ಮೈಸೂರು : ಕರ್ನಾಟಕ ಲೋಕಸಭಾ ಸಾರ್ವತ್ರಿಕ ಚುನಾವಣೆ – 2024 ಪ್ರಯುಕ್ತ ಭಾರತ ಚುನಾವಣಾ ಆಯೋಗ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಳ ಕಚೇರಿ ವತಿಯಿಂದ ವಿದ್ಯುನ್ಮಾನ ಮತ ಯಂತ್ರಗಳ ಪ್ರಾತ್ಯಕ್ಷಿಕೆಗೆ ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರು ಚಾಲನೆ ನೀಡಿದರು.
ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ವಿದ್ಯುನ್ಮಾನ ಮತಯಂತ್ರ (ಇವಿಎಂ) ಬಳಕೆ ಹಾಗೂ ಮತದಾನ ಖಾತ್ರಿ ಯಂತ್ರ (ವಿ.ವಿ. ಪ್ಯಾಟ್) ಕಾರ್ಯವೈಖರಿ ಕುರಿತಂತೆ ಪ್ರಾತ್ಯಕ್ಷಿಕೆಯನ್ನು ಸಾರ್ವಜನಿಕರಿಗೆ ನಡೆಸಲಾಯಿತು.
ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಮಾತನಾಡಿ, ‘ಚುನಾವಣಾ ಪ್ರಕ್ರಿಯೆ ವಿಷಯದಲ್ಲಿ ವಿಶ್ವಾಸ ಮೂಡಿಸಲು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಜಿಲ್ಲೆಯಾದ್ಯಂತ ಈ ಕಾರ್ಯ ನಡೆಯಲಿದೆ.
ಮತದಾರರು ಪಾಲ್ಗೊಂಡು ಅಣಕು ಮತದಾನ ಮಾಡಿ, ಇವಿಎಂ ಯಂತ್ರದಲ್ಲಿ ಮತ ಚಲಾಯಿಸುವ ಹಾಗೂ ಮತದಾನ ಖಾತ್ರಿ ಮಾಡಿಕೊಳ್ಳುವ ಬಗ್ಗೆ ಖುದ್ದು ಮನವರಿಕೆ ಮಾಡಿಕೊಳ್ಳಬಹುದಾಗಿದೆ ಎಂದರು.
ಈ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಟಿ.ಕೆ.ಹರೀಶ್, ಚುನಾವಣಾ ಶಿರಸ್ತೇದಾರ್ ಸುರೇಶ್ ಹಾಗೂ ಚುನಾವಣಾ ಶಾಖೆಯ ಸಿಬ್ಬಂದಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…