ಮಡಿಕೇರಿ: ಕಳೆದ 3 ವರ್ಷಗಳ ಬಳಿಕ ಅದ್ಧೂರಿಯಾಗಿ ಆಚರಿಸುತ್ತಿರುವ ದಸರಾ ಸಂದರ್ಭದಲ್ಲಿ ಕೊರೊನಾದಂತಹ ಸಾಂಕ್ರಾಮಿಕ ರೋಗಗಳು ಇನ್ನು ಮುಂದೆ ವ್ಯಾಪಿಸದಿರಲಿ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಆಶಿಸಿದರು.
ನಗರದ ಗಾಂಧಿ ಮೈದಾನದ ಕಲಾ ಸಂಭ್ರಮ ವೇದಿಕೆಯಲ್ಲಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ದಸರಾ ಉತ್ಸವ ಕಳೆದ 3 ವರ್ಷಗಳಿಂದ ಸರಿಯಾಗಿ ಆಚರಿಸಲು ಸಾಧ್ಯವಾಗಿಲ್ಲ. 2018ರಲ್ಲಿ ಪ್ರಕೃತಿ ವಿಕೋಪ ಸಂಭವಿಸಿ ಜಿಲ್ಲೆಯ ಜನತೆ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ವಿಜೃಂಬಣೆ ಆಚರಣೆ ಮಾಡದಿರಲು ನಿರ್ಧರಿಸಲಾಗಿತ್ತು. ಬಳಿಕ 2 ವರ್ಷ ಕೊರೊನಾದಿಂದ ಅದ್ಧೂರಿ ದಸರಾ ಆಚರಣೆ ಸಾಧ್ಯವಾಗಿರಲಿಲ್ಲ. ಈ ಬಾರಿ ವಿಜೃಂಭಣೆಯಿಂದ ದಸರಾ ಆಚರಿಸಲಾಗುತ್ತಿದ್ದು, 9 ದಿನ ನಡೆಯುವ ದಸರಾ ಆಚರಣೆ ಸಂದರ್ಭದಲ್ಲಿ ಚಾಮುಂಡೇಶ್ವರಿ ದುಷ್ಟರ ಸಂಹಾರ ಮಾಡಿ ಶಿಷ್ಟರನ್ನು ರಕ್ಷಿಸಲಿ ಎಂದು ಆಶಿಸಿದರು.
ಕಳೆದ ಬಾರಿ ದಸರಾ ಉತ್ಸವಕ್ಕೆ 2 ಕೋಟಿ ಅನುದಾನವನ್ನು ಸರ್ಕಾರದಿಂದ ಕೇಳಲಾಗಿತ್ತು. 1 ಕೋಟಿ ಮಂಜೂರಾದ ಅನುದಾನದಲ್ಲಿ 25 ಲಕ್ಷ ರೂ. ವೆಚ್ಚದಲ್ಲಿ ದಸರಾ ಆಚರಿಸಲಾಯಿತು. ಉಳಿದ 75 ಲಕ್ಷ ರೂ.ಗಳಲ್ಲಿ ಗಾಂಧಿ ಮೈದಾನದಲ್ಲಿ ಶಾಶ್ವತ ಸಭಾಂಗಣ ನಿರ್ಮಿಸಲಾಗಿದೆ.
5,000 ಆಸನ ಸಾಮರ್ಥ್ಯದ ಸಭಾಂಗಣದಲ್ಲಿ ಇನ್ನು ಯಾವುದೇ ಕಾರ್ಯಕ್ರಮ ಮಾಡಬಹುದಾಗಿದೆ. ಜೊತೆಗೆ 5 ಕೋಟಿ ವೆಚ್ಚದಲ್ಲಿ ಗ್ರೇಟರ್ ರಾಜಾಸೀಟ್ ಅಭಿವೃದ್ಧಿ, ಗಾಂಧಿಭವನ ನಿರ್ಮಾಣ ಕಾರ್ಯ ಮಾಡಲಾಗುತ್ತಿದೆ. ಜಿಲ್ಲೆಗೆ
ಕ್ರಿಟಿಕಲ್ ಕೇರ್ ಸಂಟರ್ ಮಂಜೂರಾಗಿದ್ದು, ಜಾಗ ದೊರೆತಲ್ಲಿ ಶೀಘ್ರದಲ್ಲಿ ಕಾಮಗಾರಿ ಆರಂಭವಾಗಲಿದೆ ಎಂದು ಮಾಹಿತಿ ನೀಡಿದರು.
