ಮೈಸೂರು: ನಗರದ ಕೇಂದ್ರ ಕಾರಾಗೃಹದ ವಿಚಾರಣಾಧೀನ ಕೈದಿಯೊಬ್ಬರು ಅನಾರೋಗ್ಯದಿಂದ ಕೆ.ಆರ್.ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಚೆಕ್ ಬೌನ್ಸ್ ಪ್ರಕರಣದಲ್ಲಿ ವಿಚಾರಣಾಧೀನ ಕೈದಿಯಾಗಿ ಜೈಲು ಸೇರಿದ್ದ ಕುಂಬಾರಕೊಪ್ಪಲಿನ ನಿವಾಸಿ ನರಸಿಂಹ(40) ಮೃತಪಟ್ಟವರು. ಚೆಕ್ ಬೌನ್ಸ್ ಪ್ರಕರಣದ ಆರೋಪದ ಮೇಲೆ ಇವರನ್ನು ವಿವಿ ಪುರಂ ಠಾಣೆ ಪೊಲೀಸರು ಬಂಧಿಸಿ ಜನವರಿಯಲ್ಲಿ ವಿಚಾರಣಾಧೀನ ಕೈದಿಯಾಗಿ ಜೈಲಿಗೆ ಕಳುಹಿಸಿದ್ದರು. ಕಳೆದ ಎರಡು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ನರಸಿಂಹರಿಗೆ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಹು ಅಂಗಾಂಗ ವೈಫಲ್ಯ ಮತ್ತು ಜಾಂಡೀಸ್ ನಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮೃತಪಟ್ಟಿದ್ದಾರೆ. ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಕುಟುಂಬಸ್ಥರಿಗೆ ನೀಡಲಾಗಿದೆ. ಮಂಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು: ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಇಂದು(ಡಿ.23) ಮೈಸೂರಿನ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರ…
ಹುಬ್ಬಳ್ಳಿ : ಸಿಲಿಂಡರ್ ಸ್ಫೋಟಗೊಂಡ ಪರಿಣಾಮ 9 ಮಂದಿ ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ತಡರಾತ್ರಿ ಹುಬ್ಬಳ್ಳಿಯಲ್ಲಿ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಬಿಜೆಪಿ ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಅವರು ಆಕ್ಷೇಪಾರ್ಹ ನೀಡಿರುವ ಹೇಳಿಕೆಯ ಕೇಸ್…
ಶಿವರಾಜಕುಮಾರ್ ಶಸ್ತ್ರಚಿಕಿತ್ಸೆಗೆಂದು ಇತ್ತೀಚೆಗೆ ಅಮೇರಿಕಾಗೆ ಪ್ರಯಾಣ ಬೆಳಸಿದ್ದಾರೆ. ಜನವರಿ 26ರಂದು ಅವರು ಚಿಕಿತ್ಸೆ ಮುಗಿಸಿ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ. ಬೆಂಗಳೂರಿಗೆ ವಾಪಸ್ಸಾಗಿ…
ವಿಜಯ್ ರಾಘವೇಂದ್ರ ಅಭಿನಯದ ಮೂರು ಚಿತ್ರಗಳು ಈ ವರ್ಷ ಬಿಡುಗಡೆಯಾಗಿವೆ. ವಿಶೇಷವೆಂದರೆ, ‘ಕೇಸ್ ಆಫ್ ಕೊಂಡಾನ’, ‘ಜಾಗ್ 101’ ಮತ್ತು…
• ಕೆ.ಬಿ.ಶಂಶುದ್ದೀನ್ ಕುಶಾಲನಗರ ತಾಲ್ಲೂಕು ವ್ಯಾಪ್ತಿಯಲ್ಲಿ ಪಟ್ಟಣ ಅಭಿವೃದ್ಧಿಯಾದಂತೆ ಕಳ್ಳತನವೂ ಹೆಚ್ಚಳ; ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಲು ಒತ್ತಾಯ…