ಮಂಡ್ಯ: ಪತ್ನಿ ಮಕ್ಕಳೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಒಣಗಿ ನಿಂತಿದ್ದ ಮರ ಉರುಳಿ ಗುತ್ತಿಗೆ ಪೌರಕಾರ್ಮಿಕನೊರ್ವ ಮೃತಪಟ್ಟಿರುವ ದುರ್ಘಟನೆ ನಗರದ ತಾವರೆಗೆರೆಯಲ್ಲಿ ಸಂಭವಿಸಿದೆ.
ಮೃತ ಪೌರಕಾರ್ಮಿಕ ಉದಯಕುಮಾರ್ (೩೧) ಎಂದು ಗುರುತಿಸಲಾಗಿದೆ. ಮಂಡ್ಯ ನಗರಸಭೆಯ ನೇರಪಾವತಿ ಪೌರಕಾರ್ಮಿಕನಾಗಿದ್ದು, ಗುರುವಾರ ರಾತ್ರಿ ೯ ಗಂಟೆ ಸಮಯದಲ್ಲಿ ತನ್ನ ಹೆಂಡತಿ ಮಕ್ಕಳೊಂದಿಗೆ ನಗರದ ತಾವರೆಗೆರೆಯ ಚಲುವಯ್ಯ ಉದ್ಯಾನವನದ ಬಳಿ ಬೈಕ್‌ನಲ್ಲಿ ಸಾಗುವಾಗ ಒಣಗಿ ನಿಂತಿದ್ದ ಮರ ಉರುಳಿ ಸಾವನ್ನಪ್ಪಿದ್ದಾನೆ. ಜತೆಯಲ್ಲಿದ್ದ ಹೆಂಡತಿ ಮಕ್ಕಳು ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸದರಿ ಮರ ಒಣಗಿದ್ದು ಮರವನ್ನು ತೆರವುಗೊಳಿಸುವಂತೆ ಮಂಡ್ಯ ನಗರಸಭೆ ಅರಣ್ಯ ಇಲಾಖೆಗೆ ಪತ್ರವನ್ನು ಬರೆದಿದ್ದಾಗಿಯೂ ಅರಣ್ಯ ಇಲಾಖೆ ನಿರ್ಲಕ್ಷದಿಂದ ಈ ಪ್ರಕರಣ ನಡೆದಿದೆ ಎಂದು ಸಂಘಟನೆಗಳ ಮುಖಂಡರು ಆರೋಪಿಸಿದ್ದಾರೆ.
ಪರಿಹಾರಕ್ಕೆ ಆಗ್ರಹ:
ಮೃತ ಪೌರಕಾರ್ಮಿಕನ ಕುಟುಂಬಕ್ಕೆ ಕನಿಷ್ಟ ೨೦ ಲಕ್ಷ ರೂ.ಪರಿಹಾರ ನೀಡುವಂತೆ ಹಾಗೂ ಮೃತನ ಕುಟುಂಬಕ್ಕೆ ಅನುಕಂಪದ ನೌಕರಿ ನೀಡುವಂತೆ ಹೊರಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ಎಂ.ಬಿ.ನಾಗಣ್ಣಗೌಡ ಆಗ್ರಹಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ನಗರಸಭೆ ಅಧ್ಯಕ್ಷ ಮಂಜು, ಆಯುಕ್ತ ಮಂಜುನಾಥ್ ನಗರಸಭಾ ಸದಸ್ಯ ಶ್ರೀಧರ್ ಈ ಕುರಿತು ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಭರವಸೆ ನೀಡಿದರು.
————————————
ಬೆಂಗಳೂರು : ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಹಂತ ಹಂತವಾಗಿ ಸಫಾರಿ ಆರಂಭಿಸಲು ಮತ್ತು ಧಾರಣಾ ಶಕ್ತಿ ಮತ್ತು ಹುಲಿಗಳು ನಾಡಿನತ್ತ…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತವರು ಜಿಲ್ಲೆ ಮೈಸೂರಿನಲ್ಲಿ ಎರಡು ದಿನಗಳ ಕಾಲ ಪ್ರವಾಸ ಹಮ್ಮಿಕೊಂಡಿದ್ದಾರೆ. ಜ.5ರಂದು ಬೆಳಿಗ್ಗೆ…
ಮೈಸೂರು : ಅರಮನೆ ನಗರಿ ಮೈಸೂರಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಚಾಮುಂಡಿಬೆಟ್ಟದ ಸಂರಕ್ಷಣೆ ಮತ್ತು ಉಳಿವಿಗಾಗಿ ಜ.4ರಂದು(ಭಾನುವಾರ) ಜಾಗೃತಿ ಆಂದೋಲನವನ್ನು…
ಭೋಪಾಲ್ : ಇಂದೋರ್‌ನ ಭಗೀರಥಪುರದಲ್ಲಿ ಕಲುಷಿತ ಕುಡಿಯುವ ನೀರು ಸೇವನೆಯಿಂದ 11 ಜೀವಗಳು ಬಲಿಯಾಗಿವೆ. ಮತ್ತು 1400ಕ್ಕೂ ಹೆಚ್ಚು ನಿವಾಸಿಗಳ…
ಬೆಂಗಳೂರು : ಬ್ಯಾನರ್ ಕಟ್ಟುವ ವಿಷಯದಲ್ಲಿ ಕಳೆದ ರಾತ್ರಿ ಬಳ್ಳಾರಿ ನಗರದಲ್ಲಿ ನಡೆದ ಘಟನೆಯ ಕುರಿತು ಉಚ್ಚ ನ್ಯಾಯಾಲಯದ ಹಾಲಿ…
ಬೆಂಗಳೂರು : ಬಳ್ಳಾರಿಯಲ್ಲಿ ಗುರುವಾರ ರಾತ್ರಿ ವಾಲ್ಮೀಕಿ ಬ್ಯಾನರ್ ವಿಚಾರದಲ್ಲಿ ನಡೆದ ಎರಡು ಗುಂಪುಗಳ ಘರ್ಷಣೆ ವೇಳೆ ಫೈರಿಂಗ್ ಆಗಿ…