ವಿಧಾನ ಪರಿಷತ್ ಸದಸ್ಯ ಸುಜಾಕುಶಾಲಪ್ಪ ಮಾತನಾಡಿ, ಪುರಾಣದಲ್ಲಿ ರಾಕ್ಷಸರನ್ನು ದೇವಾನುದೇವತೆಗಳು ಸಂಹಾರ ಮಾಡಿ ಭೂಲೋಕವನ್ನು ಸಂರಕ್ಷಿಸಿದ್ದರು. ಇಂದು 9 ದಿನಗಳ ಕಾಲ ಆಚರಿಸುವ ನವರಾತ್ರಿಯ ಸಂದರ್ಭದಲ್ಲಿ ನಾಡಿನ ಜನತೆಗೆ ತಾಯಿ ಚಾಮುಂಡೇಶ್ವರಿ ಒಳಿತು ಮಾಡಲಿ ಎಂದು ಹಾರೈಸಿದರು.
ಮಲೆನಾಡು ಭಾಗದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಕಡಿಮೆ ಇರುತ್ತವೆ. ದಸರಾದಂತಹ ಸಂದರ್ಭದ ಅವಕಾಶಗಳನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.
ಜೀವ ವೈವಿದ್ಯ ಮಂಡಳಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಮಾತನಾಡಿ, ಕರ್ನಾಟಕದಲ್ಲಿ ಮೈಸೂರು ಬಿಟ್ಟರೆ 9 ದಿನಗಳ ಕಾಲ ದಸರಾ ಆಚರಣೆಯಲ್ಲಿ ಕೊಡಗು ಗಮನ ಸೆಳೆಯುತ್ತದೆ. ಶಕ್ತಿ ದೇವತೆಗಳ ಕರಗ ಉತ್ಸವಕ್ಕೂ ಇತಿಹಾಸವಿದ್ದು, ಸಾಂಕ್ರಾಮಿಕ ರೋಗಗಳನ್ನು ತಡೆಯುವ ಶಕ್ತಿ ಇದೆಯೆಂದು ನಂಬಲಾಗುತ್ತದೆ. ಇಂತಹ ದಸರಾ ಉತ್ಸವದಲ್ಲಿ ಕೆಡುಕನ್ನು ದಹಿಸಿ ಒಳಿತನ್ನು ಉಳಿಸುವಂತಾಗಲಿ ಎಂದರು.
ದಸರಾ ಸಮಿತಿ ಅಧ್ಯಕ್ಷೆ ಅನಿತಾ ಪೂವಯ್ಯಮಾತನಾಡಿ, ಕರಗಪೂಜೆ, ದೇವಾನುದೇವತೆಗಳ ಪೂಜೆಗೆ ಸೀಮಿತವಾಗಿದ್ದ ದಸರಾ ಮತ್ತೆ ವೈಭವಕ್ಕೆ ಮರಳಿದೆ. ದಸರಾದ ಆಕರ್ಷಣೆಗಳಲ್ಲಿ ಒಂದಾಗಿರುವ ಸಾಂಸ್ಕೃತಿಕ ಕಾರ್ಯಕ್ರಮಗಳು ಇಂದಿನಿಂದ ಅ.5ರವರೆಗೆ ನಡೆಯಲಿದೆ. ಮಹಿಳಾ ದಸರಾ, ಮಕ್ಕಳ ದಸರಾ, ಯುವ ದಸರಾ, ಮಕ್ಕಳ ದಸರಾ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.ಬದಸರಾಕ್ಕೆ ಸರ್ಕಾರದಿಂದ ದೊರೆತ 1 ಕೋಟಿ ಅನುದಾನದಲ್ಲಿ ಶೇ. 50ರಷ್ಟು ದೇವಾಲಯಗಳಿಗೆ ನೀಡಲಾಗಿದ್ದು, ಉಳಿದ ಅನುದಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ, ಕವಿಗೋಷ್ಠಿ, ಕ್ರೀಡಾ ಚಟುವಟಿಕೆಗಳನ್ನು ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ್ ಶುಭಹಾರೈಸಿದರುದಸರಾ ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಹರೀಶ್ ಅನ್ವೇಕರ್ ಮಾತನಾಡಿದರು.ಕಾರ್ಯಕ್ರಮದ ಆರಂಭದಲ್ಲಿ ಸಂಪ್ರದಾಯದಂತೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಲಾಯಿತು.ವಿವಿಧ ಕಲಾತಂಡಗಳಿಂದ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆಯಿತು.ದಸರಾ ಸಮಿತಿ ಕಾರ್ಯಾಧ್ಯಕ್ಷ ಕೆ.ಎಸ್. ರಮೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ, ಚಿನ್ನಸ್ವಾಮಿ, ನಗರಸಭೆ ಉಪಾಧ್ಯಕ್ಷೆ ಸವಿತಾ ರಾಕೇಶ್, ಪೌರಾಯುಕ್ತ ವಿಜಯ್ ಮತ್ತಿತರರು ಉಪಸ್ಥಿತರಿದ್ದರು.
ಪ್ರತಿಭಾ ಮಧುಕರ್ ಪ್ರಾರ್ಥಿಸಿದರೆ, ಅನಿಲ್ ಹೆಚ್.ಟಿ. ನಿರೂಪಿಸಿದರು. ರಾಜೇಶ್ ಯಲ್ಲಪ್ಪ ಸ್ವಾಗತಿಸಿ, ಖಚಾಂಚಿ ಶ್ವೇತಾ ಪ್ರಶಾಂತ್ ವಂದಿಸಿದರು.
ಮಂಡ್ಯ: ಚಲಿಸುತ್ತಿದ್ದ ಕಾರಿಗೆ ಮೊಟ್ಟೆ ಹೊಡೆದು ಚಾಲಕನ ಕಣ್ಣಿಗೆ ಕಾರದ ಪುಡಿ ಎರಚಿ ನಗದು ದರೋಡೆ ಮಾಡಿರುವ ಘಟನೆ ಮಂಡ್ಯ…
ಹೈದರಾಬಾದ್: ಸಂಧ್ಯಾ ಥಿಯೇಟರ್ನಲ್ಲಿ ಕಾಲ್ತುಳಿತ ಸಂಭವಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ನಟ ಅಲ್ಲು ಅರ್ಜುನ್ಗೆ ನೋಟಿಸ್ ನೀಡಲಾಗಿದೆ. ನಾಳೆ ಬೆಳಿಗ್ಗೆ 11…
ಬೆಂಗಳೂರು: ನಟ ಯಶ್ ಹಾಗೂ ಪತ್ನಿ ರಾಧಿಕಾ ಪಂಡಿತ್ ಅವರಿಂದು ಇತ್ತೀಚೆಗೆ ನಿಧನರಾಗಿದ್ದ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ನಿವಾಸಕ್ಕೆ…
ಮುಂಬೈ: ಬಾಲಿವುಡ್ನ ಖ್ಯಾತ ನಿರ್ದೇಶಕ ಶ್ಯಾಮ್ ಬೆನಗಲ್ ಅವರಿಂದು ವಿಧಿವಶರಾಗಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು. ಕಳೆದ ಕೆಲ ತಿಂಗಳುಗಳಿಂದ…
ಜೈಪುರ: ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ.ಸಿಂಧು ಅವರು ಉದ್ಯಮಿಯೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ರಾಜಸ್ಥಾನದ ಉದಯಪುರದಲ್ಲಿ ಅದ್ಧೂರಿಯಾಗಿ ನಡೆದ…
ಮೈಸೂರು: ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಪಡೆಯಲು ಕನ್ನಡಿಗರು ನಿರಾಸಕ್ತಿ ತೋರುತ್ತಿದ್ದಾರೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಬೇಸರ ವ್ಯಕ್ತಪಡಿಸಿದ್ದಾರೆ. ಈ…