ರೈತರ ಅನಿರ್ಧಿಷ್ಟಾವಧಿ ಹೋರಾಟಕ್ಕೆ ಸ್ಪಂದಿಸದ ಸರ್ಕಾರ: ಕೆಂಪೂಗೌಡ
ಮಂಡ್ಯ: ಕಳೆದ ೫೧ ದಿನಗಳಿಂದ ಕಬ್ಬು ಹಾಗೂ ಹಾಲು ಬೆಲೆ ನಿಗದಿಗಾಗಿ ಒತ್ತಾಯಿಸಿ ರೈತಸಂಘವು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಹೋರಾಟಕ್ಕೆ ಸರ್ಕಾರಗಳು ಸ್ಪಂದಿಸದ ಹಿನ್ನೆಲೆಯಲ್ಲಿ ಡಿ.೨೮ರಂದು ವಿಭಿನ್ನ ರೀತಿಯ ಹೋರಾಟ ನಡೆಸಲಾಗುವುದು. ಹಾಗೆೆಯೇ ಡಿ.30ರಂದು ಮಂಡ್ಯ ನಗರಕ್ಕೆ ಆಗಮಿಸುತ್ತಿರುವ ಕೇಂದ್ರ ಸಚಿವ ಅಮಿತ್ ಶಾ ಅವರಿಗೆ ಕಬ್ಬು ಬಾವುಟ ಪ್ರದರ್ಶಿಸಲಾಗುವುದು ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡ ತಿಳಿಸಿದರು.
ಪ್ರತಿ ಟನ್ ಕಬ್ಬಿಗೆ ೪೫೦೦ ರೂ., ಲೀಟರ್ ಹಾಲಿಗೆ ೪೦ ರೂ. ದರ ಸೇರಿದಂತೆ ರೈತರ ಇನ್ನಿತರೆ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರ್ ಎಂ.ವಿ.ಪ್ರತಿಮೆ ಎದುರು ರೈತಸಂಘ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸುತ್ತಿದೆ. ಮೂರ್ನಾಲ್ಕು ದಿನಗಳ ಹಿಂದೆ ರೈತ ಸಂಘದ ಕರೆ ಮೇರೆಗೆ ಮಂಡ್ಯ ನಗರ ಬಂದ್ ಕೂಡ ಯಶಸ್ವಿಯಾಗಿದೆ. ಇಷ್ಟಾಗಿಯೂ ಸರ್ಕಾರಗಳು ರೈತರ ಮನವಿಗೆ ಸ್ಪಂದಿಸುತ್ತಿಲ್ಲ. ಹೀಗಾಗಿ ಹೋರಾಟದ ರೂಪ ಬದಲಿಸಲು ತೀರ್ಮಾನಿಸಲಾಗಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಅವರು ಹೇಳಿದರು.
ಬೆಳಗಾವಿಯಲ್ಲಿ ನಡೆುಯುತ್ತಿರುವ ವಿಧಾನಸಭೆ ಅಧಿವೇಶನದಲ್ಲಿ ಪ್ರತಿಪಕ್ಷಗಳು ರೈತರ ಸಮಸ್ಯೆ ಮತ್ತು ಕಬ್ಬಿನ ದರ ನಿಗದಿ ವಿಚಾರವಾಗಿ ಮಾತನಾಡದಿರುವುದು ಖಂಡನೀಯ. ರೈತರ ಹೋರಾಟದ ಬಗ್ಗೆಯೂ ಪ್ರಸ್ತಾಪಿಸಿಲ್ಲ. ಜಾ.ದಳ, ಕಾಂಗ್ರೆಸ್ ಸರಿಯಾಗಿ ತಮ್ಮ ಜವಾಬ್ದಾರಿ ನಿರ್ವಹಿಸಿಲ್ಲ. ಈ ಮಧ್ಯೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಅಧಿವೇಶನದಲ್ಲಿ ಹೋಗಿ ಮಾತನಾಡುವುದನ್ನು ಬಿಟ್ಟು, ಜಿಲ್ಲೆಯಲ್ಲಿ ಪಂಚರತ್ನ ಯಾತ್ರೆ ನಡೆಸುತ್ತಿದ್ದಾರೆ. ಇದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.
