ಜಿಲ್ಲೆಗಳು

ಪ್ರಜಾಪ್ರಭುತ್ವಕ್ಕಾಗಿ ಒಂದು ಗಂಟೆ..

22, 23ರಂದು ಮತದಾರರ ನೋಂದಣಿಗೆ ಕಾಲೇಜುಗಳಲ್ಲಿ ವಿಶೇಷ ಕಾರ್ಯಕ್ರಮ

ಮೈಸೂರು: ಯುವ ಮತದಾರರ ನೋಂದಣಿ ಪ್ರಮಾಣವನ್ನು ಹೆಚ್ಚಿಸುವ ಸಂಬಂಧ ನವೆಂಬರ್ 22 ಹಾಗೂ 23 ರಂದು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಅರ್ಹ ಯುವ ಮತದಾರರ ನೋಂದಣಿ ಮಾಡಿಸಲು ‘ ‘ ‘ಪ್ರಜಾಪ್ರಭುತ್ವಕ್ಕಾಗಿ ಒಂದು ಯುವ ಮತದಾರರ ನೋಂದಣಿಗೆ ವಿಶೇಷ ಅಭಿಯಾನ ‘ ಕೈಗೊಳ್ಳಲಾಗಿದೆ ಎಂದು ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದರು.

ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮತದಾರರ ನೋಂದಣಿಗೆ ಸಂಬಂಧಿಸಿದಂತೆ ಪದವಿ ಪೂರ್ವ ಹಾಗೂ ಕಾಲೇಜು ಶಿಕ್ಷಣ ಇಲಾಖೆಯ ಅಧೀನದಲ್ಲಿ ಬರುವ ಸರ್ಕಾರಿ ಹಾಗೂ ಖಾಸಗಿ ಕಾಲೇಜುಗಳ ಪ್ರಾಂಶುಪಾಲರುಗಳು ಹಾಗೂ ನೇಮಕಗೊಂಡ ನೋಡಲ್ ಅಧಿಕಾರಿಗಳಿಗೆ ತರಬೇತಿ ನೀಡುವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಭಾರತ ಚುನಾವಣಾ ಆಯೋಗದ ಸೂಚನೆಯಂತೆ ಯುವ ಮತದಾರರ ನೋಂದಣಿಯಾಗಿರುವ ಪ್ರಮಾಣ ಮೈಸೂರು ಜಿಲ್ಲೆಯಲ್ಲಿ ಕಡಿಮೆ ಇರುವ ಹಿನ್ನೆಲೆಯಲ್ಲಿ ಅರ್ಹ ಯುವ ಮತದಾರರ ನೋಂದಣಿಯನ್ನು ಹೆಚ್ಚಿಸಲು ಹಾಗೂ ಯುವ ಮತದಾರರು ಮತದಾರರ ಪಟ್ಟಿಯಲ್ಲಿ ಕೈ ಬಿಟ್ಟು ಹೋಗದಂತೆ ಕ್ರಮ ವಹಿಸಬೇಕಾಗಿರುತ್ತದೆ. ಈ ಸಂಬಂಧ ಹೆಚ್ಚಿನ ಆದ್ಯತೆ ನೀಡುವ ಅವಶ್ಯಕತೆ ಇರುತ್ತದೆ ಎಂದು ಅವರು ತಿಳಿಸಿದರು.

ಜಿಲ್ಲೆಯ ಪದವಿ ಪೂರ್ವ ಮಟ್ಟದ ಎಲ್ಲಾ ಕಾಲೇಜುಗಳಲ್ಲಿ, ಎಲ್ಲಾ ವೈದ್ಯಕೀಯ ಶಿಕ್ಷಣ ಕಾಲೇಜುಗಳಲ್ಲಿ, ಡೆಂಟಲ್ ಕಾಲೇಜು, ಆಯುರ್ವೇದ ಕಾಲೇಜು, ನರ್ಸಿಂಗ್ ಕಾಲೇಜು, ಇಂಜಿನಿಯರಿಂಗ್ ಹಾಗೂ ಡಿಪ್ಲೋಮಾ ಕಾಲೇಜು ಹಾಗೂ ಇಲಾಖೆಯ ಎಲ್ಲಾ ಹಾಸ್ಟೆಲ್‌ಗಳ ಮೂಲಕ ಅರ್ಹ ಯುವ ಮತದಾರರ ನೋಂದಣಿಗೆ ಮತ್ತು ಮಾನ್ಯ ಭಾರತ ಚುನಾವಣಾ ಆಯೋಗವು ಕಲ್ಪಿಸಿರುವ ಅವಕಾಶದಂತೆ 17+ ವಯಸ್ಸಿನ ಯುವಕರಿಗೆ ಮುಂಗಡ ಅರ್ಜಿ ಸಲ್ಲಿಸಲು ಕಲ್ಪಸಿರುವ ಸೌಲಭ್ಯದಂತೆ ನೋಂದಣಿ ಮಾಡಿಸಲು ಪ್ರಜಾ ಪ್ರಭುತ್ವಕ್ಕಾಗಿ ಒಂದು ಗಂಟೆ ವಿಶೇಷ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ಈ ಸಂಬಂಧ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಯುವ ಮತದಾರರು ತಮ್ಮು ನೋಂದಣಿ ಮಾಡಿಕೊಳ್ಳಲು ಮೊಬೈಲ್‌ಗಳಲ್ಲಿ ವೋಟರ್ಸ್ ಹೆಲ್ಪ್ಲೈನ್ ಆಪ್ (VHA) ಮೂಲಕ ಹೆಸರನ್ನು ನೋಂದಾಯಿಸಿಕೊಳ್ಳಲು ಅವಕಾಶವಿರುತ್ತದೆ. ಈ ಸೌಲಭ್ಯವನ್ನು ಯುವ ಮತದಾರರು ಸದುಪಯೋಗ ಪಡಿಸಿಕೊಳ್ಳಬೇಕೆಂದು ಹಾಗೂ ವಿಶೇಷ ಅಭೀಯಾನವನ್ನು ಯಶಸ್ವಿಗೊಳಿಸಬೇಕೆಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಡಾ. ಮಂಜುನಾಥಸ್ವಾಮಿ, ಚುನಾವಣಾ ತಹಶೀಲ್ದಾರ್ ರಾಮ್‌ಪ್ರಸಾದ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

