ಮಡಿಕೇರಿ: ಅಕ್ರಮವಾಗಿ ಜಿಂಕೆಯ ಚರ್ಮವನ್ನು ವಶದಲ್ಲಿಟ್ಟುಕೊಂಡು ಮಾರಾಟ ಮಾಡಲು ಯತ್ನಿಸಿದ ಆರೋಪಿಯನ್ನು ಬಂಧಿಸುವಲ್ಲಿ ಸಿ.ಐ.ಡಿ ಪೊಲೀಸ್ ಅರಣ್ಯ ಘಟಕದ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ.
ಮೈಸೂರಿನ ನಂಜನಗೂಡು ನಿವಾಸಿ ವೆಂಕಟೇಶ್ ಬಂಧಿತ ಆರೋಪಿ.
ಮಡಿಕೇರಿ ನಗರ ಸುದರ್ಶನ ವೃತ್ತದ ಹತ್ತಿರ ಸಿದ್ದಾಪುರ ಕಡೆಗೆ ಹೋಗುವ ರಸ್ತೆಯ ಬಸ್ ನಿಲ್ದಾಣದ ಬಳಿ ವೆಂಕಟೇಶ್ ಸರ್ಕಾರದ ಪರವಾನಗೆ ಇಲ್ಲದೆ ಅಕ್ರಮವಾಗಿ ಜಿಂಕೆಯ ಚರ್ಮ ಮಾರಾಟ ಮಾಡಲು ಪ್ರಯತ್ನಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಯಿತು. ಜಿಂಕೆ ಚರ್ಮ ಹಾಗೂ ಆರೋಪಿಯನ್ನು ಕಾರ್ಯಾಚರಣೆ ತಂಡ ವಶಕ್ಕೆ ಪಡೆದಿದೆ.
ಕಾರ್ಯಾಚರಣೆಯಲ್ಲಿ ಸಿ.ಐ.ಡಿ ಪೊಲೀಸ್ ಅರಣ್ಯ ಘಟಕದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಕೆ.ವಿ ಶರತ್‌ಚಂದ್ರ ನಿರ್ದೇಶನದ ಮೇರೆಗೆ ಮಡಿಕೇರಿ ಸಿ.ಐ.ಡಿ ಪೊಲೀಸ್ ಅರಣ್ಯ ಘಟಕದ ಪೊಲೀಸ್ ಅಧೀಕ್ಷಕ ಕೆ.ಬಿ ವಿಶ್ವನಾಥ್ ರವರ ಮಾರ್ಗದರ್ಶನದಲ್ಲಿ ಮಡಿಕೇರಿ ಅರಣ್ಯ ಸಂಚಾರಿ ದಳದ ಪಿ.ಎಸ್.ಐ ಸಿ.ಯು ಸವಿ, ಹೆಡ್ ಕಾನ್ಸ್‌ಟೇಬಲ್‌ಗಳಾದ ಶೇಖರ್, ರಾಜೇಶ್, ರಾಘವೇಂದ್ರ, ಯೋಗೇಶ್, ಮೋಹನ ಮತ್ತು ಕಾನ್ಸ್‌ಟೇಬಲ್‌ಗಳಾದ ಸ್ವಾಮಿ, ಮಂಜುನಾಥ ಪಾಲ್ಗೊಂಡಿದ್ದರು.
ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…
ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…
ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…
ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…
ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…