ಹನೂರು: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಯಾತ್ರಾ ಕ್ಷೇತ್ರ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಬಹಳ ವಿಜೃಂಭಣೆಯಿಂದ ಹಾಲರವಿ ಉತ್ಸವ ಜರುಗಿತು.
ಹಾಲರವಿ ಉತ್ಸವವು ದೀಪಾವಳಿ ಜಾತ್ರಾ ಮಹೋತ್ಸವದ ವಿಶೇಷ ಉತ್ಸವ ವಾಗಿದ್ದು, ಈ ಉತ್ಸವದಲ್ಲಿ ಬೇಡಗಂಪಣರ 101 ಹೆಣ್ಣು ಮಕ್ಕಳು ಸಾಂಪ್ರದಾಯಿಕ ಉಡುಗೆಗಳನ್ನು ಧರಿಸಿ ವಿವಿಧ ವಾದ್ಯ ಮೇಳಗಳೊಂದಿಗೆ ದಟ್ಟ ಕಾನನದ ನಡುವೆ ಹರಿಯುವ ಹಾಲು ಹಳ್ಳದಿಂದ 101 ಕುಂಭಗಳ ಹಾಲರವಿ ಉತ್ಸವವನ್ನು ನೆರವೇರಿಸಲಾಯಿತು.
ಮಲೆ ಮಾದಪ್ಪನಿಗೆ ದೀಪಾವಳಿ ಜಾತ್ರಾ ಮಹೋತ್ಸವದ ಅಂಗವಾಗಿ ಎಣ್ಣೆ ಮಜ್ಜನೆ ಸೇವೆ, ಧಾರ್ಮಿಕ ಉತ್ಸವಗಳು ಸಾವಿರಾರು ಭಕ್ತರ ಸಮ್ಮುಖದಲ್ಲಿ ಭಕ್ತಿ ಪೂರ್ಣವಾಗಿ ಬಹಳ ವಿಜೃಂಭಣೆಯಿಂದ ನೆರವೇರಿತು.
ಸಾಲೂರು ಬೃಹನ್ಮಠದ ಪೀಠಾಧಿಪತಿ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರ ಸಾನಿಧ್ಯದಲ್ಲಿ ಮಹಾಮಂಗಳಾರತಿ ಬೆಳಗಿಸಿ ನೈವೇದ್ಯ ಅರ್ಪಿಸಿ ದೀವಟಿಗೆ ಸೇವೆಯನ್ನು ಮಾಡಲಾಯಿತು. ಬಳಿಕ ಸ್ವಾಮಿಯ ಉತ್ಸವ ಮೂರ್ತಿಯನ್ನು ವಿವಿಧ ಪುಷ್ಪಾಲಂಕಾರಗಳಿಂದ ಸಿಂಗರಿಸಲಾಗಿದ್ದ ಪಲ್ಲಕ್ಕಿಯಲ್ಲಿ ಇರಿಸಿ ದೇಗುಲದ ಸುತ್ತಾ ಪ್ರದಕ್ಷಿಣೆ ಹಾಕಲಾಯಿತು.
ಚಾ.ನಗರ ಮೈಸೂರು, ರಾಮನಗರ, ಮಂಡ್ಯ, ಬೆಂಗಳೂರು ನಗರ ಮಾತು ಗ್ರಾಮಾಂತರ ಜಿಲ್ಲೆಗಳು ಸೇರಿದಂತೆ ನೆರೆಯ ತಮಿಳುನಾಡಿನಿಂದಲೂ ಭಕ್ತರ ದಂಡು ನೆರೆದಿತ್ತು. ಹಲವು ಭಕ್ತರು ತಂಡೋಪತಂಡವಾಗಿ ಕಾಲ್ನಡಿಗೆ ಮೂಲಕವೂ ಬಂದು ಮ.ಬೆಟ್ಟದಲ್ಲಿಯೇ ಬೀಡು ಬಿಟ್ಟಿದ್ದರು.
ಹರಕೆ ಹೊತ್ತ ಭಕ್ತರು ಮುಡಿಸೇವೆ, ಪೆಂಜಿನಸೇವೆ, ಉರುಳು ಸೇವೆ, ಚಿನ್ನದ ತೇರು ಸೇವೆ, ಹುಲಿವಾಹನ ಸೇವೆ, ರುದ್ರಾಕ್ಷಿವಾಹನ ಸೇವೆ ಹಾಗೂ ಬಸವ ವಾಹನ ಸೇವೆಗಳನ್ನೂ ಮಾಡುವ ಜೊತೆಗೆ ಕೆಲವರು ಪರ(ಪರ್ವ)ಸೇವೆಯನ್ನು ನೆರವೇರಿಸಿ ಅನ್ನ ಸಂತರ್ಪಣೆ ಮಾಡಿ ಮಾದಪ್ಪನ ಕೃಪೆಗೆ ಪಾತ್ರರಾದರು.
ಬೆಂಗಳೂರು: ಇರಾನ್-ಇಸ್ರೇಲ್ ನಡುವಿನ ಸಂಘರ್ಷ ಏರ್ಪಟ್ಟಿರುವ ಪರಿಣಾಮ ಕನ್ನಡಿಗರ ರಕ್ಷಣೆಗೆ ತುರ್ತು ಕ್ರಮ ಕೈಗೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ…
ನಾಪೋಕ್ಲು: ಕಾನೂನು ವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ವಾಗ್ದಾಳಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೊಳಸಿಕೆರೆ ಗ್ರಾಮದ…
ಬೆಂಗಳೂರು: ಈ ಬಾರಿಯ ಬಜೆಟ್ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು…
ಕೊಡಗು: ನಾಳೆ ವರ್ಷದ ಮೊದಲ ಚಂದ್ರಗ್ರಹಣ ಹೋಳಿ ಹುಣ್ಣಿಮೆಯ ದಿನದಂದು ಸಂಭವಿಸುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಹಲವು ದೇವಾಲಯಗಳ ಪೂಜಾ…
ಮಂಡ್ಯ: ಜಿಲ್ಲೆಯ ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನು ಸ್ಥಳೀಯರ ಆಶಯಗಳಿಗೆ ವಿರುದ್ಧವಾಗಿ ಮದ್ದೂರು…