andolanait

Recent Posts

ಯುಜಿಡಿ ಸಮಸ್ಯೆ ಶಾಶ್ವತ ಪರಿಹಾರಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ

ಕೆ.ಬಿ.ರಮೇಶ ನಾಯಕ ಮುಖ್ಯಮಂತ್ರಿ ಸಿದ್ದರಾಮಯ್ಯ ಎದುರು ಹಲವು ಯೋಜನೆಗಳನ್ನು ಪ್ರಸ್ತಾಪಿಸಿದ ಡಿಸಿ ಮೈಸೂರು: ಬೆಂಗಳೂರು ಬಳಿಕ ವೇಗವಾಗಿ ಬೆಳೆಯುತ್ತಿರುವ ಸಾಂಸ್ಕೃತಿಕ…

7 mins ago

ಉಪಸಭಾಪತಿಗೆ ಚಿತ್ರಹಿಂಸೆ ಆರೋಪ : ಐಪಿಎಸ್‌ ಅಧಿಕಾರಿ ಬಂಧನ

ಅಮರಾವತಿ : ಹಿಂದಿನ ವೈಎಸ್‍ಆರ್‍ಸಿಪಿ ಆಡಳಿತದ ಅವಧಿಯಲ್ಲಿ ಆಂಧ್ರ ವಿಧಾನಸಭೆಯ ಪ್ರಸ್ತುತ ಉಪಸಭಾಪತಿ ಕೆ. ರಘುರಾಮ ಕೃಷ್ಣ ರಾಜು ಅವರ…

9 hours ago

ಮಾರ್ಚ್‌ 11ರಿಂದ ವೈದ್ಯಾಧಿಕಾರಿಗಳ ಮುಷ್ಕರ : ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ

ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್ 11ರಿಂದ…

9 hours ago

ಟ್ರಂಪ್‌ ಜಾಗತಿಕ ಸುಂಕ ರದ್ದು : ವರದಿ

ವಾಷಿಂಗ್ಟನ್ : ಕಾನೂನುಬಾಹಿರವಾಗಿ ಟ್ರಂಪ್ ವಿಧಿಸಿದ್ದ ಆಮದು ಸುಂಕ ಸಂಗ್ರಹವನ್ನ ಅಮೆರಿಕ ನಿಲ್ಲಿಸಲಿದೆ ಎಂದು ಯುಎಸ್ ಕಸ್ಟಮ್ಸ್ ಮತ್ತು ಗಡಿ…

10 hours ago

ಸಫಾರಿ ಆದಾಯದ ಶೇ.35 ಭಾಗ ಕಾಡಿನಂಚಿನ ಜನಕಲ್ಯಾಣಕ್ಕೆ ಬಳಕೆ : ಖಂಡ್ರೆ

ಬೆಂಗಳೂರು : ಸಫಾರಿಯಿಂದ ಬರುವ ಆದಾಯದಲ್ಲಿ ಶೇ.35ರಷ್ಟನ್ನು ಕಾಡಿನಂಚಿನ ಗ್ರಾಮದ ಜನರ ಕಲ್ಯಾಣಕ್ಕಾಗಿ ಬಳಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಗ್ರಾಮಗಳಲ್ಲಿ…

10 hours ago

ವನ್ಯಜೀವಿ ಸಂಚಾರ | ಕಾಡಂಚಿನ ಗ್ರಾಮದ ಮುಖಂಡರಿಗೆ ಮಾಹಿತಿ ರವಾನಿಸಲು ಖಂಡ್ರೆ ಸೂಚನೆ

ಬೆಂಗಳೂರು : ಅರಣ್ಯದಂಚಿನ ಜಮೀನುಗಳಲ್ಲಿ ವನ್ಯಜೀವಿಗಳ ಸಂಚಾರದ ಬಗ್ಗೆ ಕಮಾಂಡ್ ಕೇಂದ್ರಕ್ಕೆ ಮಾಹಿತಿ ಬಂದ ಕೂಡಲೇ ತೋಟದ ಬೆಳೆಗಾರರ ಸಂಘಟನೆ…

10 hours ago