ಮೈಸೂರು: ಮೈಸೂರು ವಿವಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಂಶೋಧನಾ ವಿದ್ಯಾರ್ಥಿಗಳ ಶಿಷ್ಯವೇತನವನ್ನು ಬಿಡುಗಡೆ ಮಾಡಬೇಕು ಎಂದು ಕರ್ನಾಟಕ ಪ್ರಜಾಪಾರ್ಟಿ(ರೈತಪರ್ವ) ರಾಜ್ಯಾಧ್ಯಕ್ಷ ಡಾ.ಬಿ.ಶಿವಣ್ಣ ಆಗ್ರಹಿಸಿದರು.
ಜಿಲ್ಲಾ ಪತ್ರಕರ್ತರ ಭವನದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸ್ತುತ ಸುವಾರು 250 ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಂಶೋಧನಾ(ಪಿಎಚ್.ಡಿ) ವಿದ್ಯಾರ್ಥಿಗಳಿದ್ದು, ಸಮಾಜ ಕಲ್ಯಾಣ ಇಲಾಖೆವತಿಯಿಂದ 2022-23 ನೇ ಸಾಲಿನ ಶಿಷ್ಯವೇತನಕ್ಕಾಗಿ ಸುಮಾರು 2.47 ಕೋಟಿ ರೂ. ಹಣ ಇಲಾಖೆ ವತಿಯಿಂದ ಬಿಡುಗಡೆಯಾಗಿದೆ. ಆದರೆ ವಿವಿಯವರು ಸಂಶೋಧನಾ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಹಣವನ್ನು ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡದೆ ಸಬೂಬು ಹೇಳಿ ಕಾಲಹರಣ ಮಾಡಿಕೊಂಡು ಬರುತ್ತಿದ್ದಾರೆ. ಕೂಡಲೇ ಶಿಷ್ಯವೇತನ ಬಿಡುಗಡೆ ಮಾಡದಿದ್ದರೆ ಪಕ್ಷದ ವತಿಯಿಂದ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ದಾವೆ ಹೂಡುವುದಾಗಿ ತಿಳಿಸಿದರು.
ಪಕ್ಷದ ಜಿಲ್ಲಾಧ್ಯಕ್ಷ ಕುಮಾರಸ್ವಾಮಿ, ಜಿಲ್ಲಾ ಅಲ್ಪಸಂಖ್ಯಾತರ ಕಾರ್ಯದರ್ಶಿ ಸ್ಟೀಫನ್ ಜೋಸೆಫ್, ಜಿಲ್ಲಾ ಕಾರ್ಮಿಕ ಘಟಕದ ಕಾರ್ಯದರ್ಶಿ ಮಂಜುನಾಥ್, ಎಚ್.ಡಿ.ಕೋಟೆ ತಾಲೂಕು ಹಂಪಾಪುರ ಹೋಬಳಿ ರೈತ ಘಟಕದ ಅಧ್ಯಕ್ಷ ಬೋರೇಗೌಡ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.
ಬೆಂಗಳೂರು : ಬಳ್ಳಾರಿಯಲ್ಲಿ ಗುರುವಾರ ರಾತ್ರಿ ವಾಲ್ಮೀಕಿ ಬ್ಯಾನರ್ ವಿಚಾರದಲ್ಲಿ ನಡೆದ ಎರಡು ಗುಂಪುಗಳ ಘರ್ಷಣೆ ವೇಳೆ ಫೈರಿಂಗ್ ಆಗಿ…
ಬೆಂಗಳೂರು : ಬಾಲಗಂಗಾಧರನಾಥ ಶ್ರೀಗಳ ಧಾರ್ಮಿಕ ಗದ್ದುಗೆ ಲೋಕಾರ್ಪಣೆ ಹಾಗೂ ಡಾ.ನಿರ್ಮಲಾನಂದನಾಥ ಶ್ರೀಗಳ ವಾರ್ಷಿಕ ಪಟ್ಟಾಭಿಷೇಕದಲ್ಲಿ ಭಾಗಿಯಾಗಲು ಪ್ರಧಾನಿ ನರೇಂದ್ರ…
ಬೆಂಗಳೂರು : ಎಲ್ಲಾ ಅಧಿಕಾರಿಗಳು ಜಾತ್ಯಾತೀತ ದೃಷ್ಠಿಕೋನದಿಂದ ಕಾರ್ಯ ನಿರ್ವಹಿಸಬೇಕು. ಆಗಮಾತ್ರ ಸಮಸಮಾಜ ನಿರ್ಮಾಣ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಬಳ್ಳಾರಿ : ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಶಾಸಕ ಜನಾರ್ದನ ರೆಡ್ಡಿ ಮನೆ ಬಳಿ ಗುರುವಾರ ಸಂಜೆ ನಡೆದ ಘರ್ಷಣೆ…
ಮಳೆಗಾಲದಲ್ಲಿ ಕೆರೆ ಕಟ್ಟೆಗಳು ತುಂಬಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅನಾಹುತಗಳೇ ಸೃಷ್ಟಿಯಾಗುತ್ತವೆ. ನಗರ ಪ್ರದೇಶಗಳಲ್ಲಿ ಇರುವ ಕೆರೆಗಳ ಹೂಳೆತ್ತಿ…
ಭ್ರಷ್ಟಾಚಾರವೇ ಇಲ್ಲದ ವ್ಯವಸ್ಥೆ ನಿರ್ಮಾಣ ಮಾಡುವುದು ಇನ್ನು ತುಂಬಾ ಕಷ್ಟಕರವಾದ ಕೆಲಸ ಎಂದು ನಿವೃತ್ತ ಲೋಕಾಯುಕ್ತ ನ್ಯಾಯ ಮೂರ್ತಿ ಎನ್.ಸಂತೋಷ್…