ಜಿಲ್ಲೆಗಳು

ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಡಿಸಿ ಕಚೇರಿಗೆ ರೈತರ ಮುತ್ತಿಗೆ

 ಸಿಎಂ ಬಸವರಾಜ ಬೊಮ್ಮಾಯಿ ಅಣಕು ಶವಯಾತ್ರೆ
ಮಂಡ್ಯ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಳೆದ ಹತ್ತು ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿರುವ ರೈತ ಸಂಘದ ಕಾರ್ಯಕರ್ತರು ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಣಕು ಶವಯಾತ್ರೆ ನಡೆಸಿ, ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.


ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಣಕು ಶವಯಾತ್ರೆ ನಡೆಸಿ ನಂತರ ಪ್ರತಿಕೃತಿಯನ್ನು ದಹಿಸಿ ಬೆಂಗಳೂರು-ಮೈಸೂರು ಹೆದ್ದಾರಿ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ತೆರಳಿ ಮುತ್ತಿಗೆ ಹಾಕಿದರು.
ರೈತ ಸಂಘದ ಕಾರ್ಯಕರ್ತರ ಮುತ್ತಿಗೆ ವಿಚಾರ ತಿಳಿದ ಜಿಲ್ಲಾ ಪೊಲೀಸ್ ಇಲಾಖೆ ಜಿಲ್ಲಾಧಿಕಾರಿ ಕಚೇರಿಯ ಸುತ್ತಲೂ ಬ್ಯಾರಿಕೇಡ್‌ಗಳಿಂದ ನಾಕಾ ಬಂದಿಯನ್ನು ನಿರ್ಮಿಸಿ ಸುತ್ತಲೂ ಪೊಲೀಸ್ ಪಹರೆಯನ್ನು ನಿಯೋಜಿಸಿತ್ತು.
ಆದರೆ, ಇದನ್ನು ಲೆಕ್ಕಿಸದ ಕಾರ್ಯಕರ್ತರು, ಕಬ್ಬು ತುಂಬಿದ ಟ್ರಾö್ಯಕ್ಟರ್ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಧರಣಿ ನಡೆಸಿದರು.
ಕಬ್ಬಿಗೆ ೪೫೦೦ ರೂ. ಹಾಗೂ ಲೀಟರ್ ಹಾಲಿಗೆ ೪೦ ರೂ. ನಿಗದಿ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಕಳೆದ ಹತ್ತು ದಿನಗಳಿಂದ ರೈತರು ಧರಣಿ ನಡೆಸುತ್ತಿದ್ದರೂ ಸರ್ಕಾರ ನಮ್ಮ ಧರಣಿಯನ್ನು ಕಡೆಗಣಿಸಿದೆ. ಜಿಲ್ಲಾ ಉಸ್ತುವಾರಿ ಸಚಿವರು, ಸಂಸದೆ ಸ್ಥಳಕ್ಕೆ ಬಂದು ನಮ್ಮ ಅಹವಾಲು ಕೇಳಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲೆಯ ಯಾವೊಬ್ಬ ಜನಪ್ರತಿನಿಧಿಯೂ ವಿಧಾನಸಭೆಯ ಕಲಾಪದಲ್ಲಿ ಕಬ್ಬಿನ ದರದ ಬಗ್ಗೆ ಈವರೆಗೂ ಮಾತನಾಡಿಲ್ಲ. ರೈತರ ಸಮಸ್ಯೆಗಳ ಬಗ್ಗೆ ಇವರಿಗೆ ಅರಿವಿಲ್ಲವೇ ಎಂದು ಜನಪ್ರತಿನಿಧಿಗಳ ವಿರುದ್ಧ ಹರಿಹಾಯ್ದರು.
ಮಾತೆತ್ತಿದರೆ ನಾವು ರೈತರ ಮಕ್ಕಳು ಎನ್ನುತ್ತಾರೆ. ರೈತರ ಮಕ್ಕಳ ಸಮಸ್ಯೆಗಳ ಬಗ್ಗೆ ಏಕೆ ಸರ್ಕಾರದ ಗಮನಕ್ಕೆ ತರುತ್ತಿಲ್ಲ. ಜಿಲ್ಲೆಯಲ್ಲಿ ಸಾಕಷ್ಟು ಜ್ವಲಂತ ಸಮಸ್ಯೆಗಳಿವೆ ಎಂದು ದೂರಿದರು.
