ಪಾಯಿಂಟ್ ಕುಸ್ತಿ, ಪಂಜ ಕುಸ್ತಿ ಪಂದ್ಯಾವಳಿ ಆಯೋಜನೆ
ಮೈಸೂರು: ಸೆ.೨೬ರಿಂದ ಅ.೨ರವರೆಗೆ ದಸರಾ ಕುಸ್ತಿ ಪಂದ್ಯಾವಳಿ ನಡೆಯಲಿದ್ದು, ದಸರಾ ಕಂಠೀರವ, ದಸರಾ ಕೇಸರಿ, ದಸರಾ ಕಿಶೋರಿ, ದಸರಾ ಕುಮಾರ್, ದಸರಾ ಕಿಶೋರ ಪ್ರಶಸ್ತಿಗಳಿಗೆ ಪಾಯಿಂಟ್ ಕುಸ್ತಿಗಳನ್ನು ನಡೆಸಲಾಗುತ್ತದೆ ಎಂದು ದಸರಾ ಕುಸ್ತಿ ಉಪ ಸಮಿತಿ ಅಧ್ಯಕ್ಷ ಕೆ.ದೇವರಾಜ್, ಉಪ ವಿಶೇಷಾಧಿಕಾರಿ ಬಿ.ಎನ್.ನಂದಿನಿ ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕುಸ್ತಿ ಪಂದ್ಯಾವಳಿ ಪೋಸ್ಟರ್ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಸೆ.೨೬ರಂದು ೩.೩೦ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕುಸ್ತಿ ಪಂದ್ಯಾವಳಿ ಉದ್ಘಾಟಿಸಲಿದ್ದಾರೆ.
ಉತ್ತಮ ಮೈಸೂರು ನಗರನಾಡ ಕುಸ್ತಿ ಪಟು ಒಬ್ಬರಿಗೆ ಮೇಯರ್ ಕಪ್, ಓರ್ವ ಮೈಸೂರು ಗ್ರಾಮಾಂತರ ನಾಡಕುಸ್ತಿ ಪಟುವಿಗೆ ಮಹಾರಾಜರ ಒಡೆಯರ್ ಕಪ್, ರಾಜ್ಯದ ಉತ್ತಮ ನಾಡ ಕುಸ್ತಿಪಟುವಿಗೆ ಸಾಹುಕಾರ್ ಚನ್ನಯ್ಯ ಕಪ್ ನೀಡಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.
ಸೆ.೨೯ರಂದು ಕರ್ನಾಟಕ ರಾಜ್ಯ ಪಂಜ ಕುಸ್ತಿ ಸಂಘದಿಂದ ರಾಜ್ಯಮಟ್ಟದ ಪುರುಷರು ಮತ್ತು ಮಹಿಳೆಯರು, ವಿಶೇಷಚೇತನರ ಪಂಜ ಕುಸ್ತಿ ಪಂದ್ಯಾವಳಿ ನಡೆಯಲಿದೆ. ವಿಜೇತ ಮಹಿಳಾ ಪಂಜಕುಸ್ತಿ ಪಟುವಿಗೆ ಮೈಸೂರು ದಸರಾ ಕುಮಾರಿ ಪ್ರಶಸ್ತಿ, ವಿಜೇತ ಪುರುಷ ಕುಸ್ತಿಪಟುವಿಗೆ ಮೈಸೂರು ದಸರಾ ಶ್ರೀ ಪ್ರಶಸ್ತಿ, ವಿಶೇಷಚೇತನ ಮಹಿಳಾ ಪಂಜ ಕುಸ್ತಿ ಪಟುವಿಗೆ ದಸರಾ ನವಚೇತನ ತಾರೆ ಪ್ರಶಸ್ತಿ, ವಿಶೇಷಚೇತನ ಪುರುಷ ಪಂಜ ಕುಸ್ತಿಪಟುವಿಗೆ ವಿಶೇಷಚೇತನ-೨೦೨೨ ಪ್ರಶಸ್ತಿಯನ್ನು ನೀಡಲಾಗುತ್ತದೆ. ಮೈಸೂರು ವಿಭಾಗ ಮಟ್ಟದ ಕುಸ್ತಿ ಪಂದ್ಯಾವಳಿಗಳಲ್ಲಿ ಭಾಗವಹಿಸುವ ಪುರುಷ ಕುಸ್ತಿ ಪಟುಗಳಿಗೆ ಪ್ರೋತ್ಸಾಹಿಸುವ ದೃಷ್ಟಿಯಿಂದ ದಸರಾ ಕುಮಾರ ಪ್ರಶಸ್ತಿ, ಅರ್ಧ ಕೆಜಿ ತೂಕದ ಬೆಳ್ಳಿ ಗದೆಯನ್ನು ನೀಡಲಾಗುತ್ತದೆ.
ಈ ವರ್ಷದ ಆಕರ್ಷಣೆಯಾಗಿ ರಾಷ್ಟ್ರಮಟ್ಟದಲ್ಲಿ ಹೆಸರಾಗಿರುವ ಕುಸ್ತಿಪಟು ಹಾಗೂ ಒಲಿಂಪಿಕ್ ಪದಕ ವಿಜೇತರಾದ ಸಾಕ್ಷಿ ಮಲ್ಲಿಕ್ ಅವರನ್ನು ಸೆ.೨೯ರಂದು ನಡೆಯುವ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ ಎಂದು ವಿವರಿಸಿದರು. ಉಪಾಧ್ಯಕ್ಷರಾದ ವೇದರಾಜ್,ಮಹೇಶ್‌ರಾಜೇ ಅರಸ್, ಕಾರ್ಯದರ್ಶಿ ಎಸ್.ಜೆ.ಹರ್ಷವರ್ಧನ ಹಾಜರಿದ್ದರು.
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಕು ಅಮಾನವೀಯ ಘಟನೆ ನಡೆದಿದ್ದು, ಸಾಕು ಪ್ರಾಣಿಗಳನ್ನು ಚಿತ್ರಹಿಂಸೆ ನೀಡಿ ಕೊಂದು ವಿಕೃತಿ ಮೆರೆದಿರುವ…
ಬೆಳಗಾವಿ: ರಾಜ್ಯದ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ. ಹೈಕಮಾಂಡ್ ಕ್ಲಿಯರ್ ಆಗಿ ಹೇಳಿದೆ ಎಂದು ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ…
ಬೆಂಗಳೂರು: ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…
ಬೆಳಗಾವಿ: ಪೊಲೀಸ್ ಇಲಾಖೆಯಲ್ಲಿ 14 ಸಾವಿರ ಹುದ್ದೆಗಳು ಖಾಲಿಯಿದ್ದು, ಈ ಪೈಕಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ…
ಬೆಳಗಾವಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್ ಸ್ಪಷ್ಟವಾಗಿ ಹೇಳಿದೆ ಎಂದು ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಮತ್ತೊಮ್ಮೆ ಬಾಂಬ್…
ಬೆಂಗಳೂರು: ಸರ್ಕಾರಿ ಆಸ್ಪತ್ರೆಯಲ್ಲಿ ಜನೌಷಧಿ ಕೇಂದ್ರ ಮುಚ್ಚುವ ರಾಜ್ಯ ಸರ್ಕಾರದ ಆದೇಶಕ್ಕೆ ಧಾರವಾಡ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಸರ್ಕಾರಿ ಆಸ್ಪತ್ರೆಯ…