ಚಾಮರಾಜನಗರ: ಸಣ್ಣ ಕಾಮಗಾರಿಗಳನ್ನು ಕ್ರೋಢೀಕರಿಸಿ ಬೃಹತ್ ಟೆಂಡರ್ ನೀಡುವುದರ ರದ್ದತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ವತಿಯಿಂದ ಡಿ.೫ ರಿಂದ ಬೆಂಗಳೂರಿನಲ್ಲಿ ಅನಿರ್ದಿಷ್ಟ ಮುಷ್ಕರ ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯ ನೂರಾರು ಗುತ್ತಿಗೆದಾರರು ಇದರಲ್ಲಿ ಭಾಗವಹಿಸಲಿದ್ದಾರೆ ಎಂದು ಸಂಘದ ಜಿಲ್ಲಾ ಅಧ್ಯಕ್ಷ ಉಮ್ಮತ್ತೂರು ಚಂದ್ರಶೇಖರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸರ್ಕಾರದ ಆದೇಶದಂತೆ ೧ ರಿಂದ ೫ ಲಕ್ಷ ರೂ.ವರೆಗಿನ ಕಾಮಗಾರಿಗಳನ್ನು ಸ್ಥಳೀಯ ಗುತ್ತಿಗೆದಾರರಿಗೆ ನೀಡಬೇಕು. ಬೆಳಕುಯೋಜನೆಯ ದರವನ್ನು ಬೆಸ್ಕಾಂ ಮಾದರಿಯಲ್ಲಿ ಎಸ್ಕಾಂಗಳಿಗೂ ನೀಡಬೇಕು. ಕಾಮಗಾರಿ ನಿರ್ವಹಿಸುವ ಬಿಲ್‌ಗಳಿಗೆ ತ್ವರಿತವಾಗಿ ಹಣಕಾಸು ಮಂಜೂರು ಮಾಡಬೇಕು. ಶೀಘ್ರ ವಿದ್ಯುತ್ ಯೋಜನೆಯಲ್ಲಿ ಕಳೆದ ಒಂದು ವರ್ಷದಿಂದ ಅನುದಾನ ನೀಡದೆ ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ತೊಂದರೆಯಾಗಿದ್ದು, ಪ್ರತಿಭಟನೆ ವೇಳೆ ಸರ್ಕಾರದ ಗಮನ ಸೆಳೆಯಲಾಗುವುದು ಎಂದರು.
ಅನಧಿಕೃತ ಬಡಾವಣೆಗಳಿಗೆ ಅಭಿವೃದ್ದಿ ಶುಲ್ಕ ನೆಪದಲ್ಲಿ ಹೆಚ್ಚುವರಿ ಹಣ ಸಂಗ್ರಹಿಸಲಾಗುತ್ತಿದೆ. ಇದರಿಂದ ಗ್ರಾಹಕರಿಗೆ ತೊಂದರೆಯಾಗುತ್ತಿದ್ದು ಹಿಂದಿನ ಆದೇಶದಂತೆ ಹಣ ಸಂಗ್ರಹಿಸಬೇಕು. ಎಲ್ಲಾ ಎಸ್ಕಾಂಗಳಲ್ಲಿ ಏಕರೂಪ ನೀತಿಯಲ್ಲಿ ಕೆಇಆರ್‌ಸಿ ನಿಯಮ ಪಾಲಿಸಬೇಕು. ಕ್ಲಾಸ್-೨ ನಿಂದ ಕ್ಲಾಸ್-೧ಗೆ ಏರಿಸಲು ಅನುಭವದ ಆಧಾರ ಮೇಲೆ ಲೈಸನ್ಸ್ ನೀಡಬೇಕು. ಸರ್ವರ್ ಮತ್ತು ಮೀಟರ್‌ಗಳ ಸಮಸ್ಯೆಯನ್ನು ಬಗೆಹರಿಸಬೇಕು ಎಂಬಿತ್ಯಾದಿ ಬೇಡಿಕೆಗಳ ಈಡೇರಿಕೆಗೆ ಮುಷ್ಕರ ನಡೆಸಲಾಗುತ್ತಿದೆ ಎಂದರು.
ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭಾನುಪ್ರಕಾಶ್, ಉಪಾಧ್ಯಕ್ಷ ಅನ್ಸರ್ ಅಲಿಖಾನ್, ಖಜಾಂಚಿ ಸಂಪತ್ ಕುಮಾರ್, ಸಂಘಟನಾ ಕಾರ್ಯದರ್ಶಿ ರವಿಕುಮಾರ್, ತಾಲ್ಲೂಕು ಸಹ ಕಾರ್ಯದರ್ಶಿ ಕಿರಗಸೂರು ಬಸವಣ್ಣ, ಮಹದೇವು ಹಾಜರಿದ್ದರು.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…