂ ಹಿರಿಯ ದಲಿತ ಮುಖಂಡರಾದ ವರದರಾಜು, ಶಿವರಾಜ್, ರಾಜು ಹಾಜರಿದ್ದರು.

andolanait

Recent Posts

ಮೋಟಾರ್ ವಾಹನ ಸೆಸ್ ಕೈಬಿಟ್ಟ ಮೈಸೂರು ಮಹಾನಗರ ಪಾಲಿಕೆ

ಮೈಸೂರು : ಮೈಸೂರು ಮಹಾನಗರಪಾಲಿಕೆ 2026-27ನೇ ಹಣಕಾಸು ವರ್ಷಕ್ಕೆ ಜಾರಿಗೊಳಿಸಲು ಘೋಷಿಸಿದ್ದ ಮೋಟಾರ್ ವಾಹನ ಸೆಸ್ ಅನ್ನು ರದ್ದುಗೊಳಿಸಿದೆ. ಇತ್ತೀಚಿಗೆ…

7 hours ago

ದಿಢೀರ್‌ ಕುಸಿದುಬಿದ್ದ ಲೋಕಾಯುಕ್ತ ನಿ.ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ, ಆಸ್ಪತ್ರೆಗೆ ದಾಖಲು

ಬೆಂಗಳೂರು : ಕರ್ನಾಟಕದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರೆ ಉಂಟಾಗಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ…

8 hours ago

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ : ಮಾಜಿ ಸಚಿವ ಸಾ.ರಾ.ಮಹೇಶ್‌ ಹೇಳಿದಿಷ್ಟು?

ಮೈಸೂರು : ಬಟ್ಟೆ ಬ್ಯಾಗ್ ಖರೀದಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ…

8 hours ago

ಆರ್‌ಸಿಬಿ ವಿರುದ್ಧದ ಪಂದ್ಯಕ್ಕೆ ಧೋನಿ ಲಭ್ಯ?

ಬೆಂಗಳೂರು : ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದಾರೆ. ಸ್ನಾಯು ಸೆಳೆತದಿಂದ…

9 hours ago

24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಜೆಟ್‌ಗಳನ್ನು ಹೊಡೆದುರುಳಿಸಿದ್ದೇವೆ : ಇರಾನ್

ಟೆಹ್ರಾನ್ : ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಸ್ಟೆಲ್ತ್…

10 hours ago

ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು : ಮುಖ್ಯಮಂತ್ರಿ ಟೀಕೆ

ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.…

10 hours ago