ಜಿಲ್ಲೆಯಲ್ಲಿ ರಸ್ತೆಗಳು ಗುಂಡಿ ಬಿದ್ದಿದ್ದು, ರಸ್ತೆ ಅಭಿವೃದ್ಧಿಪಡಿಸುವಂತೆ ಆಗ್ರಹಿಸಿ ಬೈಕ್ ರ‍್ಯಾಲಿ ನಡೆಸಿದ ಪರಿಣಾಮ ತಾತ್ಕಾಲಿಕವಾಗಿ ಗುಂಡಿಗಳನ್ನಷ್ಟೇ ಮುಚ್ಚುವ ಕೆಲಸವನ್ನು ನಗರಸಭೆ ಮಾಡುತ್ತಿದೆ ಎಂದು ದೂರಿದರು.
ಧರಣಿ ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ಡಾ. ಎಚ್.ಎನ್. ಗೋಪಾಲಕೃಷ್ಣ ಅವರು ಮನವಿ ಸ್ವೀಕರಿಸಿ ಮಾತನಾಡಿ, ಸೆ.೧೯ರಂದು ಸಮಾವೇಶದಲ್ಲಿ ಕೈಗೊಂಡಿರುವ ನಿರ್ಣಯಗಳು ಮತ್ತು ತಮ್ಮ ಬೇಡಿಕೆಗಳನ್ನು ಮುಖ್ಯಮಂತ್ರಿಗಳು ಹಾಗೂ ಸಕ್ಕರೆ ಸಚಿವರಿಗೆ ಕಳುಹಿಸಲಾಗಿದೆ. ಆದಷ್ಟು ಶೀಘ್ರ ತಮ್ಮ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ಭರವಸೆ ನೀಡಿದರು.
ಧರಣಿಯಲ್ಲಿ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ, ಜಿಲ್ಲಾಧ್ಯಕ್ಷ ಎ.ಎಲ್. ಕೆಂಪೂಗೌಡ, ರಾಜ್ಯ ಸಂಘಟನಾ ಕಾರ್ಯದರ್ಶಿ ಎಸ್.ಸಿ. ಮಧುಚಂದನ್, ಮುಖಂಡರಾದ ಲಿಂಗಪ್ಪಾಜಿ, ವಿಜಯಕುಮಾರ್, ಪ್ರಸನ್ನ ಎನ್. ಗೌಡ, ಕೆ.ಪಿ.ಗೋವಿಂದೇಗೌಡ, ಶಿವಳ್ಳಿ ಚಂದ್ರು, ಶೆಟ್ಟಹಳ್ಳಿ ರವಿಕುಮಾರ್, ಶಿವಳ್ಳಿ ಬೋರೇಗೌಡ, ರಘು, ಮಂಜುನಾಥ್, ನಾಗರೇವಕ್ಕ, ಜನಶಕ್ತಿ ಸಂಘಟನೆಯ ಅಧ್ಯಕ್ಷೆ ಪೂರ್ಣಿಮಾ, ಕಾಂಗ್ರೆಸ್ ಮಹಿಳಾ ಯುವ ಘಟಕದ ಅಧ್ಯಕ್ಷೆ ದಿವ್ಯಾ, ಕೀರೆಮಡಿ ಮಹಿಳಾ ಸದಸ್ಯರು ಸೇರಿದಂತೆ ನೂರಾರು ರೈತರು ಭಾಗವಹಿಸಿದ್ದರು.


ರೈತ ಸಂಘದ ಕಾರ್ಯಕರ್ತರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಣಕು ಶವಯಾತ್ರೆ ನಡೆಸುತ್ತಿರುವುದು.

 

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

6 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

7 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

8 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

8 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

9 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

10 hours ago