Mysore
22
overcast clouds
Light
Dark

ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಡಿಸಿ, ಸಿಇಒ ಭೇಟಿ!

ಪಿರಿಯಾಪಟ್ಟಣ : ಬೈಲುಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬುಧವಾರ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರು ಭೇಟಿ ನೀಡಿ ಪರಿಶೀಲನೆ ಮಾಡಿದರು.

ಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಕಡತಗಳನ್ನು ಪರಿಶೀಲಿಸಿದ ಅವರು, ಕರ್ತವ್ಯದಲ್ಲಿದ್ದ ಡಾ.ಮಂಜುಳಾ ಅವರಿಗೆ ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸುವಂತೆ ಹಾಗೂ ಸ್ವಚ್ಚತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಮಾರ್ಗದರ್ಶನ ನೀಡಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕೆ.ಎಂ.ಗಾಯತ್ರಿ ಅವರು ಮಾತನಾಡಿ, ಸಾಂಕ್ರಾಮಿಕ ರೋಗಗಳ ಕುರಿತು ಗ್ರಾಮೀಣ ಪ್ರದೇಶಗಳಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಅಭಿಯಾನ ನಡೆಸುವಂತೆ ಹೇಳಿದರು.

ಗ್ರಾಮೀಣ ಪ್ರದೇಶಗಳಲ್ಲಿ ಹೆಲ್ತ್ ಕ್ಯಾಂಪ್ ಮೂಲಕ ಆರೋಗ್ಯ ತಪಾಸಣೆ ಮಾಡಿ ಎಂದು ಸೂಚಿಸಿದರು

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