ಜಿಲ್ಲೆಗಳು

ದಸರಾ ಆನೆಗಳಿಗೆ ಫಲತಾಂಬೂಲ ನೀಡಿದ ಬಿಎಸ್‌ವೈ

ಮೈಸೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಇಂದು  ‘ಸಾವರ್ಕರ್ ರಥಯಾತ್ರೆ’ಗೆ ಚಾಲನೆ ನೀಡಿ ಬಳಿಕ ದಸರಾ ಗಜ ಪಡೆಗಳು ಇರುವ ಸ್ಥಳಕ್ಕೆ ಭೇಟಿ ನೀಡಿ ಆನೆಗಳಿಗೆ ಫಲತಾಂಬೂಲ ನೀಡಿದರು.

ಇಂದು ನಗರದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ  ‘ಸಾವರ್ಕರ್ ರಥಯಾತ್ರೆ’ಗೆ ಚಾಲನೆ ನೀಡಿದ್ದಾರೆ. ಈ ಯಾತ್ರೆಯು ಸಾವರ್ಕರ್ ಅವರ ಬಗ್ಗೆ, ಅವರ ದೇಶಭಕ್ತಿ, ಹೋರಾಟಗಳ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವೀರ್ ಸಾವರ್ಕರ್ ಪ್ರತಿಷ್ಠಾನದ ವತಿಯಿಂದ ಆಯೋಜಿಸಗಿದ್ದು, ಯಾತ್ರೆಯು ಟೆರಿಷಿಯನ್ ಕಾಲೇಜು ಮಾರ್ಗವಾಗಿ ಕ್ಯಾತಮಾರನಹಳ್ಳಿ, ತಿಲಕನಗರ, ಮಾತೃ ಮಂಡಳಿ ವೃತ್ತ, ಟೆಂಟ್ ವೃತ್ತ, ವಿವೇಕಾನಂದ ನಗರ, ಚಾಮುಂಡಿಪುರಂ ವೃತ್ತ ಸೇರಿದಂತೆ ಹಲವು ಪ್ರದೇಶಗಳಲ್ಲಿ ಸಂಚಾರ ಮಾಡಲಿದೆ.

ಆ.24 ರ ನಾಳೆ ಮೈಸೂರು ಜಿಲ್ಲೆಯ ಜಯಪುರ, ಹಂಪಾಪುರ, ಎಚ್.ಡಿ.ಕೋಟೆ, ಸರಗೂರು ಭಾಗಗಳಲ್ಲಿ ರಥಯಾತ್ರೆ ನಡೆಯಲಿದೆ. ಆ.೨೫ರಂದು ನಂಜನಗೂಡು, ಬೇಗೂರು, ಗುಂಡ್ಲುಪೇಟೆ, ತೆರಕಣಾಂಬಿ. ಆ.೨೬ರಂದು ಚಾಮರಾಜನಗರ, ಸಂತೇಮರಹಳ್ಳಿ, ಯಳಂದೂರು, ಕೊಳ್ಳೇಗಾಲ, ಹನೂರು, ಕೌದಳ್ಳಿ. ಆ.೨೭ರಂದು ತಿ.ನರಸೀಪುರ, ಬನ್ನೂರು, ಕಿರುಗಾವಲು, ಮಳವಳ್ಳಿ, ಹಲಗೂರು, ಕೆ.ಎಂ.ದೊಡ್ಡಿ, ಮದ್ದೂರು, ಬೇಸಗರಹಳ್ಳಿ. ಆ.೨೮ರಂದು ಕೊಪ್ಪ, ಮಂಡ್ಯ, ಶ್ರೀರಂಗಪಟ್ಟಣ, ಪಾಂಡವಪುರ. ಆ.೨೯ರಂದು ಕಿಕ್ಕೇರಿ, ಕೆ.ಆರ್.ಪೇಟೆ, ಸಾಲಿಗ್ರಾಮ, ಪಿರಿಯಾಪಟ್ಟಣದಲ್ಲಿ ರಥಯಾತ್ರೆ ನಡೆಯಲಿದ್ದು, ಆ.೩೦ರಂದು ಹುಣಸೂರು ಮಾರ್ಗವಾಗಿ ಮೈಸೂರಿಗೆ ಹಿಂದಿರುಗಲಿದೆ. ಬಳಿಕ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಸಮಾರೋಪ ಸಮಾರಂಭ ಜರುಗಲಿದೆ.

andolanait

Recent Posts

ಭಾನುವಾರವಾದರೂ ತಪ್ಪಿಸುವಂತಿಲ್ಲ: ನವೆಂಬರ್‌.1ರಂದು ಶಾಲೆಗಳಲ್ಲಿ ರಾಜ್ಯೋತ್ಸವ ಕಡ್ಡಾಯ

ಬೆಂಗಳೂರು: ನವೆಂಬರ್‌ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…

9 hours ago

ಗುಂಡ್ಲುಪೇಟೆ: ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ

ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…

10 hours ago

ದನ ಮೇಯಿಸಲು ಹೋದ ವ್ಯಕ್ತಿ ಮೇಲೆ ಚಿರತೆ ದಾಳಿ

ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…

11 hours ago

ಮೈಸೂರು: ಬಾಲಕಿ ಮೇಲಿನ ಅತ್ಯಾಚಾರ–ಕೊಲೆ ಪ್ರಕರಣ: ಕಾಮುಕನಿಗೆ ಗಲ್ಲು ಶಿಕ್ಷೆ

ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…

11 hours ago

ಸಯ್ಯಾಜಿರಾವ್ ರಸ್ತೆಯಲ್ಲಿ ಕುಸಿದು ಬಿದ್ದ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ; ಕಾರು, ಆಟೋ ಜಖಂ

ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…

11 hours ago

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

15 hours ago