ಜಿಲ್ಲೆಗಳು

ಪೊಲೀಸ್ ಜೀಪ್‌ನಿಂದ ಜಿಗಿದು ಮೃತಪಟ್ಟ ಪ್ರಕರಣ: ಸಿಪಿಐ ಸೇರಿ ಐವರನ್ನು ಅಮಾನತು

ಸಿಪಿಐ ಶಿವಮಾದಯ್ಯ ಸಸ್ಪೆಂಡ್ ವಿರೋಧಿಸಿ ದಲಿತ ಸಂಘಟನೆಗಳ ಪ್ರತಿಭಟನೆ

ಯಳಂದೂರು: ತಾಲ್ಲೂಕಿನ ಯರಿಯೂರು ಗ್ರಾಮದ ಬಳಿ ಪೊಲೀಸ್ ಜೀಪ್‌ನಿಂದ ಜಿಗಿದು ಮೃತಪಟ್ಟ ಕುಂತೂರು ಮೋಳೆ ಗ್ರಾಮದ ನಿಂಗರಾಜು ಸಾವಿನ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಘಟನೆ ಸಂಬಂಧ ಇಬ್ಬರು ಪೊಲೀಸ್ ಅಧಿಕಾರಿಗಳು ಸೇರಿದಂತೆ ಐವರನ್ನು ಅಮಾನತುಗೊಳಿಸಲಾಗಿದೆ.

ಯುವಕನ ಸಾವಿನ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳನ್ನು ಉದ್ದೇಶಪೂರ್ವಕವಾಗಿ ಅಮಾನತುಗೊಳಿಸಲಾಗಿದೆ ಎಂದು ಆರೋಪಿಸಿ ದಲಿತಪರ ಸಂಘಟನೆಗಳ ನೇತೃತ್ವದಲ್ಲಿ ಪಟ್ಟಣದಲ್ಲಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಯಿತು.

ಕುಂತೂರುಮೋಳೆ ಗ್ರಾಮದ ನಿಂಗರಾಜು ಮಂಗಳವಾರ ಜೀಪ್‌ನಿಂದ ಜಿಗಿದು ಮೃತಪಟ್ಟಿದ್ದರು. ಈ ಸಾವು ಹಲವು ಅನುಮಾನಗಳನ್ನು ಹುಟ್ಟಿಸಿದ್ದು ಕೂಡಲೇ ಸಂಬಂಧಪಟ್ಟವರ ವಿರುದ್ಧ ಶಿಸ್ತು ಕ್ರಮಕ್ಕೆ ಆಗ್ರಹಿಸಿ ಗ್ರಾಮಸ್ಥರು ಹಾಗೂ ಉಪ್ಪಾರ ಸಮುದಾಯಾದವರು ಮಂಗಳವಾರ ಪ್ರತಿಭಟಿಸಿದ್ದರು. ಬುಧವಾರ ಸಿಪಿಐ ಶಿವಮಾದಯ್ಯ ಮಾಂಬಳ್ಳಿ ಪೊಲೀಸ್ ಠಾಣೆಯ ಪಿಎಸ್‌ಐ ಮಾದೇಗೌಡ ಹಾಗೂ ಪೇದೆ ಸೋಮಣ್ಣ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿತ್ತು.
ಪ್ರಗತಿಪರ ಸಂಘಟನೆಗಳ ಪ್ರತಿಭಟನೆ: ಅಮಾನತುಗೊಳಿಸಿರುವ ಕ್ರಮದ ವಿರುದ್ಧ ಅಂಬೇಡ್ಕರ್ ಸೇವಾ ಸಮಿತಿ, ದಲಿತ ಸಂಘರ್ಷ ಸಮಿತಿ ಸೇರಿದಂತೆ ಹಲವು ದಲಿತಪರ, ಪ್ರಗತಿಪರ ಸಂಘಟನೆಗಳ ಸದಸ್ಯರು ಪೊಲೀಸ್ ಠಾಣೆಯ ಮುಂಭಾಗ ಬುಧವಾರ ಪ್ರತಿಭಟನೆ ನಡೆಸಿದರು.

