ಜಿಲ್ಲೆಗಳು

ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಬೃಹತ್ ಗಾತ್ರದ ಮರ, ತೆರವಿಗೆ ಒತ್ತಾಯ

ಹನೂರು: ಪಟ್ಟಣದ ಬಂಡಳ್ಳಿ ಮುಖ್ಯರಸ್ತೆಯಲ್ಲಿರುವ ಬೃಹತ್ ಗಾತ್ರದ ಮರವೊಂದು ಸತತವಾಗಿ ಬೀಳುತ್ತಿರುವ ಮಳೆಗೆ ಬೀಳುವ ಹಂತದಲ್ಲಿದ್ದು ಇದನ್ನು ತೆರವುಗೊಳಿಸುವಂತೆ ಪ್ರಜ್ಞಾವಂತ ನಾಗರಿಕರು ಒತ್ತಾಯಿಸಿದ್ದಾರೆ.
ಪಟ್ಟಣದ ಅಮ್ಮನ್ ಮೆಡಿಕಲ್ ಮುಂಭಾಗದಲ್ಲಿರುವ ಬೃಹತ್ ಗಾತ್ರದ ಮರವೊಂದು ಸತತವಾಗಿ ಬೀಳುತ್ತಿರುವ ಮಳೆಗೆ ರಸ್ತೆಯತ್ತ ವಾಲಿದ್ದು ಕೆಲವು ಕಟ್ಟಡಗಳು ಮರದ ಕೆಳಗೆ ಬೀಳುವುದನ್ನು ತಡೆದಿದೆ.
ಈ ರಸ್ತೆಯು ಬಂಡಳ್ಳಿ ಶಾಗ್ಯ ಹಲಗಾಪುರ ತೋಮಿಯರ್ ಪಾಳ್ಯ ಚಂಗವಾಡಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಾಗಿದೆ.ಇದಲ್ಲದೆ ಪ್ರತಿಷ್ಟಿತ ಕ್ರಿಸ್ತರಾಜ ವಿದ್ಯಾಸಂಸ್ಥೆ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹಾಗೂ ಖಾಸಗಿ ಆಸ್ಪತ್ರೆ ಇದೇ ರಸ್ತೆಯಲ್ಲಿ ಇರುವುದರಿಂದ ಸಾವಿರಾರು ಶಾಲಾ ವಿದ್ಯಾರ್ಥಿಗಳು,ಬ್ಯಾಂಕ್ ಗ್ರಾಹಕರು ಹಾಗೂ ರೋಗಿಗಳು ಈ ರಸ್ತೆಯಲ್ಲಿ ಪ್ರತಿನಿತ್ಯ ಸಾವಿರಾರು ಜನರು ಸಂಚರಿಸುತ್ತಾರೆ.ಮರ ವಾಲಿರುವ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದರೂ ಸಹ ಇದುವರೆಗೆ ಯಾವುದೇ ಪ್ರಯೋಜನವಾಗಿಲ್ಲವೆಂದು ಅಂಗಡಿ ಮಾಲೀಕರುಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮುನ್ನೆಚ್ಚರಿಕೆ ವಹಿಸಿ : ಅನಾಹುತ ಅವಘಡಗಳು ಸಂಭವಿಸುವ ಮುನ್ನ ಸಂಬಂಧಪಟ್ಟ ಸ್ಥಳೀಯ ಪಟ್ಟಣ ಪಂಚಾಯಿತಿ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

andolanait

Recent Posts

`ವಿದೇಶಗಳಲ್ಲಿ ಕನ್ನಡ ಕಟ್ಟುವುದು ಸವಾಲಿನ ಕೆಲಸ`

ಜಾಗತಿಕ ನೆಲೆಯಲ್ಲಿ ಕನ್ನಡ ಕಟ್ಟುವ ಬಗೆ ಕುರಿತ ಗೋಷ್ಠಿಯಲ್ಲಿ ಅಮೆರಿಕ ಕನ್ನಡ ಕೂಟ (ಅಕ್ಕ)ದ ಅಧ್ಯಕ್ಷ ಅಮರ್‌ನಾಥ್‌ಗೌಡ ಹೇಮಂತ್ ಕುಮಾರ್…

9 mins ago

ವಿಭಿನ್ನ ಓದಿಗೆ ಆಹ್ವಾನಿಸುವುದೇ ಉತ್ತಮ ಸಾಹಿತ್ಯ

`ಹೊಸ ತಲೆಮಾರಿನ ಸಾಹಿತ್ಯ' ಕುರಿತ ವಿಚಾರಗೋಷ್ಠಿಯಲ್ಲಿ ವಿಮರ್ಶಕ ವಿಕ್ರಂ ವಿಸಾಜಿ ಅಭಿಮತ • ಜಿ.ತಂಗಂ ಗೋಪಿನಾಥಂ ಮಂಡ್ಯ: ಹೊಸ ತಲೆಮಾರಿನ…

21 mins ago

ಮೈಸೂರಿನಲ್ಲಿ ಮಾಗಿ ಉತ್ಸವ: ಸಂಗೀತದ ಹೊನಲು ಹರಿಸಿದ ವಿಜಯ್‌ ಪ್ರಕಾಶ್‌

ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್‌ ಪ್ರಕಾಶ್‌ ಅವರು…

11 hours ago

ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…

11 hours ago

ರೈತರಿಗೆ ಮತ್ತೊಂದು ಸಂಕಷ್ಟ: ಈ ಬಾರಿ ಮಾವಿನ ಇಳುವರಿ ಭಾರೀ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…

12 hours ago