Mysore
21
broken clouds

Social Media

ಬುಧವಾರ, 26 ಆಗಸ್ಟ್ 2026
Light
Dark

ಡಿ. 3 ರಂದು ವಿಶ್ವ ವಿಶೇಷಚೇತನರ ದಿನಾಚರಣೆ : ಅಗತ್ಯ ಸಿದ್ದತೆಗೆ ಡಿಸಿ ಸೂಚನೆ

ಚಾಮರಾಜನಗರ: ವಿಶ್ವ ವಿಶೇಷಚೇತನರ ದಿನಾಚರಣೆ ಹಾಗೂ ಇದರ ಅಂಗವಾಗಿ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಆಯೋಜನೆಗೆ ಅಗತ್ಯ ಸಿದ್ದತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಈ ಸಂಬಂಧ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ವಿಶ್ವ ವಿಶೇಷಚೇತನರ ದಿನಾಚರಣೆ  ಕಾರ್ಯಕ್ರಮವು  3ರಂದು ನಿಗದಿಯಾಗಿದ್ದು ಇದಕ್ಕೆ ಪುರ್ವಭಾವಿಯಾಗಿ ಜಿಲ್ಲಾ ಮಟ್ಟದಲ್ಲಿ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಇದೇ ನ. ೨೯ರಂದು ನಡೆಸಬೇಕು. ಈ ಎರಡೂ ಕಾರ್ಯಕ್ರಮಗಗಳಿಗೆ  ಅಚ್ಚುಕಟ್ಟಾಗಿ ವ್ಯವಸ್ಥೆಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ತಿಳಿಸಿದರು.

ಎಡಿಸಿ ಕಾತ್ಯಾಯಿನಿದೇವಿ, ಎಎಸ್ಪಿ ಕೆ.ಎಸ್. ಸುಂದರ್ ರಾಜ್, ಡಿವೈಎಸ್‌ಪಿ ಪ್ರಿಯದರ್ಶಿನಿ ಸಾಣೆಕೊಪ್ಪ, ತಹಶೀಲ್ದಾರರಾದ ಸಿ.ಜಿ. ರವಿಶಂಕರ್, ಕೆ.ಬಿ.ಆನಂದಪ್ಪನಾಯಕ, ಕನ್ನಡ ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಗುರುಲಿಂಗಯ್ಯ, ಮಹಿಳಾ ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕಿ ಗೀತಾಲಕ್ಷ್ಮೀ, ನಗರಸಭೆ ಆಯುಕ್ತ ರಾಮದಾಸ್, ಅಂಗವಿಕಲರ ಕಲ್ಯಾಣಾಧಿಕಾರಿ ಸಿ. ದೀಪಾ, ಡಿಎಚ್‌ಒ ಡಾ. ಕೆ.ಎಂ. ವಿಶ್ವೇಶ್ವರಯ್ಯ, ಅಂಗವಿಕಲರ ಕ್ಷೇಮಾಭಿವೃದ್ದಿ ಸಮಿತಿಯ ಎನ್. ಕೃಷ್ಣಮೂರ್ತಿ, ಎಂ. ರಮೇಶ್, ರೂಪೇಶ್, ರಾಜಣ್ಣ, ಇತರರು ಸಭೆಯಲ್ಲಿ ಹಾಜರಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!