ಜಿಲ್ಲೆಗಳು

ಅಮಿತಾ ಶಾಗೆ ಕಪ್ಪು ಬಾವುಟ ಪ್ರದರ್ಶಿಸಲು ನಿರ್ಧಾರ

ರೈತರ ಅನಿರ್ಧಿಷ್ಟಾವಧಿ ಹೋರಾಟಕ್ಕೆ ಸ್ಪಂದಿಸದ ಸರ್ಕಾರ: ಕೆಂಪೂಗೌಡ

ಮಂಡ್ಯ: ಕಳೆದ ೫೧ ದಿನಗಳಿಂದ ಕಬ್ಬು ಹಾಗೂ ಹಾಲು ಬೆಲೆ ನಿಗದಿಗಾಗಿ ಒತ್ತಾಯಿಸಿ ರೈತಸಂಘವು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಹೋರಾಟಕ್ಕೆ ಸರ್ಕಾರಗಳು ಸ್ಪಂದಿಸದ ಹಿನ್ನೆಲೆಯಲ್ಲಿ ಡಿ.೨೮ರಂದು ವಿಭಿನ್ನ ರೀತಿಯ ಹೋರಾಟ ನಡೆಸಲಾಗುವುದು. ಹಾಗೆೆಯೇ ಡಿ.30ರಂದು ಮಂಡ್ಯ ನಗರಕ್ಕೆ ಆಗಮಿಸುತ್ತಿರುವ ಕೇಂದ್ರ ಸಚಿವ ಅಮಿತ್ ಶಾ ಅವರಿಗೆ ಕಬ್ಬು ಬಾವುಟ ಪ್ರದರ್ಶಿಸಲಾಗುವುದು ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡ ತಿಳಿಸಿದರು.

ಪ್ರತಿ ಟನ್ ಕಬ್ಬಿಗೆ ೪೫೦೦ ರೂ., ಲೀಟರ್ ಹಾಲಿಗೆ ೪೦ ರೂ. ದರ ಸೇರಿದಂತೆ ರೈತರ ಇನ್ನಿತರೆ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರ್ ಎಂ.ವಿ.ಪ್ರತಿಮೆ ಎದುರು ರೈತಸಂಘ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸುತ್ತಿದೆ. ಮೂರ್ನಾಲ್ಕು ದಿನಗಳ ಹಿಂದೆ ರೈತ ಸಂಘದ ಕರೆ ಮೇರೆಗೆ ಮಂಡ್ಯ ನಗರ ಬಂದ್ ಕೂಡ ಯಶಸ್ವಿಯಾಗಿದೆ. ಇಷ್ಟಾಗಿಯೂ ಸರ್ಕಾರಗಳು ರೈತರ ಮನವಿಗೆ ಸ್ಪಂದಿಸುತ್ತಿಲ್ಲ. ಹೀಗಾಗಿ ಹೋರಾಟದ ರೂಪ ಬದಲಿಸಲು ತೀರ್ಮಾನಿಸಲಾಗಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಅವರು ಹೇಳಿದರು.

ಬೆಳಗಾವಿಯಲ್ಲಿ ನಡೆುಯುತ್ತಿರುವ ವಿಧಾನಸಭೆ ಅಧಿವೇಶನದಲ್ಲಿ ಪ್ರತಿಪಕ್ಷಗಳು ರೈತರ ಸಮಸ್ಯೆ ಮತ್ತು ಕಬ್ಬಿನ ದರ ನಿಗದಿ ವಿಚಾರವಾಗಿ ಮಾತನಾಡದಿರುವುದು ಖಂಡನೀಯ. ರೈತರ ಹೋರಾಟದ ಬಗ್ಗೆಯೂ ಪ್ರಸ್ತಾಪಿಸಿಲ್ಲ. ಜಾ.ದಳ, ಕಾಂಗ್ರೆಸ್ ಸರಿಯಾಗಿ ತಮ್ಮ ಜವಾಬ್ದಾರಿ ನಿರ್ವಹಿಸಿಲ್ಲ. ಈ ಮಧ್ಯೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಅಧಿವೇಶನದಲ್ಲಿ ಹೋಗಿ ಮಾತನಾಡುವುದನ್ನು ಬಿಟ್ಟು, ಜಿಲ್ಲೆಯಲ್ಲಿ ಪಂಚರತ್ನ ಯಾತ್ರೆ ನಡೆಸುತ್ತಿದ್ದಾರೆ. ಇದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.

ಭತ್ತದ ಬೆಳೆಗೆ ನೀಡುತ್ತಿರುವ ಕನಿಷ್ಠ ಬೆಂಬಲ ಬೆಲೆಯನ್ನು ಸರ್ಕಾರ ಕಾನೂನು ಬದ್ಧಗೊಳಿಸಬೇಕೆಂದು ಒತ್ತಾಯಿಸಿದ ಅವರು, ಮಂಡ್ಯ ಬಂದ್‌ಗೆ ಸಹಕರಿಸಿದ ವಿದ್ಯಾರ್ಥಿಗಳು, ವರ್ತಕರು, ವ್ಯಾಪಾರಿಗಳು, ಹೋಟೆಲ್ ಮತ್ತು ಬೇಕರಿ ವಾಲೀಕರು ಸೇರಿದಂತೆ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಹೋರಾಟದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಿದ ಎಲ್ಲರಿಗೂ ರೈತಸಂಘ ಕೃತಜ್ಞತೆ ಸಲ್ಲಿಸುತ್ತದೆ ಎಂದು ಹೇಳಿದರು.

ರೈತಸಂಘದ ಪದಾಧಿಕಾರಿಗಳಾದ ಲಿಂಗಪ್ಪಾಜಿ, ಚಿದಾನಂದ, ದಯಾನಂದ, ಚಂದ್ರು, ವೆಂಕಟೇಶ್, ಎಂ.ವಿ.ಜಗದೀಶ್, ವಿಜಯಕುಮಾರ್, ಕುಮಾರ್ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

andolanait

Recent Posts

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

30 mins ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

6 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

13 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

13 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

13 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

13 hours ago