ಎಚ್.ಡಿ.ಕೋಟೆ: ಪಟ್ಟಣದ ಕೃಷ್ಣಾಪುರದ ವಿದ್ಯಾರ್ಥಿ ನಿಲಯದಲ್ಲಿ ಗಿರಿಜನ ವಿದ್ಯಾರ್ಥಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಪೊಲೀಸರು ವಾರ್ಡನ್ ಮತ್ತು ಅಡುಗೆಯವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.
ತಾಲ್ಲೂಕಿನ ಮಾರನಹಾಡಿ ಗಿರಿಜನ ಯುವಕ, ಪಟ್ಟಣದ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯ ಪಿುುಂಸಿ ವಿದ್ಯಾರ್ಥಿ ಆಕಾಶ್ ಸೋಮವಾರ ಪಟ್ಟಣದ ಕೃಷ್ಣಪುರದಲ್ಲಿರುವ ಖಾಸಗಿ ಕಟ್ಟಡದಲ್ಲಿರುವ ಪರಿಶಿಷ್ಟ ಪಂಗಡದ ವಿದ್ಯಾರ್ಥಿನಿಲಯದಲ್ಲಿ ನೇಣು ಬಿಗಿದ ರೀತಿಯಲ್ಲಿ ಸಾವನಪ್ಪಿದ್ದ.
ಸೋಮವಾರ ರಾತ್ರಿ ಆಕಾಶ್ ಅವರ ಮರಣೋತ್ತರ ಪರೀಕ್ಷೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆಯಿತು. ಮಂಗಳವಾರ ಮಧ್ಯಾಹ್ನ ಮಾರನ ಹಾಡಿಯಲ್ಲಿ ಅಂತ್ಯ ಸಂಸ್ಕಾರ ನೆರವೇರಿತು.
ಪ್ರಕರಣ ದಾಖಲಿಸಿಕೊಂಡಿರುವ ಸರ್ಕಲ್ ಇನ್‌ಸ್ಪೆಕ್ಟರ್ ಬಸವರಾಜ್ ಅವರ ತಂಡ ಸಾವಿನ ನಿಖರ ವಿಚಾರ ತಿಳಿಯಲು ವಿದ್ಯಾರ್ಥಿ ನಿಲಯದ ವಾರ್ಡನ್, ಅಡುಗೆಯವರು ಹಾಗೂ ಆತನ ಸ್ನೇಹಿತರು, ಶಿಕ್ಷಕ, ಶಿಕ್ಷಕಿಯರ ವಿಚಾರಣೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ಮತ್ತಷ್ಟು ಕ್ರಮ ಕೈಗೊಳ್ಳುವುದಾಗಿ ಪತ್ರಿಕೆಗೆ ತಿಳಿಸಿದ್ದಾರೆ.
ಪರಿಶಿಷ್ಟ ಕಲ್ಯಾಣ ಇಲಾಖೆಯ ಅಧಿಕಾರಿ ನಾರಾಯಣಸ್ವಾಮಿ ಮಾತನಾಡಿ, ಪ್ರಕರಣಕ್ಕೆ ಸಂಬಂಧಿಸಿದಂತೆ ವಾರ್ಡನ್ ಮತ್ತು ಅಡುಗೆಯವರಿಗೆ ಈ ಸಂಬಂಧ ನೋಟಿಸ್ ಜಾರಿ ಮಾಡಲಾಗಿದೆ ಎಂದು ತಿಳಿಸಿದರು.
ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…
ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…
ನವದೆಹಲಿ: ಇರಾನ್ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್ ದರವನ್ನು 2 ರೂಗೆ ಏರಿಕೆ ಮಾಡಿದೆ.…
ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…
ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…
ಟೆಹರಾನ್: ಇರಾನ್ ಮೇಲೆ ಅಮೇರಿಕಾ ಹಾಗೂ ಇಸ್ರೇಲ್ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…