ಮಂಗಳವಾರ ನಡೆದಿರುವ ಘಟನೆಯಲ್ಲಿ ಮೃತಪಟ್ಟ ವ್ಯಕ್ತಿ ಹೇಗೆ ಸಾವನ್ನಪ್ಪಿದ ಎಂಬುದನ್ನು ತನಿಖೆ ನಡೆಸದೆ ಪೋಲಿಸ್ ಅಧಿಕಾರಿಗಳನ್ನು ಅಮಾನತ್ತು ಮಾಡಲಾಗಿದೆ. ಸಿಪಿಐ ಶಿವವಾದಯ್ಯರನ್ನು ಉದ್ದೇಶ ಪೂರ್ವಕವಾಗಿ ಇದರಲ್ಲಿ ಶಾಮೀಲು ಮಾಡಲಾಗಿದೆ. ಇದರಲ್ಲಿ ರಾಜಕೀಯ ಪಿತೂರಿ ಹಾಗೂ ವೈಯಕ್ತಿಕ ದ್ವೇಷದಿಂದ ಹೀಗೆ ಮಾಡಲಾಗಿದೆ. ಜಿಪಂ ಮಾಜಿ ಉಪಾಧ್ಯಕ್ಷ ಜೆ. ಯೋಗೇಶ್ ವೈಯಕ್ತಿಕ ಪ್ರತಿಷ್ಠೆಗಾಗಿ ಶಿವಮಾದಯ್ಯರನ್ನು ನೇರ ಹೊಣೆಯಾಗಿ ಮಾಡಿ ಇವರನ್ನು ಬಲಿಪಶು ಮಾಡಿದ್ದಾರೆ. ಕೂಡಲೇ ಸಂಬಂಧಪಟ್ಟ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳು ಇವರ ಅಮಾನತ್ತಿನ ಆದೇಶವನ್ನು ಹಿಂಪಡೆಯಬೇಕು. ಶಿವವಾದಯ್ಯರನ್ನು ಕರ್ತವ್ಯದಲ್ಲಿ ಮುಂದುವರೆಸಬೇಕು ಸತ್ಯಾಸತ್ಯತೆಯನ್ನು ಪರಿಶೀಲಿಸಿ ಕ್ರಮ ವಹಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.

ನಂತರ ಡಿವೈಎಸ್‌ಪಿ ನಾಗರಾಜುರವರಿಗೆ ಮನವಿಪತ್ರವನ್ನು ಸಲ್ಲಿಸಲಾಯಿತು. ಇದನ್ನು ಸ್ವೀಕರಿಸಿ ಮಾತನಾಡಿದ ನಾಗರಾಜು, ಮಂಗಳವಾರ ನಡೆದ ಘಟನೆಗೆ ಸಂಬಂಧಿಸಿದಂತೆ ಇವರನ್ನು ಅಮಾನತು ಮಾಡಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದ್ದು ಸಿಪಿಐ ಶಿವಮಾದಯ್ಯರವರೂ ಸೇರಿದಂತೆ ಇತರರಿಗೆ ನ್ಯಾಯ ಸಿಗುವ ಭರವಸೆ ಇದೆ. ಪ್ರಗತಿಪರ ಸಂಘಟನೆಗಳ ಸದಸ್ಯರು ತಾಳ್ಮೆಯಿಂದ ವರ್ತಿಸಬೇಕು. ಈ ಮನವಿಯನ್ನು ಇಲಾಖೆಯು ಉನ್ನತ ಅಧಿಕಾರಿಗಳ ಗಮನಕ್ಕೆ ತಂದು ಕ್ರಮ ವಹಿಸುವ ಭರವಸೆ ನೀಡಿದರು.

