ಮೈಸೂರು: ವಿಶ್ವವಿಖ್ಯಾತ ದಸರಾ ಪ್ರಯುಕ್ತ ೯ ದಿನಗಳ ಮಾನಸ ಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದ್ದ ಯುವ ಸಂಭ್ರಮಕ್ಕೆ ಸಡಗರದ ತೆರೆ ಬಿದ್ದಿತ್ತು.
ಸಂಭ್ರಮದ ಅಂತಿಮ ದಿನವಾದ ಶನಿವಾರ ಇಡೀ ಆವರಣ ಯುವ ಸಮುದಾಯದಿಂದ ಭರ್ತಿಯಾಗಿತ್ತು. ಪ್ರತಿಯೊಂದು ತಂಡದ ನೃತ್ಯವನ್ನು ಪ್ರೇಕ್ಷಕರು ಎಂಜಾಯ್ ಮಾಡಿದರು. ಸಿಳ್ಳೆ, ಚಪ್ಪಾಳೆ ಬಾನೆತ್ತರಕ್ಕೆ ಸದ್ದು ಮಾಡುತ್ತಿದ್ದವು.
ಯುವಕರು, ಯುವತಿಯರು ಕುಣಿದು ಕುಪ್ಪಳಿಸಿದರು. ಯುವ ಸಮೂಹ ಸಾಲಾಗಿ ನಿಂತು ಸ್ಟೆಪ್ ಹಾಕುತ್ತಿದ್ದರು. ನೆರದಿದ್ದ ಪ್ರೇಕ್ಷಕ ವರ್ಗ ವೇದಿಕೆಯಲ್ಲಿನ ನೃತ್ಯ ಪ್ರದರ್ಶನಕ್ಕೆ ಬದಲಾಗಿ ತಮ್ಮ ವಲಯದಲ್ಲೆ ಕುಣಿಯುತ್ತಿದ್ದ ಸಮೂಹವನ್ನು ನೋಡುತ್ತಿದ್ದರು.
ಮೈಸೂರು ಡಿಎಮ್‌ಟ್ರಿನಿಟಿ ಪಿಯು ಕಾಲೇಜು ತಂಡ ದೇಶಭಕ್ತಿ ಸಾರುವ ನೃತ್ಯ ಪ್ರದರ್ಶಿಸಿದರು. ಜಯಲಕ್ಷ್ಮೀಪುರಂನ ಶ್ರೀ ವಿವೇಕಾನಂದ ಪದವಿ ಪೂರ್ವ ಕಾಲೇಜು ತಂಡ ಪ್ರದರ್ಶಿಸಿದ ರಾಷ್ಟ್ರೀಯ ಭಾವೈಕ್ಯತೆ ಮೂಡಿಸುವ ನೃತ್ಯ ಎಲ್ಲರನ್ನು ಆಕರ್ಷಿಸಿತು. ಈ ನೃತ್ಯದಲ್ಲಿ ‘ವಂದೇ ಮಾತರಂ’ ಹಾಡಿಗೆ ಎಲ್ಲರೂ ಎದ್ದು ನಿಂತು ಗೌರವ ಸೂಚಿಸಿದರು. ಮೈಸೂರಿನ ಬಸವೇಶ್ವರ ನಗರದ ಎಎಂಬಿ ಸಂಯುಕ್ತ ಪದವಿ ಪೂರ್ವ ಕಾಲೇಜು ತಂಡ ಭಾರತೀಯ ಸೇನೆಗೆ ನಮನ ಸಲ್ಲಿಸುವ ನೃತ್ಯವನ್ನು ಪ್ರದರ್ಶಿಸಿದರು. ಮಂಡ್ಯದ ಮಹಿಳಾ ಸರ್ಕಾರಿ ಕಾಲೇಜು ತಂಡ ಕನ್ನಡ, ಸಂಸ್ಕೃತಿ ಮತ್ತು ಜಾನಪದ ಕಲೆ ಸಂಬಂಧ ನೃತ್ಯ ಪ್ರದರ್ಶಿಸಿದರು. ನಟರಾಜ ಮಹಿಳಾ ಪದವಿ ಪೂರ್ವ ಕಾಲೇಜು ತಂಡವು ಮಹಿಳಾ ಸಬಲೀಕರಣ ಕುರಿತು ಜಾಗೃತಿ ಮೂಡಿಸುವ ಪದಗಳಿಗೆ ಹೆಜ್ಜೆ ಹಾಕಿದರು. ಸುಮಾರು ೨೫ ತಂಡಗಳು ನೃತ್ಯ ಪ್ರದರ್ಶಿಸಿದವು.
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ವಿತರಣೆ ಮಾಡಿರುವ ವಿಚಾರ ಭಾರೀ ವಿವಾದಕ್ಕೆ…
ಕುವೈತ್/ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಕಾಲ ಕುವೈತ್ ಪ್ರವಾಸದಲ್ಲಿದ್ದು, ಇಲ್ಲಿನ ರಾಜ ಶೇಕ್ ಮಿಶಾಲ್ ಅಲ್…
ಕಲಬುರ್ಗಿ: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಒತ್ತು ನೀಡುತ್ತಿದ್ದು, 371 ಜೆ ಜಾರಿಯಾದ ದಶಮಾನೋತ್ಸವದ ಪ್ರಯುಕ್ತ 371 ಹಾಸಿಗೆಗಳ…
ಬೆಂಗಳೂರು: ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೀಡಿರುವ ಹೇಳಿಕೆ ಅಮಿತ್…
ಮಂಡ್ಯ: ಹೆಣ್ಣು ಕಾನೂನು ಅರಿತಕೊಂಡಾಗಷ್ಟೇ, ಹೆಣ್ಣಿನ ಮೇಲಾಗುತ್ತಿರುವ ದೌರ್ಜನ್ಯ ಎದುರಿಸಲು ಸಾಧ್ಯ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ…
ಮೈಸೂರು: ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ ಮಾಸುವ ಮುನ್ನವೇ ಸಾಂಸ್ಕೃತಿಕ ನಗರಿ ಮೈಸೂರಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಬಾಲಕಿ ಸಾವನ್ನಪ್ಪಿರುವ…