ಬೆಂಗಳೂರು:ಕೋನದಾಸಪುರದ ವಸತಿ ಯೋಜನೆಯಲ್ಲಿ ಅಕ್ರಮ ಎಸಗಿದ ಕಳಂಕ ಹೊತ್ತಿರುವ ಸಚಿವ ಎಸ್.ಟಿ.ಸೋಮಶೇಖರ್‌ರವರಿಗೆ ಮೈಸೂರಿನ ದಸರಾ ಉತ್ಸವದಲ್ಲಿ ರಾಷ್ಟ್ರಪತಿಯವರ ಜತೆ ವೇದಿಕೆ ಹಂಚಿಕೊಳ್ಳಲು ಅವಕಾಶ ನೀಡಬಾರದು ಎಂದು ಕೋರಿ ಆಮ್ ಆದ್ಮಿ ಪಾರ್ಟಿಯ ನಿಯೋಗವು ರಾಜ್ಯಪಾಲರಿಗೆ ಮನವಿ ಸಲ್ಲಿಸಿತು.
“ಕಳಂಕಿತ ಸಚಿವ ಎಸ್.ಟಿ.ಸೋಮಶೇಖರ್‌ರವರು ದಸರಾ ಉತ್ಸವದಲ್ಲಿ ರಾಷ್ಟ್ರಪತಿಯವರ ಜತೆ ವೇದಿಕೆ ಹಂಚಿಕೊಳ್ಳುವುದನ್ನು ತಡೆಹಿಡಿಯಬೇಕೆಂದು ಕೋರಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗಿದೆ. ನಾಡಹಬ್ಬದ ಘನತೆ ಉಳಿಸಲು ಅವರು ನಮ್ಮ ಮನವಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಾರೆ ಎಂಬ ವಿಶ್ವಾಸವಿದೆ. ಭ್ರಷ್ಟ ಸಚಿವರು ಸರ್ಕಾರದ ಉನ್ನತ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದಕ್ಕೆ ರಾಜ್ಯಪಾಲರು ಅವಕಾಶ ನೀಡದಿದ್ದರೆ, ಎಲ್ಲ ಭ್ರಷ್ಟ ಜನಪ್ರತಿನಿಧಿಗಳಿಗೂ ಇದೊಂದು ಎಚ್ಚರಿಕೆಯ ಗಂಟೆಯಾಗುತ್ತದೆ” ಎಂದು ಕೆ.ಮಥಾಯಿ ಹೇಳಿದರು.
ಸಂಘಟನಾ ಕಾರ್ಯದರ್ಶಿ ಸುರೇಶ್ ರಾಥೋಡ್ ಮಾತನಾಡಿ, “ಕೋನದಾಸಪುರದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ₹567 ಕೋಟಿ ವೆಚ್ಚದಲ್ಲಿ ಬಹುಮಹಡಿ ವಸತಿ ಸಮುಚ್ಚಯ ನಿರ್ಮಾಣ ಹಗರಣಕ್ಕೆ ಸಂಬಂಧಿಸಿ ಲೋಕಾಯುಕ್ತ ಕಚೇರಿಯಲ್ಲಿ ಸಾಕ್ಷಿ ಸಹಿತ ದೂರು ದಾಖಲಾಗಿದೆ. 29.5 ಕೋಟಿ ರೂಪಾಯಿ ಲಂಚ ಪಡೆದಿರುವ ಆರೋಪದಲ್ಲಿ ಎಸ್.ಟಿ. ಸೋಮಶೇಖರ್, ಬಿ.ಎಸ್.ಯಡಿಯೂರಪ್ಪ, ಬಿ.ವೈ. ವಿಜಯೇಂದ್ರ ಸೇರಿದಂತೆ ಒಟ್ಟು ಒಂಬತ್ತು ಮಂದಿಯು ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಇಂತಹ ಗಂಭೀರ ಆರೋಪ ಹೊತ್ತಿರುವ ಸಚಿವ ಸೋಮಶೇಖರ್‌ರವರು ಸಚಿವ ಸ್ಥಾನದಲ್ಲಿ ಮುಂದುವರಿದಿರುವುದೇ ತಪ್ಪು. ಅದರಲ್ಲೂ ಅವರು ರಾಷ್ಟ್ರಪತಿಯವರ ಜತೆ ವೇದಿಕೆ ಹಂಚುಕೊಳ್ಳುವುದು ಇನ್ನೂ ದೊಡ್ಡ ತಪ್ಪು” ಎಂದು ಹೇಳಿದರು.
ನಿಯೋಗದಲ್ಲಿ ಚನ್ನಪ್ಪಗೌಡ ನೆಲ್ಲೂರು ,ವಿಶ್ವನಾಥ್, ವೇಣುಗೋಪಾಲ್ ,ಮಹೇಶ್ ಬಾಬು ಸೇರಿದಂತೆ ಇನ್ನಿತರರು ಇದ್ದರು
ಮೈಸೂರು : ಜಿಐ ಟ್ಯಾಗ್ ಹೊಂದಿರುವ ನಂಜನಗೂಡು ರಸಬಾಳೆ, ಮೈಸೂರು ವೀಳ್ಯದೆಲೆ ಪ್ರಸ್ತುತ ಜಪಾನ್, ಮಾಲ್ಡೀವ್ಸ್ ದೇಶಗಳಿಗೆ ರಫ್ತಾಗುತ್ತಿದ್ದು, ಬಾಂಗ್ಲಾದೇಶದಿಂದಲೂ…
ಹೆಚ್.ಎಸ್.ದಿನೇಶ್ ಕುಮಾರ್ ಮೈಸೂರು : ಸ್ಥಳೀಯ ಸಂಸ್ಥೆಗಳು ತಮ್ಮ ಆದಾಯವನ್ನು ಹೆಚ್ಚಿಸಿಕೊಳ್ಳಲು ಏನೆಲ್ಲ ದಾರಿಗಳನ್ನು ಹುಡುಕಬಹುದು ಎಂಬುದನ್ನು ನಗರಪಾಲಿಕೆ ಅಧಿಕಾರಿಗಳು…
ಹುಣಸೂರು ; ತೋಟದ ಮನೆಯಲ್ಲಿ ಮಾದಕ ವಸ್ತು ವಶ ಪ್ರಕರಣ ಮೈಸೂರು : ಹುಣಸೂರು ಬಳಿಯ ತೋಟದ ಮನೆಯೊಂದರಲ್ಲಿ ಕೋಟ್ಯಂತರ…
ಕೋಲ್ಕತ್ತಾ : ಹೆನ್ರಿಚ್ ಕ್ಲಾಸೆನ್ ಅರ್ಧಶತಕದಾಟ ಹಾಗೂ ನಿತೀಶ್ ಕುಮಾರ್ ರೆಡ್ಡಿ ಅವರ ಆಲ್‌ರೌಂಡರ್ ಆಟದ ನೆರವಿನಿಂದ ಅತಿಥೇಯ ಕೋಲ್ಕತ್ತಾ…
315 ಕೋಟಿ ಸೈಬರ್ ವಂಚನೆ ಪ್ರಕರಣದಲ್ಲಿ ಬಂಧನ ಕೋಲ್ಕತ್ತಾ : ಶೆಲ್ ಕಂಪನಿಗಳು ಮತ್ತು ಕ್ರಿಪ್ಟೋಕರೆನ್ಸಿ ಆಧಾರಿತ ಹಣ ವರ್ಗಾವಣೆಯ…