ಭತ್ತದ ಬೆಳೆಗೆ ನೀಡುತ್ತಿರುವ ಕನಿಷ್ಠ ಬೆಂಬಲ ಬೆಲೆಯನ್ನು ಸರ್ಕಾರ ಕಾನೂನು ಬದ್ಧಗೊಳಿಸಬೇಕೆಂದು ಒತ್ತಾಯಿಸಿದ ಅವರು, ಮಂಡ್ಯ ಬಂದ್‌ಗೆ ಸಹಕರಿಸಿದ ವಿದ್ಯಾರ್ಥಿಗಳು, ವರ್ತಕರು, ವ್ಯಾಪಾರಿಗಳು, ಹೋಟೆಲ್ ಮತ್ತು ಬೇಕರಿ ವಾಲೀಕರು ಸೇರಿದಂತೆ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಹೋರಾಟದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಿದ ಎಲ್ಲರಿಗೂ ರೈತಸಂಘ ಕೃತಜ್ಞತೆ ಸಲ್ಲಿಸುತ್ತದೆ ಎಂದು ಹೇಳಿದರು.
ರೈತಸಂಘದ ಪದಾಧಿಕಾರಿಗಳಾದ ಲಿಂಗಪ್ಪಾಜಿ, ಚಿದಾನಂದ, ದಯಾನಂದ, ಚಂದ್ರು, ವೆಂಕಟೇಶ್, ಎಂ.ವಿ.ಜಗದೀಶ್, ವಿಜಯಕುಮಾರ್, ಕುಮಾರ್ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.
ಮೈಸೂರು : ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…
ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ನಡೆಸುವ ಕುರಿತಂತೆ ಪರಿಶೀಲಿಸಲು ಸಮಿತಿ ರಚಿಸಲಾಗಿದೆ ಎಂದು ಗೃಹ ಸಚಿವರಾದ…
ಚಾಮರಾಜನಗರ : ಜಿಲ್ಲೆಯ ನಂಜೇದೇವನಪುರ ಗ್ರಾಮದ ಕಲ್ಲು ಕ್ವಾರಿಯೊಂದರಲ್ಲಿ 5 ಹುಲಿಗಳ ಇರುವಿಕೆ ಡ್ರೋಣ್‌ನಲ್ಲಿ ಸೆರೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿ…
ಮೈಸೂರು : ಬೆಳಗಾವಿಯಲ್ಲಿ ನಡೆದ ಚಳಿಗಾಲದ ವಿಧಾನಮಂಡಲ ಅಧಿವೇಶನದಲ್ಲಿ ಪಾಲ್ಗೊಂಡಿದ್ದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಸೋಮವಾರ ನಗರದಲ್ಲಿ…
ಬೆಂಗಳೂರು : ಜನರಿಗೆ ಉತ್ತಮ ಆರೋಗ್ಯ ಸೇವೆ ನೀಡುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆಗಳನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಾಗಿ ಮೇಲ್ದರ್ಜೆಗೇರಿಸಲು…
ವೆಲ್ಲಿಂಗ್ಟನ್ : ಭಾರತದೊಂದಿಗೆ ಮುಕ್ತ ವ್ಯಾಪಾರ ಒಪ್ಪಂದದ ಮಾತುಕತೆ ಅಂತಿಮವಾಗಿದೆ ಎಂದು ನ್ಯೂಜಿಲೆಂಡ್ ಪ್ರಧಾನಿ ಕ್ರಿಸ್ಟೋಫರ್ ಲುಕ್ಸನ್ ಸೋಮವಾರ ಹೇಳಿದ್ದಾರೆ.…