ಜಿಲ್ಲೆಗಳು

ಮಲೆ ಮಾದೇಶ್ವರ ಬೆಟ್ಟಕ್ಕೆ ಗೂಡ್ಸ್ ವಾಹನಗಳಲ್ಲಿ ಜನರ ಸಾಗಣೆ ನಿರ್ಬಂಧಕ್ಕೆ ಆಗ್ರಹ

ಹನೂರು :ಸರಕು ಸಾಗಣೆ ವಾಹನ, ಗೂಡ್ಸ್ ಆಟೋಗಳಲ್ಲಿ ಮಲೆ ಮಾದೇಶ್ವರ ಬೆಟ್ಟಕ್ಕೆ ತೆರಳುವುದನ್ನು ನಿಷೇಧಿಸುವಂತೆ ಪ್ರಜ್ಞಾವಂತ ನಾಗರಿಕರು ಒತ್ತಾಯಿಸಿದ್ದಾರೆ.

ಜಿಲ್ಲಾಡಳಿತ ಈಗಾಗಲೇ ಸಂಚಾರ ದಟ್ಟಣೆ ಹಾಗೂ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಫೆ 17ರ ಬೆಳಗ್ಗೆ 6 ಗಂಟೆಯಿಂದ 21ರ ರಾತ್ರಿ 7:00ವರೆಗೆ ಮಲೆ ಮಹದೇಶ್ವರ ಬೆಟ್ಟಕ್ಕೆ ದ್ವಿಚಕ್ರ ವಾಹನಗಳನ್ನು ನಿಷೇಧ ಮಾಡಲಾಗಿದೆ. ಅದೇ ರೀತಿ ಸರಕು ಸಾಗಣೆ ವಾಹನಗಳಲ್ಲಿ ಯಥೇಚ್ಛವಾಗಿ ಭಕ್ತರ ಮಲೆ ಮಾದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದಾರೆ. ಗೂಡ್ಸ್ ವಾಹನಗಳಲ್ಲಿ ಚಾಲಕನಿಗೆ ಮಾತ್ರ ವಿಮೆ ಇರುವುದರಿಂದ ಯಾವುದಾದರೂ ಅನಾಹುತಗಳು ಸಂಭವಿಸಿದ್ದಲ್ಲಿ ಇತರರಿಗೆ ಯಾವುದೇ ವಿಮೆ ಇರುವುದಿಲ್ಲ, ಆದ್ದರಿಂದ ಜಿಲ್ಲಾಡಳಿತ ಭಕ್ತರ ಹಿತದೃಷ್ಟಿಯಿಂದ ಸರಕು ಸಾಗಣೆ ವಾಹನಗಳಲ್ಲಿ ಮಲೆ ಮಾದೇಶ್ವರ ಬೆಟ್ಟಕ್ಕೆ ತೆರಳುವುದನ್ನು ನಿಷೇಧಿಸುವಂತೆ ಪ್ರಜ್ಞಾವಂತ ನಾಗರಿಕರು ಆಗ್ರಹಿಸಿದ್ದಾರೆ.

ಮೂರು ಚಕ್ರದ ಆಟೋಗಳಲ್ಲಿ ಹೆಚ್ಚಿನ ಭಕ್ತರು ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದಾರೆ. ಜಾತ್ರಾ ಸಂದರ್ಭಗಳಲ್ಲಿ ಆಟೋ ಪಲ್ಟಿ ಯಾಗಿ ಹಲವು ಸಾವು ನೋವು ಆಗಿರುವುದರಿಂದ ಜಿಲ್ಲಾಡಳಿತ ಸರಕು ಸಾಗಣೆ ವಾಹನಗಳನ್ನು ನಿಷೇಧ ಮಾಡಬೇಕು ಎಂದು ಸ್ಥಳೀಯರಾದ ಚೇತನ್ ಒತ್ತಾಯಿಸಿದ್ದಾರೆ.

andolanait

Recent Posts

ಓದುಗರ ಪತ್ರ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಸ್ವಾಗತಾರ್ಹ

ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…

3 hours ago

ಓದುಗರ ಪತ್ರ: ನಿಜವಾದ ಭಾವೈಕ್ಯತೆಯ ಸಂಗಮ

ಮಂಡ್ಯ ಜಿಯ ಮದ್ದೂರಿನಲ್ಲಿ ಭಾನುವಾರ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಗೌರಿ -ಗಣೇಶ ಮೂರ್ತಿಗಳನ್ನು ಹೊತ್ತ ಟ್ರ್ಯಾಕ್ಟರ್…

3 hours ago

ಓದುಗರ ಪತ್ರ: ನಾಡಿಗೆ ಮಾದರಿ!

ನಾಡಿಗೆ ಮಾದರಿ! ವಿವಿಧ ಧರ್ಮ ಸಮುದಾಯಗಳ ಮನಸುಗಳ ಅಕ್ಕರೆಯಲಿ ಬೆಸೆವ ಸ್ನೇಹ ಸೌಹಾರ್ದ ಸಾಮರಸ್ಯದ ಪ್ರತೀಕ, ಹಬ್ಬ ಉತ್ಸವಗಳು! ನಾಡಿಗೆ…

3 hours ago

ಓದುಗರ ಪತ್ರ: ಪ್ರೀತಿಯ ಅಣ್ಣ ಪ್ರತಾಪ್ ಸಿಂಹ…

ನಾವಿಬ್ಬರು ಪ್ರೊ. ಬಿ. ಪಿ. ಮಹೇಶ್ ಚಂದ್ರ ಗುರುಗಳ ಶಿಷ್ಯರು. ನಮ್ಮಿಬ್ಬರಿಗೂ ಪ್ರೊ. ಗುರು ಇಷ್ಟ. ನೀನು ಮಂಗಳೂರು ವಿವಿ,…

3 hours ago

ದಸರಾ ಬರುತ್ತಿದೆ, ಮೈಸೂರು ಸಿದ್ಧವಾಗುತ್ತಿದೆಯೇ?

ಶ್ರೇಯಸ್ ದೇವನೂರು ಅಭಿವೃದ್ಧಿಯ ಹೆಸರಿನಲ್ಲಿ ಅರ್ಧ ಕಾಮಗಾರಿ, ಸಂಚಾರದ ಹೆಸರಿನಲ್ಲಿ ಹೆಚ್ಚುತ್ತಿರುವ ಸಂಕಷ್ಟ  ಮೈಸೂರು ದಸರಾ ಎಂದರೆ ಕೇವಲ ಹತ್ತು…

3 hours ago

ಫಾಲ್ಕೆ ಪ್ರಶಸ್ತಿ ಕಲಾಸೇವೆಗೆ ಸಂದ ಗೌರವ: ಅನಂತ್ ನಾಗ್‌

ಸಂದರ್ಶನ: ಬಾನಾಸು  ಇಂದು ಗುಜರಾತಿನ ಕೆವಾಡಿಯಾದಲ್ಲಿ ೭೨ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ನಡೆಯಲಿದೆ. ಚಿತ್ರರಂಗಕ್ಕೆ ಸಲ್ಲಿಸಿದ ಅಮೋಘ ಸೇವೆಗಾಗಿ…

3 hours ago