ಜಿಲ್ಲೆಗಳು

ಒಣಗಿದ ಮರ ಬಿದ್ದು ಪೌರಕಾರ್ಮಿಕ ಸಾವು

ಮಂಡ್ಯ: ಪತ್ನಿ ಮಕ್ಕಳೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಒಣಗಿ ನಿಂತಿದ್ದ ಮರ ಉರುಳಿ ಗುತ್ತಿಗೆ ಪೌರಕಾರ್ಮಿಕನೊರ್ವ ಮೃತಪಟ್ಟಿರುವ ದುರ್ಘಟನೆ ನಗರದ ತಾವರೆಗೆರೆಯಲ್ಲಿ ಸಂಭವಿಸಿದೆ.
ಮೃತ ಪೌರಕಾರ್ಮಿಕ ಉದಯಕುಮಾರ್ (೩೧) ಎಂದು ಗುರುತಿಸಲಾಗಿದೆ. ಮಂಡ್ಯ ನಗರಸಭೆಯ ನೇರಪಾವತಿ ಪೌರಕಾರ್ಮಿಕನಾಗಿದ್ದು, ಗುರುವಾರ ರಾತ್ರಿ ೯ ಗಂಟೆ ಸಮಯದಲ್ಲಿ ತನ್ನ ಹೆಂಡತಿ ಮಕ್ಕಳೊಂದಿಗೆ ನಗರದ ತಾವರೆಗೆರೆಯ ಚಲುವಯ್ಯ ಉದ್ಯಾನವನದ ಬಳಿ ಬೈಕ್‌ನಲ್ಲಿ ಸಾಗುವಾಗ ಒಣಗಿ ನಿಂತಿದ್ದ ಮರ ಉರುಳಿ ಸಾವನ್ನಪ್ಪಿದ್ದಾನೆ. ಜತೆಯಲ್ಲಿದ್ದ ಹೆಂಡತಿ ಮಕ್ಕಳು ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸದರಿ ಮರ ಒಣಗಿದ್ದು ಮರವನ್ನು ತೆರವುಗೊಳಿಸುವಂತೆ ಮಂಡ್ಯ ನಗರಸಭೆ ಅರಣ್ಯ ಇಲಾಖೆಗೆ ಪತ್ರವನ್ನು ಬರೆದಿದ್ದಾಗಿಯೂ ಅರಣ್ಯ ಇಲಾಖೆ ನಿರ್ಲಕ್ಷದಿಂದ ಈ ಪ್ರಕರಣ ನಡೆದಿದೆ ಎಂದು ಸಂಘಟನೆಗಳ ಮುಖಂಡರು ಆರೋಪಿಸಿದ್ದಾರೆ.
ಪರಿಹಾರಕ್ಕೆ ಆಗ್ರಹ:
ಮೃತ ಪೌರಕಾರ್ಮಿಕನ ಕುಟುಂಬಕ್ಕೆ ಕನಿಷ್ಟ ೨೦ ಲಕ್ಷ ರೂ.ಪರಿಹಾರ ನೀಡುವಂತೆ ಹಾಗೂ ಮೃತನ ಕುಟುಂಬಕ್ಕೆ ಅನುಕಂಪದ ನೌಕರಿ ನೀಡುವಂತೆ ಹೊರಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ಎಂ.ಬಿ.ನಾಗಣ್ಣಗೌಡ ಆಗ್ರಹಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ನಗರಸಭೆ ಅಧ್ಯಕ್ಷ ಮಂಜು, ಆಯುಕ್ತ ಮಂಜುನಾಥ್ ನಗರಸಭಾ ಸದಸ್ಯ ಶ್ರೀಧರ್ ಈ ಕುರಿತು ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಭರವಸೆ ನೀಡಿದರು.

————————————

andolanait

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

3 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

9 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

12 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

12 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

13 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

16 hours ago