Mysore
23
scattered clouds

Social Media

ಶನಿವಾರ, 25 ಏಪ್ರಿಲ 2026
Light
Dark

ಜಿಂಕೆ ಚರ್ಮ ಮಾರಾಟಕ್ಕೆ ಯತ್ನ: ಆರೋಪಿ ಬಂಧನ

ಮಡಿಕೇರಿ: ಅಕ್ರಮವಾಗಿ ಜಿಂಕೆಯ ಚರ್ಮವನ್ನು ವಶದಲ್ಲಿಟ್ಟುಕೊಂಡು ಮಾರಾಟ ಮಾಡಲು ಯತ್ನಿಸಿದ ಆರೋಪಿಯನ್ನು ಬಂಧಿಸುವಲ್ಲಿ ಸಿ.ಐ.ಡಿ ಪೊಲೀಸ್ ಅರಣ್ಯ ಘಟಕದ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ.
ಮೈಸೂರಿನ ನಂಜನಗೂಡು ನಿವಾಸಿ ವೆಂಕಟೇಶ್ ಬಂಧಿತ ಆರೋಪಿ.
ಮಡಿಕೇರಿ ನಗರ ಸುದರ್ಶನ ವೃತ್ತದ ಹತ್ತಿರ ಸಿದ್ದಾಪುರ ಕಡೆಗೆ ಹೋಗುವ ರಸ್ತೆಯ ಬಸ್ ನಿಲ್ದಾಣದ ಬಳಿ ವೆಂಕಟೇಶ್ ಸರ್ಕಾರದ ಪರವಾನಗೆ ಇಲ್ಲದೆ ಅಕ್ರಮವಾಗಿ ಜಿಂಕೆಯ ಚರ್ಮ ಮಾರಾಟ ಮಾಡಲು ಪ್ರಯತ್ನಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಯಿತು. ಜಿಂಕೆ ಚರ್ಮ ಹಾಗೂ ಆರೋಪಿಯನ್ನು ಕಾರ್ಯಾಚರಣೆ ತಂಡ ವಶಕ್ಕೆ ಪಡೆದಿದೆ.
ಕಾರ್ಯಾಚರಣೆಯಲ್ಲಿ ಸಿ.ಐ.ಡಿ ಪೊಲೀಸ್ ಅರಣ್ಯ ಘಟಕದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಕೆ.ವಿ ಶರತ್‌ಚಂದ್ರ ನಿರ್ದೇಶನದ ಮೇರೆಗೆ ಮಡಿಕೇರಿ ಸಿ.ಐ.ಡಿ ಪೊಲೀಸ್ ಅರಣ್ಯ ಘಟಕದ ಪೊಲೀಸ್ ಅಧೀಕ್ಷಕ ಕೆ.ಬಿ ವಿಶ್ವನಾಥ್ ರವರ ಮಾರ್ಗದರ್ಶನದಲ್ಲಿ ಮಡಿಕೇರಿ ಅರಣ್ಯ ಸಂಚಾರಿ ದಳದ ಪಿ.ಎಸ್.ಐ ಸಿ.ಯು ಸವಿ, ಹೆಡ್ ಕಾನ್ಸ್‌ಟೇಬಲ್‌ಗಳಾದ ಶೇಖರ್, ರಾಜೇಶ್, ರಾಘವೇಂದ್ರ, ಯೋಗೇಶ್, ಮೋಹನ ಮತ್ತು ಕಾನ್ಸ್‌ಟೇಬಲ್‌ಗಳಾದ ಸ್ವಾಮಿ, ಮಂಜುನಾಥ ಪಾಲ್ಗೊಂಡಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!