ಚಾಮರಾಜನಗರ: ತಮ್ಮ ಜನ್ಮ ದಿನದಂದೇ, ಕಾಲೇಜು ಉಪನ್ಯಾಸಕಿಯೋರ್ವರು ಹಾಸ್ಟೆಲ್ ನಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿರುವ ಘಟನೆ ನಗರದಲ್ಲಿ ಮಂಗಳವಾರ ನಡೆದಿದೆ.
ನಗರದ ಜೆ ಎಸ್ ಎಸ್ ಕಾಲೇಜಿನ ಜೀವಶಾಸ್ತ್ರ ಉಪನ್ಯಾಸಕಿ ಚಂದನಾ (26)
ಮೃತರು.
ಅವಿವಾಹಿತೆಯಾಗಿದ್ದ ಚಂದನಾ ಯಳಂದೂರು ತಾಲ್ಲೂಕು ಅಂಬಳೆ ಗ್ರಾಮದ ನ್ಯಾಯಬೆಲೆ ಅಂಗಡಿ ಮಾಲೀಕ ಮಹದೇವಸ್ವಾಮಿ ಎಂಬುವರ ಪುತ್ರಿ.ನಗರದ ಜೆ ಎಸ್ ಎಸ್ ಕಾಲೇಜು ಜೀವಶಾಸ್ತ್ರ ಉಪನ್ಯಾಸಕಿಯಾಗಿದ್ದರು.
ಇಂದು ಬೆಳಿಗ್ಗೆ ಸುಮಾರು 10 ಗಂಟೆ ಸಮಯದಲ್ಲಿ ಘಟನೆ ನಡೆದಿರಬಹುದೆಂದು ಹೇಳಲಾಗಿದೆ. ಬೆ. 11.30 ಆದರೂ ಚಂದನಾ ಅವರು ಹಾಸ್ಟೆಲ್ ರೂಮಿನಿಂದ ಹೊರಬಾರದ ಕಾರಣ ವೆಂಟಿಲೇಟರ್ ಮೂಲಕ ನೋಡಿದಾಗ ನೇಣು ಹಾಕಿಕೊಂಡಿರುವುದು ಕಂಡು ಬಂದಿದೆ. ನಗರದ ಜೆ ಎಸ್ ಎಸ್ ಕಾಲೇಜು ಕ್ಯಾಂಪಸ್ ನಲ್ಲಿರುವ ಹಾಸ್ಟೆಲ್ ನಲ್ಲಿ ವಾಸವಿದ್ದರು.
ನನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಡೆತ್ ನೋಟ್ ನಲ್ಲಿ ಬರೆದಿದ್ದಾರೆ. ನಿಖರ ಕಾರಣ ತಿಳಿಸಿಲ್ಲ.
ಇಂದು ಅವರ ಜನ್ಮದಿನವಾಗಿದ್ದು ಹಾಸ್ಟೆಲ್ ಸಹೋದ್ಯೋಗಿಗಳುವ ಬೆಳಿಗ್ಗೆ ಶುಭ ಕೋರಿದ್ದಾರೆ. ತಿಂಡಿಗೆ ಕರೆದಾಗ ನನ್ನ ಮೂಡ್ ಚೆನ್ನಾಗಿಲ್ಲ ಆಮೇಲೆ ಬರುತ್ತೇನೆ ಎಂದು ಹೇಳಿದ್ದಾರೆ. ಕೆಲ ಸಮಯದ ಬಳಿಕ ಸಾವಿಗೆ ಶರಣಾಗಿದ್ದಾರೆ.
ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ರೈತರ ನಿಯೋಗದೊಂದಿಗೆ ಸಭೆ ನಡೆಸಿ ಕಾಂಗ್ರೆಸ್ ಸರ್ಕಾರ ರೈತರ…
ಹಾಸನ: ಈ ಜಿಲ್ಲೆಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬ ನೀಡಿದ ಕೊಡುಗೆ ಏನು ಎಂದು ಕೇಳಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ…
ಮೈಸೂರು: ಎಂಎಲ್‌ಸಿ ಸಿ.ಟಿ.ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಫೇಕ್ ಎನ್‌ಕೌಂಟರ್ ಮಾಡಲು ಯತ್ನಿಸಿದ್ದರು ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…
50 ವರ್ಷಗಳ ದೂರದೃಷ್ಟಿಯ ಡಿಪಿಆರ್ ಸಿದ್ಧ ಆಗಬೇಕು • ಭಾಮಿ ವಿ ಶೆಣೈ, ಮೈಸೂರು ಗ್ರಾಹಕರ ಪರಿಷತ್ ಮೈಸೂರು ಜಿಲ್ಲಾ…
ಹಾಸನ: ಸಿ.ಟಿ.ರವಿ ಪ್ರಕರಣದಲ್ಲಿ ಬೆಳಗಾವಿ ಪೊಲೀಸರು ನಡೆದುಕೊಂಡ ರೀತಿಯ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು;…
ಬೆಂಗಳೂರು: ರಾಜ್ಯದ ವಿವಿಧ ಕೈಗಾರಿಕಾ ವಲಯಗಳಲ್ಲಿ ಒಟ್ಟು ರೂ. 9,823 ಕೋಟಿ ರೂ. ಮೊತ್ತದ 10 ಪ್ರಸ್ತಾವನೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ…