ಜಿಲ್ಲೆಗಳು

ದಸರಾ ಗಜಪಡೆಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಸ್ವಾಗತ ಕೋರಿದ ಸಚಿವ ಎಸ್.ಟಿ. ಸೋಮಶೇಖರ್

ಮೈಸೂರು : ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಉತ್ಸವದ ಪ್ರಮುಖ ಆಕರ್ಷಣೆಯಾದ ಗಜಪಡೆಗೆ ಸಹಕಾರ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ ಸ್ವಾಗತಿಸಿದರು.

 

ಅರಮನೆ ಆವರಣದಲ್ಲಿನ ಜಯಮಾರ್ತಾಂಡ ದ್ವಾರದಲ್ಲಿ ಬೆಳಗ್ಗೆ 9.20 ರಿಂದ 10.00ರ ಕನ್ಯಾ ಲಗ್ನದಲ್ಲಿ ಗಜಪಡೆಗೆ ಸಚಿವ ಸೋಮಶೇಖರ್ ಅವರು ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡಿ ಗಜಪಡೆಯನ್ನು ಸ್ವಾಗತಿಸಿದರು.

ಅಂಬಾರಿ ಹೊರಲಿರುವ ಅಭಿಮನ್ಯು ಹಾಗೂ ಭೀಮ, ಮಹೇಂದ್ರ, ಗೋಪಾಲಸ್ವಾಮಿ, ಅರ್ಜುನ, ಧನಂಜಯ, ಕಾವೇರಿ, ಚೈತ್ರ, ಲಕ್ಷ್ಮಿ ಆನೆಗಳಿಗೆ ಪಾದಪೂಜೆ, ದ್ವಾರಪಾಲಕ ಪೂಜೆ, ಚಾಮರಸೇವೆ, ಮಂಗಳಾರತಿ ಮಾಡಿ ಪುಷ್ಪಾರ್ಚನೆ ಮಾಡಲಾಯಿತು.

ಮಂಗಳ ವಾದ್ಯ, ಕಲಾತಂಡಗಳ ಜೊತೆಗೆ, ಪೂರ್ಣಕುಂಬ ಸ್ವಾಗತದ ಮೂಲಕ ಜಯಮಾರ್ತಾಂಡ ದ್ವಾರದಿಂದ ಅರಮನೆಯ ಆನೆ ಬಾಗಿಲಿಗೆ ಗಜಪಡೆಯನ್ನು ಬರಮಾಡಿಕೊಳ್ಳಲಾಯಿತು.

ಆನೆ ಬಾಗಿಲಲ್ಲಿ ಅಭಿಮನ್ಯು ನೇತೃತ್ವದ 9 ಆನೆಗಳಿಗೆ ಸಚಿವ ಸೋಮಶೇಖರ್ ಅವರು, ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಿದರು. ನಂತರ ಕಾವಾಡಿಗರು ಮತ್ತು ಮಾವುತರಿಗೆ ಮೂಲಭೂತ ಸಾಮಾಗ್ರಿಗಳನ್ನು ವಿತರಿಸಿದರು. ದಸರಾ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಅಧಿಕಾರಿಗಳಿಗೆ ಶುಭಕೋರಿದ ಸಚಿವರು, ಫಲತಾಂಬೂಲ ನೀಡಿದರು. ಬಳಿಕ ಅರಮನೆಯ ಗೊಂಬೆ ತೊಟ್ಟಿಯಲ್ಲಿ ಮೈಸೂರಿನ ಅಧಿದೇವತೆ ಚಾಮುಂಡೇಶ್ವರಿದೇವಿಗೆ ಪೂಜೆ ಸಲ್ಲಿಸಿದರು.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, 15 ದಿನದ ಮುಂಚಿತವಾಗಿ ದಸರಾ ವಸ್ತು ಪ್ರದರ್ಶನ ಉದ್ಘಾಟನೆ ಆಗಲಿದೆ. ಪುಷ್ಪಪ್ರದರ್ಶನದ ಆರಂಭದ ಮೊದಲ ದಿನ ಉಚಿತ ಪ್ರವೇಶ ಇರಲಿದೆ. ದಸರಾ ಉದ್ಘಾಟಕರ ಬಗ್ಗೆ ಮುಖ್ಯಮಂತ್ರಿಗಳು ನಿರ್ಧರಿಸಲಿದ್ದಾರೆ ಎಂದು ಹೇಳಿದರು. ಗಜಪಡೆ ಸ್ವಾಗತ ಕಾರ್ಯಕ್ರಮದಲ್ಲಿ ಶಾಸಕರಾದ ನಾಗೇಂದ್ರ, ರಾಮದಾಸ್, ಸಂಸದ ಪ್ರತಾಪ್‌ ಸಿಂಹ, ಮೇಯರ್ ಸುನಂದಾ ಪಾಲನೇತ್ರ, ಜಿಲ್ಲಾಧಿಕಾರಿ, ನಗರ ಪೊಲೀಸ್ ಆಯುಕ್ತರೂ, ಜಿಪಂ ಸಿಇಒ ಸೇರಿದಂತೆ ನಾನಾ ನಿಗಮಂಡಳಿಗಳ ಅಧ್ಯಕ್ಷರು, ಮುಖಂಡರು ಮತ್ತು ಅಧಿಕಾರಿಗಳು ಹಾಜರಿದ್ದರು.

andolanait

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

12 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

13 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

14 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

15 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

18 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

19 hours ago