ಪ್ರತಿಭಟನೆಯಲ್ಲಿ ಡಿ. ರೇವಣ್ಣ, ಮದ್ದೂರು ಚಕ್ರವರ್ತಿ, ಶಿವಮೂರ್ತಿ, ದೊಡ್ಡಿಂದುವಾಡಿ ಸಿದ್ದರಾಜು, ಮಾಂಬಳ್ಳಿ ರಾಮು, ಜೆ.ಶ್ರೀನಿವಾಸ್, ದುಗ್ಗಹಟ್ಟಿ ಮಹೇಶ್, ಅಗ್ರಹಾರ ರಂಗಸ್ವಾಮಿ, ಕೆಸ್ತೂರು ನಾಗರಾಜು, ರಾಮಾಪುರ ರಂಗಸ್ವಾಮಿ, ಚಂದ್ರಶೇಖರ, ಡಿ.ರಂಗಸ್ವಾಮಿ, ಮಾಂಬಳ್ಳಿ ಕಾಂತರಾಜು, ಮಹೇಶ, ರಾಮಸಮುದ್ರ ಸುರೇಶ್, ಚಂದ್ರಶೇಖರ್, ರಾಚಪ್ಪ, ರವಿ ಸೇರಿದಂತೆ ಅನೇಕರು ಇದ್ದರು.

andolana

Recent Posts

ಪತ್ನಿ, ತಾಯಿಯನ್ನು ಕೊಂದು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟ ವ್ಯಕ್ತಿ

ಅಮರಾವತಿ: ವ್ಯಕ್ತಿಯೊಬ್ಬ ಪತ್ನಿ ಹಾಗೂ ತಾಯಿಯನ್ನು ಕತ್ತು ಹಿಸುಕಿ ಕೊಂದು ಬಳಿಕ ಇಬ್ಬರು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ…

1 hour ago

ಚಲುವಾಂಬ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಮರಣೋತ್ತರ ಪರೀಕ್ಷೆಗೆ ಮೃತದೇಹ ರವಾನೆ

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ಮಗು ಸಾವನ್ನಪ್ಪಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು…

1 hour ago

ಹಾಸನ: ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ

ಹಾಸನ: ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಬೇಲೂರು ತಾಲ್ಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

1 hour ago

ಸಚಿವ ಡಾ.ಜಿ.ಪರಮೇಶ್ವರ್‌ ಬೆಟ್ಟಿಂಗ್‌ ಕೇಸ್‌ಗೆ ತಡೆಯಾಜ್ಞೆ ನೀಡಿದ ಹೈಕೋರ್ಟ್‌

ಬೆಂಗಳೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ವಿರುದ್ಧದ ಬೆಟ್ಟಿಂಗ್‌ ಹೇಳಿಕೆ ಪ್ರಕರಣಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ತಮ್ಮ ವಿರುದ್ಧ ದಾಖಲಾಗಿರುವ ಬೆಟ್ಟಿಂಗ್…

1 hour ago

ಪಶ್ಚಿಮ ಬಂಗಾಳದಲ್ಲಿ 89.93%, ತಮಿಳುನಾಡಿನಲ್ಲಿ 82.24% ಮತದಾನ

ನವದೆಹಲಿ: ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಬಹಳ ಉತ್ಸಾಹದಿಂದ ಭಾಗಿಯಾಗಿದ್ದರು. ತಮಿಳುನಾಡಿನಲ್ಲಿ ಶೇ.82.24% ಮತದಾನ ದಾಖಲಾಗಿದ್ದು,…

1 hour ago

ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದರೂ ನೇಣಿಗೆ ಶರಣಾದ ಬಾಲಕಿ…!

ನಂಜನಗೂಡು: ನಂಜನಗೂಡು ನಗರದಲ್ಲಿರುವ ಶ್ರೀ ಗುರುಮಲ್ಲೇಶ್ವರ ಖಾಸಗಿ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾಭ್ಯಾಸ ಮಾಡುತ್ತಿದ್ದ ಬಾಲಕಿ ಪ್ರಥಮ ದರ್ಜೆಯಲ್ಲಿ ಪಾಸ್ ಆಗಿದ್ದರು…

2 hours ago