ಹನೂರು :ಸರಕು ಸಾಗಣೆ ವಾಹನ, ಗೂಡ್ಸ್ ಆಟೋಗಳಲ್ಲಿ ಮಲೆ ಮಾದೇಶ್ವರ ಬೆಟ್ಟಕ್ಕೆ ತೆರಳುವುದನ್ನು ನಿಷೇಧಿಸುವಂತೆ ಪ್ರಜ್ಞಾವಂತ ನಾಗರಿಕರು ಒತ್ತಾಯಿಸಿದ್ದಾರೆ.
ಜಿಲ್ಲಾಡಳಿತ ಈಗಾಗಲೇ ಸಂಚಾರ ದಟ್ಟಣೆ ಹಾಗೂ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಫೆ 17ರ ಬೆಳಗ್ಗೆ 6 ಗಂಟೆಯಿಂದ 21ರ ರಾತ್ರಿ 7:00ವರೆಗೆ ಮಲೆ ಮಹದೇಶ್ವರ ಬೆಟ್ಟಕ್ಕೆ ದ್ವಿಚಕ್ರ ವಾಹನಗಳನ್ನು ನಿಷೇಧ ಮಾಡಲಾಗಿದೆ. ಅದೇ ರೀತಿ ಸರಕು ಸಾಗಣೆ ವಾಹನಗಳಲ್ಲಿ ಯಥೇಚ್ಛವಾಗಿ ಭಕ್ತರ ಮಲೆ ಮಾದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದಾರೆ. ಗೂಡ್ಸ್ ವಾಹನಗಳಲ್ಲಿ ಚಾಲಕನಿಗೆ ಮಾತ್ರ ವಿಮೆ ಇರುವುದರಿಂದ ಯಾವುದಾದರೂ ಅನಾಹುತಗಳು ಸಂಭವಿಸಿದ್ದಲ್ಲಿ ಇತರರಿಗೆ ಯಾವುದೇ ವಿಮೆ ಇರುವುದಿಲ್ಲ, ಆದ್ದರಿಂದ ಜಿಲ್ಲಾಡಳಿತ ಭಕ್ತರ ಹಿತದೃಷ್ಟಿಯಿಂದ ಸರಕು ಸಾಗಣೆ ವಾಹನಗಳಲ್ಲಿ ಮಲೆ ಮಾದೇಶ್ವರ ಬೆಟ್ಟಕ್ಕೆ ತೆರಳುವುದನ್ನು ನಿಷೇಧಿಸುವಂತೆ ಪ್ರಜ್ಞಾವಂತ ನಾಗರಿಕರು ಆಗ್ರಹಿಸಿದ್ದಾರೆ.
ಮೂರು ಚಕ್ರದ ಆಟೋಗಳಲ್ಲಿ ಹೆಚ್ಚಿನ ಭಕ್ತರು ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದಾರೆ. ಜಾತ್ರಾ ಸಂದರ್ಭಗಳಲ್ಲಿ ಆಟೋ ಪಲ್ಟಿ ಯಾಗಿ ಹಲವು ಸಾವು ನೋವು ಆಗಿರುವುದರಿಂದ ಜಿಲ್ಲಾಡಳಿತ ಸರಕು ಸಾಗಣೆ ವಾಹನಗಳನ್ನು ನಿಷೇಧ ಮಾಡಬೇಕು ಎಂದು ಸ್ಥಳೀಯರಾದ ಚೇತನ್ ಒತ್ತಾಯಿಸಿದ್ದಾರೆ.
ಹೈದರಾಬಾದ್ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…
ಗ್ರಾಮಗಳಲ್ಲಿ ಉದ್ಯೋಗ ಸೃಷ್ಟಿ ಮಾಡಲಿ : ಖರ್ಗೆ ಬೆಂಗಳೂರು : ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ಮಹಾತ್ಮ ಗಾಂಧೀಜಿ ಅವರ…
ಮುಂಬೈ : ಸಾಲು ಸಾಲು ಸೋಲುಗಳಿಂದ ನೆಲಕಚ್ಚಿದ್ದ ಬಾಲಿವುಡ್ ಇಂಡಸ್ಟ್ರಿಯ ಭವಿಷ್ಯವನ್ನೇ ದುರಂದರ ಸಿನಿಮಾ ಬದಲಿಸಿದೆ. ರಣವೀರ್ ಸಿಂಗ್ ನಟನೆಯ…
ಗುಂಡ್ಲುಪೇಟೆ : ತಾಲ್ಲೂಕಿನ ಬಂಡೀಪುರ ಅರಣ್ಯ ಇಲಾಖೆಯ ಮರಳಳ್ಳ ಕ್ಯಾಂಪ್ ಬಳಿ ಕರ್ತವ್ಯ ನಿರ್ವಹಿಸುತಿದ್ದ ಸಣ್ಣಹೈದ( ೫೫) ಹುಲಿ ದಾಳಿಗೆ…
ಬೆಂಗಳೂರು : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾನುವಾರ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿರುವ ಏಷ್ಯಾದ ಅತಿದೊಡ್ಡ ನೌಕಾನೆಲೆ ಐಎನ್…
ಮಡಿಕೇರಿ : ಕೊಡಗು ಜಿಲ್ಲೆಯಾದ್ಯಂತ ನಡೆದ ಲೋಕ್ ಅದಾಲತ್‌ನಲ್ಲಿ ಒಟ್ಟು 14,850 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ,…