Light
Dark

ನೃತ್ಯ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ಹನೂರು: ಶೈಕ್ಷಣಿಕ ವಲಯದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ರಾಮಾಪುರ ಶಾಲೆಯ ಮಕ್ಕಳು ಜಿಲ್ಲಾ ಮಟ್ಟದ ಜಾನಪದ ನೃತ್ಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ಶೈಕ್ಷಣಿಕ ವಲಯಕ್ಕೆ ಕೀರ್ತಿ ತಂದಿದ್ದಾರೆ.

ರಾಷ್ಟ್ರೀಯ ಜನಸಂಖ್ಯಾ ಶಿಕ್ಷಣ ಯೋಜನೆಯ ಕಾರ್ಯಕ್ರಮದ ಅಂಗವಾಗಿ ಡಯಟ್ ಚಾಮರಾಜನಗರ ಇಲ್ಲಿ ನಡೆದ ಗಂಡು ಮತ್ತು ಹೆಣ್ಣು ಮಕ್ಕಳಿಗೆ ಸಮಾನ ಅವಕಾಶ ಎಂಬ ವಿಷಯದ ಜಿಲ್ಲಾ ಮಟ್ಟದ ಜಾನಪದ ಸ್ಪರ್ಧೆಯಲ್ಲಿ ಈ ಸಾಧನೆಗೈದಿದ್ದಾರೆ.

ಬಹುಮುಖ ಪ್ರತಿಭೆ ಶಿಕ್ಷಕ ಕೆಂಚಪ್ಪ ಮಾರ್ಗದರ್ಶನದಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನಗಳಿಸಿರುವ ವಿದ್ಯಾರ್ಥಿಗಳು ಬಳ್ಳಾರಿಯಲಿ ನಡೆಯುವ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಈ ಸಾಧನೆಗೆ ಕಾರಣೀಭೂತರಾದ ಶಿಕ್ಷಕ ಕೆಂಚಪ್ಪ ಹಾಗೂ ವಿದ್ಯಾರ್ಥಿಗಳನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜು ಸೇರಿದಂತೆ ಶೈಕ್ಷಣಿಕ ವಲಯದ ಅನೇಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಶಾಲಾ ಆಡಳಿತ ಮಂಡಳಿ ವತಿಯಿಂದ ಅಭಿನಂದನೆಯನ್ನು ಸಲ್ಲಿಸಿದ್ದಾರೆ.

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