Mysore
24
broken clouds

Social Media

ಸೋಮವಾರ, 23 ಡಿಸೆಂಬರ್ 2024
Light
Dark

ದಾವಣಗೆರೆಯಲ್ಲಿ ನಡೆಯುವ ಮಹಾ ಅಧಿವೇಶನದಲ್ಲಿ ಪಾಲ್ಗೊಳ್ಳಲು ಗೀತಾ ಮನವಿ

ಚಾಮರಾಜನಗರ: ಅಖಿಲ ಭಾರತ ವೀರಶೈವ -ಲಿಂಗಾಯತ ಮಹಾಸಭಾದ ದಾವಣಗೆರೆ ಜಿಲ್ಲಾ ಘಟಕದ ವತಿಯಿಂದ ದಾವಣಗೆರೆ ಎಂ.ಬಿ.ಎ.ಕಾಲೇಜು ಮೈದಾನದಲ್ಲಿ ಡಿ. ೨೪, ೨೫ ಮತ್ತು ೨೬ ರಂದು ಮೂರು ದಿನಗಳ ಕಾಲ ನಡೆಯುವ ೨೩ನೇ ಮಹಾ ಅಧಿವೇಶನಕ್ಕೆ ಜಿಲ್ಲೆಯಿಂದ ಸಹಸ್ರಾರು ಸಂಖ್ಯೆಯಲ್ಲಿ ಭಾಗವಹಿಸಿ ಯಶ್ವಸಿಗೊಳಿಸಿಕೊಡುವಂತೆ ಮಹಾಸಭಾ ರಾಷ್ಟ್ರೀಯ ಉಪಾಧ್ಯಕ್ಷೆ ಹಾಗೂ ಮಾಜಿ ಸಚಿವೆ ಡಾ.ಗೀತಾ ಮಹದೇವಪ್ರಸಾದ್ ಮನವಿ ಮಾಡಿದರು.

ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಈ ಅಧಿವೇಶನಕ್ಕೆ ನಾಡಿನ ಹಿರಿಯ ಮಠಾಧೀಶರು, ರಾಜಕೀಯ ಮುಖಂಡರು, ಸಮಾಜದ ಗಣ್ಯರು, ಸಾಹಿತಿಗಳು, ಕಲಾವಿದರು ಹಾಗೂ ಸಹಸ್ರಾರು ಸಂಖ್ಯೆಯಲ್ಲಿ ಶರಣ ಶರಣೆಯರು ಭಾಗವಹಿಸಲಿದ್ದಾರೆ. ಮೂರು ದಿನಗಳ ಕಾಲ ನಡೆಯುವ ಈ ಸಮಾವೇಶದಲ್ಲಿ ವೀರಶೈವ-ಲಿಂಗಾಯತ ಸಮುದಾಯದ ಶಕ್ತಿ ಪ್ರದರ್ಶನಗೊಳ್ಳಲಿದೆ. ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು.

ಅಖಿಲ ಭಾರತ ವೀರಶೈವ -ಲಿಂಗಾಯತ ಮಹಾ ಸಭೆಯು ಸ್ಥಾಪನೆಗೊಂಡು ೧೧೮ ವರ್ಷಗಳಿಂದ ವೀರಶೈವ -ಲಿಂಗಾಯತ ಸಂಘಟನೆ ಮತ್ತು ಶ್ರೇಂಯೋಭಿವೃದ್ದಿಗಾಗಿ ಶ್ರಮಿಸುತ್ತಿದೆ. ಇಂದಿನ ದಿನಮಾನಗಳಲ್ಲಿ ಸಮಾಜದ ಸಂಘಟನೆ ಅತ್ಯಂತ ಮಹತ್ವ ಪಡೆದಿದೆ. ಈ ನಿಟ್ಟಿನಲ್ಲಿ ವೀರಶೈವ- ಲಿಂಗಾಯಿತರನ್ನು ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕವಾಗಿ ಸಂಘಟಿಸುವ ಉದ್ದೇಶದಿಂದ ಇಲ್ಲಿಯವರಗೆ ೨೨ ಮಹಾ ಅಧಿವೇಶನಗಳು ನಡೆದಿರುತ್ತದೆ ಎಂದರು.

ಜಿಲ್ಲಾಧ್ಯಕ್ಷ ಮೂಡ್ಲುಪುರ ನಂದೀಶ್ ಮಾತನಾಡಿ, ದಾವಣಗೆರೆಯಲ್ಲಿ ಮೂರು ದಿನಗಳ ಕಾಲ ನಡೆಯುವ ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ೨೩ನೇ ಮಹಾಅಧಿವೇಶನದಲ್ಲಿ ಪ್ರಬಲವಾಗಿ ಓಬಿಸಿ ಪಟ್ಟಿಗೆ ಸೇರಿಸುವಂತೆ ಒತ್ತಾಯ ಮಾಡಲಾಗುತ್ತದೆ ಎಂದರು.

ಇದಕ್ಕಾಗಿ ಮುಂದಿನ ದಿನಗಳಲ್ಲಿ ಹೋರಾಟ ಮಾಡಲಾಗುತ್ತದೆ. ಈ ಸಮಾವೇಶಕ್ಕೆ ಜಿಲ್ಲೆಯಿಂದ ೩ ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸುವ ಗುರಿಹೊಂದಿದ್ದು, ಜಿಲ್ಲೆಯಿಂದ ಉಚಿತ ಸಾರಿಗೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಜಿಲ್ಲೆಯಿಂದ ಸಮಾಜ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶ್ವಸಿಗೊಳಿಸುವಂತೆ ಮನವಿ ಮಾಡಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