ಮೈಸೂರು: ಕಾರ್ಮಿಕ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ಕಾರ್ಮಿಕರ ರಾಜ್ಯ ವಿಮಾವ ಯೋಜನೆಯ ವೈದ್ಯಕೀಯ ಸೇವೆಗಳ ಇಲಾಖೆಯನ್ನು ಸರ್ಕಾರ ಸೊಸೈಟಿಯಾಗಿ ಪರಿವರ್ತಿಸಲು ಮುಂದಾಗಿರುವುದಕ್ಕೆ ನಮ್ಮ ವಿರೋಧವಿದೆ ಎಂದು ರಾಷ್ಟ್ರೀಯ ಮಜ್ದೂರ್ ಕಾಂಗ್ರೆಸ್‌ನ ಜಿಲ್ಲಾ ಸಂಘಟನಾ ಕಾರ್ಯದರ್ಶಿ ವಿ. ವೆಂಕಟೇಶ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿವಾದಾರರು ಮತ್ತು ಅವರ ಕುಟುಂಬದವರಿಗೆ ಉನ್ನತ ವೈದ್ಯಕೀಯ ಸೌಲಭ್ಯ ದೊರೆಯುವುದಿಲ್ಲ. ಜೊತೆಗೆ ಸಿಬ್ಬಂದಿ ಮತ್ತು ಅಧಿಕಾರಿ ವರ್ಗದ ಹಿತದೃಷ್ಟಿಯಿಂದ ಕೈಗೊಂಡಿರುವ ತೀರ್ಮಾನ ಸರಿಯಲ್ಲ. ಕಾರ್ಮಿಕರಿಂದ ವಾರ್ಷಿಕ 2,100 ಕೋಟಿ ರೂ., ಸಂಗ್ರಹಿಸಿ ಕಾರ್ಮಿಕರ ಮಾಸಿಕ ವಂತಿಕೆಯಿಂದ ನಡೆಯುವ ಇಲಾಖೆಯನ್ನು ಸೊಸೈಟಿಯನ್ನಾಗಿ ಮಾಡಿದಲ್ಲಿ ಪ್ರಮುಖ ಇಲಾಖೆಯೊಂದು ರಾಜ್ಯ ಸರ್ಕಾರದ ಕೈತಪ್ಪಿದಂತಾಗುತ್ತದೆ ಎಂದು ಬೇಸರಿಸಿದರು.
ಅಲ್ಲದೆ, ಆಂಧ್ರಪ್ರದೇಶ, ತಮಿಳುನಾಡು ಮತ್ತು ಕೇರಳ ರಾಜ್ಯಗಳು ಸೊಸೈಟಿ ಮಾಡುವ ಪ್ರಸ್ತಾವನೆಯನ್ನು ತಿರಸ್ಕರಿಸಿವೆ. ಹೀಗಾಗಿ ಈ ಪ್ರಸ್ತಾವನೆಯನ್ನು ಕೈ ಬಿಟ್ಟು ರಾಜ್ಯಸರ್ಕಾರದಡಿಯಲ್ಲಿಯೇ ಮುಂದುವರಿಸಬೇಕೆಂದು ಆಗ್ರಹಿಸಿದರು.
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೋರ್ಲತ್ತು ಬಳಿ ತಡರಾತ್ರಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 10ಕ್ಕೂ…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೋರ್ಲತ್ತು ಕ್ರಾಸ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 10ಕ್ಕೂ ಹೆಚ್ಚು ಮಂದಿ ಸಜೀವ…
ಜಾತಿ ವ್ಯವಸ್ಥೆಯು ಅಸಮಾನತೆಯನ್ನು ಸೃಷ್ಟಿ ಮಾಡಿದೆ. ಈ ಜಾತಿ ವ್ಯವಸ್ಥೆ ಈಗಲೂ ಜೀವಂತ ವಾಗಿದೆ ಎನ್ನುವುದಕ್ಕೆ ಬೇರೆ ಜಾತಿಯ ಹುಡುಗನನ್ನು…
೬೦ರ ದಶಕದ ಸಿನಿಮಾರಂಗ ಯಾವ ಗಲಾಟೆ ಇಲ್ಲದೆ ಸಾಗಿತ್ತು. ರಾಜಕುಮಾರ್ ಅವರ ಸಮಕಾಲಿನ ನಟರಾದ ಕಲ್ಯಾಣ್ ಕುಮಾರ್, ಶ್ರೀನಾಥ್, ನರಸಿಂಹರಾಜು,…
ನಾಡದೇವತೆಯಾದ ಶ್ರೀ ಚಾಮುಂಡೇಶ್ವರಿ ನೆಲೆಸಿರುವ ಬೆಟ್ಟವನ್ನು ಯಥಾಸ್ಥಿತಿಯಲ್ಲಿ ಇರುವಂತೆ ಉಳಿಸಿಕೊಳ್ಳುವುದು ಮೈಸೂರಿಗರ ಆದ್ಯ ಕರ್ತವ್ಯವಾಗಿದೆ. ಸಂರಕ್ಷಿತ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ…
ಚಿತ್ರದುರ್ಗದ ಪೇಟೆ ಬೀದಿಯ ಉಡುಗೊರೆ (ಗಿಫ್ಟ್) ಮಾರಾಟ ಮಳಿಗೆ ಮಕ್ಕಳು ಮತ್ತು ಪೋಷಕರಿಂದ ತುಂಬಿ ಹೋಗಿತ್ತು. ಅಲ್ಲಿದ್ದ ಹುಡುಗರನ್ನು ಏಕೆ…