ಚಾಮರಾಜನಗರ : ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಸೆಪ್ಟೆಂಬರ್ 6 ಮತ್ತು 7ರಂದು ನಗರದ ಡಾ. ಬಿ.ಆರ್ ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ. ತಾಲೂಕು ಮಟ್ಟದ ವೈಯಕ್ತಿಕ ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ ಸ್ಥಾನ ಮತ್ತು ಗುಂಪು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದವರು ಭಾಗವಹಿಸಲು ಅರ್ಹರಾಗಿರುತ್ತಾರೆ. ಸ್ಪರ್ಧಿಗಳಿಗೆ ಪ್ರಯಾಣ ಭತ್ಯೆ ಹಾಗೂ ಊಟ ನೀಡಲಾಗುತ್ತದೆ. ಸ್ಪರ್ಧಿಗಳು ಕಡ್ಡಾಯವಾಗಿ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ನೀಡಲಾಗಿರುವ ಗುರುತಿನ ಚೀಟಿ ಹಾಗೂ ತಮ್ಮ ವಿಳಾಸಕ್ಕೆ ಸಂಬಂಧಿಸಿದ ಆಧಾರ್ ಕಾರ್ಡ್ ತರಬೇಕು. ಶಾಲಾ, ಕಾಲೇಜಿನ ಗುರುತಿನ ಚೀಟಿ ತರಬೇಕು. ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ದೂರವಾಣಿ ಸಂಖ್ಯೆ 08226-224932, 9916466659, 984416041, 9945615695, 9880211027 ಸಂಪರ್ಕಿಸುವಂತೆ ಇಲಾಖೆಯ ಸಹಾಯಕ ನಿರ್ದೇಶಕಿ ಆರ್ ಅನಿತಾ ಅವರು ತಿಳಿಸಿದ್ದಾರೆ.