ಚಾಮರಾಜನಗರ: ನಿಯಮಬಾಹಿರ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆಯನ್ನು ತಡೆ ಹಿಡಿಯಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿಯ ಜಿಲ್ಲಾ ಘಟಕದ ವತಿಯಿಂದ ನಗರದ ಜಿಲ್ಲಾಡಳಿತ ಭವನದ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ೪೩೦ ಸರ್ಕಾರಿ ಪದವಿ ಕಾಲೇಜುಗಳಿದ್ದು ೩ ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಗುಣಮಟ್ಟದ ಬೋಧನೆಯನ್ನು ಕಳೆದ ಎರಡು ದಶಕಗಳಿಂದ ಶೇ.೮೦ ರಷ್ಟು ಅತಿಥಿ ಉಪನ್ಯಾಸಕರು ನೀಡಿದ್ದಾರೆ. ಇವರ ಸೇವೆಯನ್ನು ಕಾಲೇಜು ಶಿಕ್ಷಣ ಬಳಸಿಕೊಂಡಿದೆ ಎಂದರು.
ಕರ್ನಾಟಕ ನಾಗರಿಕ ಸೇವಾ ನೇಮಕಾತಿ ೧೯೭೭ ನಿಯಮ ೧೪ರ ಅಡಿ ಅತಿಥಿ ಉಪನ್ಯಾಸಕರನ್ನು ಸೇವೆಯಲ್ಲಿ ವಿಲೀನಗೊಳಿಸಲು ವಿಧಾನ ಮಂಡಲದ ಅಧಿವೇಶನದಲ್ಲಿ ಮಂಡಿಸಿ ತೀರ್ಮಾನ ಕೈಗೊಳ್ಳಬೇಕು. ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಅನುಸಾರ ತರಗತಿಯನ್ನು ೪೦ಃ೬೦ರ ಪ್ರಕಾರ ತರಗತಿ ವಿಭಜಿಸಿ ಕಾರ್ಯಭಾರ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.
ಸ್ಥಳಕ್ಕಾಗಮಿಸಿದ ಎಡಿಸಿ ಕಾತ್ಯಾಯಿನಿದೇವಿ ಅವರು ಅಹವಾಲು ಸ್ವೀಕರಿಸಿದರು. ಬಳಿಕ ಅವರಿಗೆ ಮನವಿ ಸಲ್ಲಿಸಿ ಪ್ರತಿಭಟನೆಯನ್ನು ಕೈಬಿಡಲಾಯಿತು. ಸಮಿತಿಯ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನಸ್ವಾಮಿ, ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ…
ಮಂಡ್ಯ: ಹಾಸ್ಯ ಸಾಹಿತ್ಯ ಆಧುನಿಕ ಬದುಕಿನಗೆ ಔಷಧಿಯಾಗಿದೆ ಎಂದು ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು. 87ಅಖಿಲ ಭಾರತ ಕನ್ನಡ ಸಾಹಿತ್ಯ…
ಮಡಿಕೇರಿ: ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದ್ದು, ಸಮಸ್ಯೆ ಪರಿಹಾರವಾಗಲಿ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್‌ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ…
ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9…
ಮೈಸೂರು: ನಟ ದರ್ಶನ್ ಅವರು ಮೈಸೂರಿನ ತಿ.ನರಸೀಪುರ ಮುಖ್ಯರಸ್ತೆಯಲ್ಲಿರುವ ಕೆಂಪಯ್ಯನಹುಂಡಿ ಬಳಿಯ ತಮ್ಮ ಫಾರ್ಮ್‌ಹೌಸ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ಇಲ್ಲಿಗ…