ಜಿಲ್ಲೆಗಳು

ದಸರಾ ದರ್ಶನದಲ್ಲಿ ಜನರ ಸಡಗರ!

ಮೈಸೂರು: ಗ್ರಾಮಾಂತರ ಪ್ರದೇಶದ ಜನರಿಗೆ ಅರಮನೆ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳನ್ನು ವೀಕ್ಷಿಸಲು ಆಯೋಜಿಸಿರುವ ದಸರಾ ದರ್ಶನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಅರಮನೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನ ಆವರಣದಲ್ಲಿ ಸಾರಿಗೆ ಬಸ್ ಗಳಿಗೆ ಪೂಜೆ ಸಲ್ಲಿಸಿದ ನಂತರ ಹಸಿರು ನಿಶಾನೆ ತೋರಲಾಯಿತು. ಜಿಲ್ಲೆಯ ಒಂಬತ್ತು ತಾಲ್ಲೂಕುಗಳಿಂದ ತಲಾ ಮೂರು ಬಸ್ ಗಳಂತೆ ೮೧ ಬಸ್ ಗಳಲ್ಲಿ ಸಾರ್ವಜನಿಕರನ್ನು ಕರೆತಂದು ದರ್ಶನ ಮಾಡಿಸಲಾಯಿತು. ಅರಮನೆ,ಚಾಮುಂಡಿ ಬೆಟ್ಟ,ವಸ್ತುಪ್ರದರ್ಶನ ಮೊದಲಾದ ಸ್ಥಳಗಳನ್ನು ತೋರಿಸಲಾಗುತ್ತದೆ. ಸಂಜೆ ಅರಮನೆಯ ಆವರಣದಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮ ವೀಕ್ಷಣೆ ಮಾಡಿದ ಬಳಿಕ ವಾಪಸು ಊರಿಗೆ ಕರೆದೊಯ್ಯಲಾಗುತ್ತದೆ.ಸಾರ್ವಜನಿಕರು ೫೦ ರೂಪಾಯಿ ಕೊಟ್ಟು ಪಾಸ್ ಪಡೆಯುವುದು ಬಿಟ್ಟರೆ ಉಳಿದಂತೆ ತಿಂಡಿ,ಊಟ ಉಚಿತವಾಗಿ ಕಲ್ಪಿಸಲಾಗುತ್ತದೆ.

ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಶಾಸಕ ಎಸ್.ಎ.ರಾಮದಾಸ್, ಸಾರಿಗೆ ವಿಭಾಗೀಯ ನಿಯಂತ್ರಣಾಧಿಕಾರಿ‌‌ ಆಶೋಕ್ ಕುಮಾರ್ ದಸರಾ ದರ್ಶನಕ್ಕೆ ಚಾಲನೆ ನೀಡಿದರು. ಮೈಸೂರು ತಾಲ್ಲೂಕಿನ ವಿವಿಧ ಹಳ್ಳಿಗಳಿಂದ ಬಂದಿದವರು ಬಹಳ‌ಸಂತೋಷವಾಗಿ ವೀಕ್ಷಣೆಗೆ ಹೊರಟರು

andolanait

Recent Posts

ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧಿಸಲ್ಲ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…

1 hour ago

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಬರ್ಟ್‌ ವಾದ್ರಾ

ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…

4 hours ago

ಇಂದು ರಾತ್ರಿ ದೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾತ್ರಿ 8.30ಕ್ಕೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಕುರಿತ…

4 hours ago

ಹಾಸನ: ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ

ಹಾಸನ: ಬೇಲೂರು ತಾಲ್ಲೂಕಿನ ಕಾನಳ್ಳಿ ಅರಣ್ಯ ಪ್ರದೇಶದಲ್ಲಿದ್ದ ದೈತ್ಯಾಕಾರದ ನರಹಂತಕ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ. ಮೂರನೇ…

4 hours ago

ಏಪ್ರಿಲ್.‌20ರಿಂದ ಸಿಎಂ ಸಿದ್ದರಾಮಯ್ಯ ಮೈಸೂರು, ಚಾಮರಾಜನಗರ ಜಿಲ್ಲಾ ಪ್ರವಾಸ

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಏಪ್ರಿಲ್.‌20 ಹಾಗೂ 21ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಏಪ್ರಿಲ್.‌20ರಂದು ಬೆಳಿಗ್ಗೆ ವಿಶೇಷ ವಿಮಾನದಲ್ಲಿ ಮೈಸೂರಿಗೆ…

5 hours ago

ತಿದ್ದುಪಡಿ ಮಸೂದೆಗೆ ಸೋಲು: ಕರಾಳ ಇತಿಹಾಸ ಮರುಕಳಿಸಲಿದೆ ಎಂದ ಎಚ್.ಡಿ.ಕುಮಾರಸ್ವಾಮಿ ಕಿಡಿ

ನವದೆಹಲಿ: ತಿದ್ದುಪಡಿ ಮಸೂದೆ ಸೋಲುವ ಮೂಲಕ ಲೋಕಸಭೆಯಲ್ಲಿ ಮೂವತ್ತು ವರ್ಷಗಳ ಹಿಂದಿನ ಕರಾಳ ಇತಿಹಾಸ ಮತ್ತೆ ಮರುಕಳಿಸಿದೆ ಎಂದು ಕೇಂದ್ರ…

5 hours ago